ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಬಸವಸಾಗರದ ಸ್ಕಾಡಾ ಗೇಟ್ ಗಳಿಗೆ ಚಾಲನೆ ನೀಡಿದ ಮೋದಿ

ಯಾದಗಿರಿ,ಜನವರಿ19: ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕೊಡೆಕಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಬಸವಸಾಗರದ ಸ್ಕಾಡಾ ಗೇಟ್ ಗಳಿಗೆ ಚಾಲನೆ ನೀಡಿದರು.

ಕೊಡೆಕಲ್ ನಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಬಸವಸಾಗರದ ಸ್ಕಾಡಾ ಗೇಟ್ ಗಳಿಗೆ ಚಾಲನೆ ನೀಡಿದರು . 1050 ಕೋಟಿ ವೆಚ್ಚದಲ್ಲಿ ಸ್ಕಾಡಾ ಗೇಟ್ ಗಳನ್ನ ನಿರ್ಮಾಣ ಮಾಡಲಾಗಿದ್ದು ನಾರಾಯಣಪುರ ಎಡದಂಡೆ ಕಾಲುವೆಗಳಿಗೆ ಗೇಟ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈ ಗೇಟ್ ಗಳು ಅತ್ಯಾದುನಿಕ ತಂತ್ರಜ್ಞಾನದಿಂದ ಕೂಡಿದೆ. 4.5ಹೆಕ್ಟೆರ್ ಪ್ರದೇಶಕ್ಕೆ ನೀರು ತಲುಪಿಸುವ ಯೋಜನೆ ಇದಾಗಿದೆ.

ಇನ್ನೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಕರ್ನಾಟಕದಲ್ಲಿ ಎಲ್ಲ ಸಹೋದರ, ಸಹೋದರಿಯರಿಗೆ ನನ್ನ ವಂದನೆಗಳು ಎಂದು ಕೈ ಮುಗಿದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ನಾವು ಅಭಿವೃದ್ಧಿಯ ಮೂಲಕ ಜನರ ವೋಟ್ ಬ್ಯಾಂಕ್ ನೋಡುತ್ತೇವೆ ಎಂದರು

Narendra Modi Aunched Multi Village Drinking Water Project

ಕರ್ನಾಟಕದ ವಿಕಾಸಕ್ಕಾಗಿ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಯೋಜನೆಗೆ ಶಿಲಾನ್ಯಾಸ, ಶಂಕುಸ್ಥಾಪನೆಗೆ ಬಂದಿದ್ದೇನೆ. ಈ ಯೋಜನೆಯಿಂದ ಯಾದಗಿರಿ, ಕಲಬುರಗಿ, ವಿಜಯಪುರ, ರಾಯಚೂರು ಜಿಲ್ಲೆಗಳ ಜನತೆಗೆ ನೀರಾವರಿ, ಕುಡಿಯುವ ನೀರಿಗೆ ಸಾಕಷ್ಟು ಉಪಯೋಗವಾಗಲಿದೆ. ಜನರ ಜೀವನ ಮಟ್ಟ ಸುಧಾರಿಸಲಿದೆ, ಉದ್ಯೋಗ ಪ್ರಮಾಣ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಯಾದಗಿರಿ ಜಿಲ್ಲೆಗಳ ವಿಕಾಸವಾಗಲಿದೆ ಎಂದು ಮೋದಿ ಹೇಳಿದ್ದಾರೆ.

Narendra Modi Aunched Multi Village Drinking Water Project

ಭಾರತ ಇಂದು ಎಲ್ಲಾ ರಂಗಗಳಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ಮುಂದಿನ 25 ವರ್ಷಗಳಲ್ಲಿ ಭಾರತ ಅಮೃತ ಸಮಯವನ್ನು ಕಾಣಲಿದೆ. ಕರ್ನಾಟಕದ ಕೊಡುಗೆಯೂ ಅದರಲ್ಲಿ ಸಾಕಷ್ಟಿದೆ. ಇದಕ್ಕೆ ನಾವೆಲ್ಲರೂ ಒಗ್ಗೂಡಿ ಮಾಡಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+