ಕರ್ನಾಟಕ ಚುನಾವಣೆ : 5ಕ್ಕೂ ಹೆಚ್ಚು ಮೋದಿ ಸಮಾವೇಶ
ಬೆಂಗಳೂರು, ಫೆಬ್ರವರಿ 08 : ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣಾ ಪ್ರಚಾರಕ್ಕೆ ಫೆ.4ರಂದು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ. ಮಾರ್ಚ್‌ನಲ್ಲಿ ಮೋದಿ ರಾಜ್ಯದ ಹಲವು ಕಡೆ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ವಿವಿಧ ಜಿಲ್ಲೆಗಳಲ್ಲಿ ಸಮಾವೇಶಗಳಲ್ಲಿ ಪಾಳ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರ ಮುಂದಿನ ಸಮಾವೇಶ ಮಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ.
ಮೈಸೂರು, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿಯಲ್ಲಿ ಮೋದಿ ಸಮಾವೇಶಗಳು ನಡೆಯಲಿವೆ. ಒಂದೇ ದಿನ ಎರಡು ಜಿಲ್ಲೆಯಲ್ಲಿ ಸಮಾವೇಶ ಆಯೋಜಿಸಲು ಪಕ್ಷ ನಿರ್ಧರಿಸಿದೆ.

2013ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗಲೂ ಅವರು ಹಲವು ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದರು.
ಮೋದಿ ಪ್ರಧಾನಿಯಾದ ಬಳಿಕ ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಎಂಬ ಘೋಷಣೆಯೊಂದಿಗೆ ಬಿಜೆಪಿ ಚುನಾವಣೆಯನ್ನು ಎದುರಿಸುತ್ತಿದೆ.
ರಾಜ್ಯ ಬಿಜೆಪಿ ನಾಯಕರು ಎಲ್ಲೆಲ್ಲಿ ಮೋದಿ ಸಮಾವೇಶ ಆಯೋಜನೆ ಮಾಡಬೇಕು? ಎಂದು ಯೋಜನೆ ತಯಾರಿಸಿದ್ದಾರೆ.











Click it and Unblock the Notifications