ಕರ್ನಾಟಕದಲ್ಲಿ ನರೇಂದ್ರ ಮೋದಿ, ಕಾರ್ಯಕ್ರಮಗಳು

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 29 : ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಒಂದು ದಿನದ ಪ್ರವಾಸದಲ್ಲಿ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಧರ್ಮಸ್ಥಳ: ಪ್ರಧಾನಿ ಮೋದಿ ಆಗಮನಕ್ಕೆ ರೆಡ್ ಕಾರ್ಪೆಟ್

ಧರ್ಮಸ್ಥಳ, ಬೆಂಗಳೂರು, ಬೀದರ್‌ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೋದಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ನಂತರ ಬೆಂಗಳೂರು, ಬೀದರ್‌ಗೆ ಭೇಟಿ ನೀಡಲಿದ್ದಾರೆ.

ಮೋದಿ ಕಾರ್ಯಕ್ರಮಗಳಿಗೆ ಸಿದ್ದರಾಮಯ್ಯ ಗೈರು

ಮೊದಲು ಧರ್ಮಸ್ಥಳಕ್ಕೆ ಆಗಮಿಸುವ ಮೋದಿ ನಂತರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಬೀದರ್‌ಗೆ ತೆರಳಲಿದ್ದು ಅಲ್ಲಿ ಬೀದರ್-ಕಲಬುರಗಿ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಮೋದಿ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ.

ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಸ್‌ಪಿಜಿ, ಸ್ಥಳೀಯ ಪೊಲೀಸ್, ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ತನಕ ಧರ್ಮಸ್ಥಳದ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಬೀದರ್‌ಗೆ ಭೇಟಿ ನೀಡುವ ಮೋದಿ ಹೈದರಾಬಾದ್ ಕರ್ನಾಟಕ ಭಾಗದ ಜನರ ಮೂರು ದಶಕಗಳ ಕನಸನ್ನು ನನಸು ಮಾಡುತ್ತಿದ್ದಾರೆ. ಕಲಬುರಗಿ-ಬೀದರ್ ನಡುವಿನ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ.

ಕಲಬುರಗಿ-ಬೀದರ್ ರೈಲು ಮಾರ್ಗದ ವಿಶೇಷತೆಗಳು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
PM Narendra Modi will visit Karnataka today. Narendra Modi programs in Karnataka on October 29, 2017, Sunday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ