ಕರ್ನಾಟಕದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

ಬೆಂಗಳೂರು, ಆಗಸ್ಟ್ 09: 5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ 5 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಅವರು ವಿವರಣೆಗಳನ್ನು ಪಡೆಯಲಿದ್ದಾರೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಅಸ್ಸಾಂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲಾಗುತ್ತದೆ.

Narendra Modi To Review Flood Situation In Karnataka

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಆದರೆ, ಯಡಿಯೂರಪ್ಪಗೆ ಕೋವಿಡ್ ಸೋಂಕು ತಗುಲಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ, ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಇದೆ.

ಕಂದಾಯ ಸಚಿವ ಆರ್. ಅಶೋಕ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಪರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+