ಪೊಲೀಸರ ಬಲವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ: ಅಮಿತ್ ಶಾ

ಬೆಂಗಳೂರು ಗ್ರಾಮಾಂತರ,ಡಿಸೆಂಬರ್ 31: ಪೊಲೀಸರ ಬಲವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹೇಳಿದ್ದಾರೆ.

ದೇವನಹಳ್ಳಿಯಲ್ಲಿ ಐಟಿಪಿಬಿ ಕಟ್ಟಡ ಉದ್ಘಾಟನೆ ಮಾಡಿ 2023 ರ ಹೊಸ ವರ್ಷದ ಶುಭಾಶಯಗಳ ತಿಳಿಸುವುದರೊಂದಿಗೆ ಭಾಷಣ ಪ್ರಾರಂಭಿಸಿದ ಅವರು, ಪೊಲೀಸ್ ವ್ಯವಸ್ಥೆ ಸುಧಾರಣೆಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತದೆ ಕೇಂದ್ರ ಗುಪ್ತಚರ ಸಂಸ್ಥೆಗೆ ಭೂಮಿ ಪೂಜೆ ಮಾಡಲಾಗಿದೆ. ಸಿಎಂ ಬೊಮ್ಮಾಯಿಗೆ ಧನ್ಯವಾದ ಅರ್ಪಿಸುತ್ತೇನೆ. ಕೇಂದ್ರ ಸರ್ಕಾರದಿಂದ 2 ಉತ್ತಮ ಯೋಜನೆಗಳು ಆರಂಭವಾಗಿದೆ. ಬಿಪಿಆರ್ ಎನ್ ಡಿ ಪೊಲೀಸ್ ವ್ಯವಸ್ಥೆಗೆ ಬಲ ನೀಡುವ ಸಂಸ್ಥೆ. ಬಿಪಿಆರ್ ಎನ್ ಡಿಗೆ ಸಿಗಬೇಕಿದ್ದ ಯಶಸ್ಸು ಸರಿಯಾಗಿ ಸಿಗಲಿಲ್ಲ. ಬದಲಾವಣೆಯನ್ನ ಸ್ವೀಕರಿಸಿ ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಪೊಲೀಸರ ಬಲವರ್ದನೆಗೆ ಮೋದಿ ಸರ್ಕಾರ ನಿರ್ಧಾರ ಮಾಡಿದೆ ಎಂದರು.

ಭಯೋತ್ಪಾದನೆ,ಗಡಿ ವ್ಯಾಜ್ಯಗಳು ಸೇರಿದಂತೆ ದೇಶದ ಹಲವು ಸವಾಲುಗಳಿಗೆ ಸಮಂಜಸ ಪರಿಹಾರ ಕಂಡುಕೊಳ್ಳುವುದು.ದೇಶದ ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವುದು ಸೇರಿದಂತೆ ಎಲ್ಲ ಪೊಲೀಸ್ ವಿವಿಧ ದಳಗಳ ನಡುವೆ ಸಮನ್ವಯ ಸಾಧಿಸಿ,ಸಂವಾದ ನಡೆಸಿ ಭದ್ರತೆ ಹೆಚ್ಚಿಸಲು ಪೊಲೀಸ್ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ಕೇಂದ್ರ ಗುಪ್ತಚರ ಸಂಸ್ಥೆಯ ತರಬೇತಿ ಶಾಲೆಯು ಮಹತ್ವದ ವೇದಿಕೆಯಾಗಲಿದೆ.ಗಡಿ ಸುರಕ್ಷಾ ದಳಗಳಲ್ಲಿ ಸೇವೆ ನೀಡುವ ಯೋಧರು ಕೇಂದ್ರಸ್ಥಾನಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ವಸತಿ ಸೌಕರ್ಯ ಹೆಚ್ಚಿಸಲಾಗುವುದು ಎಂದು ಅಮಿತ್ ಷಾ ಹೇಳಿದರು.

Narendra Modis Governments Decision To Strengthening Of Police Said Amit Shah

ಕೇಂದ್ರೀಯ ಗುಪ್ತಚರ ತರಬೇತಿ ಸಂಸ್ಥೆಯ ಕಟ್ಟಡಕ್ಕೆ ರಾಜ್ಯ ಸರ್ಕಾರ ಉತ್ತಮ ಪರಿಸರದಲ್ಲಿ ನಿವೇಶನ ಒದಗಿಸಿದೆ‌.ಮುಂಬರುವ ದಿನಗಳಲ್ಲಿ ಬಹಳ ದೇಶದ ಪೊಲೀಸ್ ವ್ಯವಸ್ಥೆಗೆ ಬಹಳ ಪ್ರಯೋಜನಕಾರಿಯಾಗಲಿದೆ. ವಿವಿಧ ಪೊಲೀಸ್ ದಳಗಳನ್ನು ಬಲಪಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ.ಸಮಾಜವು ಚಲನಶೀಲವಾಗಿರುತ್ತದೆ ಅದರ ವಿಚಾರ,ಗಮನ,ಧೋರಣೆ,ಸ್ವರೂಪಗಳು ಹಾಗೂ ಪಥ ಬದಲಾಗುತ್ತಿರುತ್ತವೆ.ಅದಕ್ಕೆ ಅನುಗುಣವಾಗಿ ಪೊಲೀಸ್ ಬಲಗಳೂ ಕೂಡ ಬದಲಾವಣೆಗಳನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗುತ್ತವೆ.ಸಂಶೋಧನೆ ಆಧರಿಸಿ,ಸುರಕ್ಷತಾ ತಂತ್ರಗಳು,ರಣನೀತಿ ರೂಪಿಸಿಕೊಳ್ಳುವುದು ಮಹತ್ವ ಪೂರ್ಣವಾಗಿರುತ್ತದೆ. ವಿವಿಧ ಪೊಲೀಸ್ ಸಂಸ್ಥೆಗಳ ನಡುವೆ ಸಹಯೋಗ ತರುವುದು ಮಹತ್ವ ಪೂರ್ಣ ಕಾರ್ಯವಾಗಿದೆ. ಹೊಸ ಕಲಿಕೆ,ಸವಾಲುಗಳ ವಿನಿಮಯದೊಂದಿಗೆ ಎಲ್ಲ ಪೊಲೀಸ್ ದಳಗಳು ಪರಿಪೂರ್ಣವಾಗಲು ಸಾಧ್ಯ ಎಂದರು.

ಭಾರತದಂತಹ ದೊಡ್ಡ ದೇಶದಲ್ಲಿ ಹಲವು ಸಂಸ್ಕೃತಿ, ಆಚರಣೆಗಳಿವೆ ಅದಕ್ಕೆ ಅನುಗುಣವಾಗಿ ದೇಶದ ಆಂತರಿಕ ಕಾನೂನು ಮತ್ತು ಸುವ್ಯವಸ್ಥೆ ವಿಷಯವನ್ನು ಸಂವಿಧಾನದ ರಾಜ್ಯಪಟ್ಟಿಯಲ್ಲಿರಿಸಲಾಗಿದೆ. ಕಾಲಾಂತರದಲ್ಲಿ ಹೆಚ್ಚಿದ ಭಯೋತ್ಪಾದನೆ,ಆತಂಕವಾದ,ಗಡಿ ವಿವಾದಗಳು ಹೊಸ ಸವಾಲುಗಳನ್ನು ಒಡ್ಡಿವೆ. ಬಿಪಿಆರ್ ಆ್ಯಂಡ್ ಡಿ ಇಂತಹ ಸವಾಲುಗಳಿಗೆ ಪರಿಹಾರ ಅನ್ವೇಷಿಸುತ್ತದೆ.ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ.ದೇಶದ ಮಹಾನಗರಗಳಲ್ಲಿ ಬಹು ಭಾಷಿಕರು ನೆಲೆಸುತ್ತಿದ್ದಾರೆ ಬರುವ ದಿನಗಳಲ್ಲಿ ಅಲ್ಲಿನ ಪೊಲೀಸ್ ಕಾರ್ಯವೈಖರಿಗೆ ಅದು ಸವಾಲಾಗುತ್ತದೆ.ಮಹಾನಗರಗಳ ಸುರಕ್ಷತೆಗೂ ಸಂಶೋಧನೆ,ಅಧ್ಯಯನಗಳು ಇಲ್ಲಿ ನಡೆಯಲಿವೆ ಎಂದರು.

ಕಲ್ಕತ್ತಾ,ಹೈದರಾಬಾದ್,ಗಾಜಿಯಾಬಾದ್,ರಾಜಸ್ಥಾನ ಮತ್ತಿತರ ಕಡೆಗಳಲ್ಲಿರುವ ಸಿಡಿಐಟಿ ಸಂಸ್ಥೆಯು ಉತ್ತಮ ಕೊಡುಗೆಗಳನ್ನು ನೀಡುತ್ತಿವೆ.ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುವ ಅಧ್ಯಯನಗಳು ಕರ್ನಾಟಕ ಹಾಗೂ ನೆರೆಯ ರಾಜ್ಯಗಳ ಪೊಲೀಸ್ ತನಿಖೆಗಳಿಗೆ ನೆರವಾಗಲಿವೆ.ಬಿಪಿಆರ್ ಮತ್ತು ಡಿ ಸಂಸ್ಥೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಯೋಗ ,ಪ್ರೋತ್ಸಾಹ ನೀಡಲಿದೆ ಎಂದು ಭರವಸೆ ನೀಡಿದರು.

ದೇಶದ ಗಡಿರಕ್ಷಣೆಗೆ ಹಗಲಿರುಳು ದುಡಿಯುತ್ತಿರುವ ಸೈನಿಕರು ತಮ್ಮ ಕುಟುಂಬಗಳೊಂದಿಗೆ ನೆಮ್ಮದಿಯ ಬದುಕು ನಡೆಸುವಂತಾಗಲು ಗಡಿ ಸುರಕ್ಷಾ ದಳಗಳ ಕೇಂದ್ರ ಸ್ಥಾನಗಳಲ್ಲಿ ವಸತಿ ನಿರ್ಮಾಣ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆದ್ಯತೆ ನೀಡಿದ್ದಾರೆ. ಇ-ಆವಾಸ್ ಪೋರ್ಟಲ್ ಮೂಲಕ ವಸತಿ ಸೌಕರ್ಯಗಳ ಸುಧಾರಣೆಯಾಗುತ್ತಿವೆ.ದೇಶದ ಗಡಿ ಸುರಕ್ಷಾ ದಳಗಳಲ್ಲಿಯೇ ಐಟಿಬಿಪಿಯು ಬಹಳ ದುರ್ಗಮ ಮತ್ತು ವಿಷಮ ವಾತಾವರಣದಲ್ಲಿ ಉತ್ಕೃಷ್ಟ ದೇಶಭಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತದ ಒಂದಿಂಚೂ ಜಮೀನು ಅತಿಕ್ರಮಣವಾಗದಂತೆ ಎಚ್ಚರಿಕೆಯ ದೇಶಸೇವೆ ಮಾಡುತ್ತಿದ್ದಾರೆ. ಐಟಿಬಿಪಿ ಯೋಧರು ಭೀಮವೀರರಾಗಿದ್ದಾರೆ. ಆಯುಷ್ಮಾನ್ ಆರೋಗ್ಯ ಯೋಜನೆ ಮೂಲಕ ಸೈನಿಕರ ಮತ್ತು ಅವರ ಕುಟುಂಬದ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+