ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣಾ ಪ್ರಚಾರ : ಕರ್ನಾಟಕದಲ್ಲಿ 7 ಮೋದಿ ಸಮಾವೇಶ

|
Google Oneindia Kannada News

Recommended Video

Lok sabha election 2019: ಏಳು ಸ್ಥಳದಲ್ಲಿ ನರೇಂದ್ರ ಮೋದಿ ಊದುತ್ತಾರೆ ರಣಕಹಳೆ | Oneindia Kannada

ಬೆಂಗಳೂರು, ಮಾರ್ಚ್ 27 : ಲೋಕಸಭಾ ಚುನಾವಣೆಯಲ್ಲಿ 20+ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಕರ್ನಾಟಕ ಬಿಜೆಪಿ ನರೇಂದ್ರ ಮೋದಿ ಸಮಾವೇಶವನ್ನು ಆಯೋಜಿಸುವ ಕುರಿತು ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಮೋದಿ 7 ಚುನಾವಣಾ ಪ್ರಚಾರ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಬಳಿಕ ರಾಜ್ಯ ಬಿಜೆಪಿ ಘಟಕ ಚುನಾವಣಾ ಪ್ರಚಾರದತ್ತ ಗಮನ ಹರಿಸಿದೆ. ಈಗಾಗಲೇ ನರೇಂದ್ರ ಮೋದಿ ಅವರು ಚುನಾವಣೆ ಘೋಷಣೆಗೂ ಮುನ್ನ ರಾಜ್ಯದಲ್ಲಿ ಎರಡು ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲ

ಈಗ ರಾಜ್ಯದಲ್ಲಿ 7 ಕಡೆ ನರೇಂದ್ರ ಮೋದಿ ಅವರ ಸಮಾವೇಶವನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಇದರ ಹೊರತಾಗಿ ಕೇಂದ್ರ ಸಚಿವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇವೇಂದ್ರ ಫಡ್ನವೀಸ್ ಅವರು ಸಹ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ : ಹಲವು ಕಾರ್ಯಕ್ರಮ ಘೋಷಿಸಿದ ಕರ್ನಾಟಕ ಬಿಜೆಪಿಲೋಕಸಭಾ ಚುನಾವಣೆ : ಹಲವು ಕಾರ್ಯಕ್ರಮ ಘೋಷಿಸಿದ ಕರ್ನಾಟಕ ಬಿಜೆಪಿ

ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಪಕ್ಷ ಬೆಂಬಲ ಘೋಷಣೆ ಮಾಡಿದೆ....

ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ: ಬಿಜೆಪಿ ಭೀಷ್ಮ ಅಡ್ವಾಣಿಗೆ ಟಿಕೆಟ್ ಇಲ್ಲಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ: ಬಿಜೆಪಿ ಭೀಷ್ಮ ಅಡ್ವಾಣಿಗೆ ಟಿಕೆಟ್ ಇಲ್ಲ

ನರೇಂದ್ರ ಮೋದಿ ಸಮಾವೇಶ

ನರೇಂದ್ರ ಮೋದಿ ಸಮಾವೇಶ

ಹುಬ್ಬಳ್ಳಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಕಲಬುರಗಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.

ಇನ್ನೂ 7 ಸಮಾವೇಶಗಳು

ಇನ್ನೂ 7 ಸಮಾವೇಶಗಳು

ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರದ ಯೋಜನೆ ರೂಪಿಸಿದ್ದು, ರಾಜ್ಯದಲ್ಲಿ 7 ಸಮಾವೇಶಗಳನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಇನ್ನೆರಡು ದಿನದಲ್ಲಿ ಪ್ರಚಾರ ನಡೆಸುವ ಸ್ಥಳಗಳನ್ನು ಅಂತಿಮಗೊಳಿಸಲಾಗುತ್ತದೆ.

ಎಲ್ಲೆಲ್ಲಿ ಸಮಾವೇಶಗಳು

ಎಲ್ಲೆಲ್ಲಿ ಸಮಾವೇಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ದಕ್ಷಿಣ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ರಾಯಚೂರು ಅಥವ ಕೊಪ್ಪಳದಲ್ಲಿ ಸಮಾವೇಶಗಳನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ.

ತುಮಕೂರಿನಲ್ಲಿ ಸಮಾವೇಶ

ತುಮಕೂರಿನಲ್ಲಿ ಸಮಾವೇಶ

ಮಲ್ಲಿಕಾರ್ಜು ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿಯಲ್ಲಿ ಈಗಾಗಲೇ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸ್ಪರ್ಧೆ ಮಾಡುತ್ತಿರುವ ತುಮಕೂರು ಕ್ಷೇತ್ರದಲ್ಲಿಯೂ ಮೋದಿ ಸಮಾವೇಶ ನಡೆಯಲಿದೆ.

English summary
Prime Minister of India Narendra Modi will be address 7 election campaign rally in Karnataka. Election will be held on April 18 and 23 at state for 28 lok sabha seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X