NAS Survey: ಕನ್ನಡ ಮಾಧ್ಯಮ ಕಲಿಕೆ ಪ್ರಮಾಣ ಕುಂಠಿತಕ್ಕೆ ನೆಟ್ಟಿಗರು ಕಳವಳ
ಬೆಂಗಳೂರು ಜೂನ್ 25: ಕನ್ನಡ ಮಾಧ್ಯಮದಲ್ಲಿ ಕಲಿಯುವವರ ಪ್ರಮಾಣ ಕಡಿಮೆಯಾಗುತ್ತಿದ್ದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸಾಧನ ಸಮೀಕ್ಷೆ ವರದಿಯ ಪ್ರಕಾರ ವರ್ಷದಿಂದ ವರ್ಷಕ್ಕೆ ಕನ್ನಡ ಮಾಧ್ಯಮದಲ್ಲಿ ಕಲಿಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಕೂ ನಲ್ಲಿ #ಕನ್ನಡಮಾಧ್ಯಮಕಲಿಕೆ ಎಂಬ ಹ್ಯಾಷ್ ಟ್ಯಾಗ್ ಅಡಿ ತಮ್ಮ ಆತಂಕವನ್ನು ಬಿಚ್ಚಿಟ್ಟಿದ್ದಾರೆ.
ಗೋಪಾಲ್ ಕೆಂಪೇಗೌಡ ಎನ್ನುವವರು ಕೂ ಮಾಡಿ 'ಕನ್ನಡ ಮಾದ್ಯಮದಲ್ಲಿ ಕಲಿತರೆ ಉದ್ಯೋಗ ಪಡೆಯಲು ಕಷ್ಟ ಎಂಬ ಮಿಥ್ಯೆ ಮತ್ತು ಬದಲಾದ ದಿನಗಳಲ್ಲಿ ಆಂಗ್ಲಭಾಷೆಗೆ ಸಿಗುತ್ತಿರುವ ಅನಗತ್ಯ ಆದ್ಯತೆ ಪ್ರಧಾನವಾಗಿ ನಮ್ಮ ಮಾತೃ ಭಾಷೆ ಕಲಿಕೆಗೆ ಅಡ್ಡಿಯಾಗಿದೆ' ಎಂದಿದ್ದಾರೆ.
ಇನ್ನೂ ವಾಹಿನಿ ಮಂಜರೇಕರ್ ಅವರು, 'ಕನ್ನಡ ಮಾಧ್ಯಮದಲ್ಲಿ ಕಲಿಸದೇ ಇರಲು ಕಾರಣಗಳಿವೆ, ಬಹುಮುಖ್ಯವಾದದ್ದು ಮಗು ಇನ್ನೂ ಚಡ್ಡಿ ಹಾಕುವಾಗಲೇ ಮುಂದೆ ಕಾಲೇಜಿನಲ್ಲಿ ಇಂಗ್ಲೀಷ್ ಸಮಸ್ಯೆ ಆಗಬಾರದು ಎನ್ನುವ ಗಾಬರಿ-Ness. ಪ್ರತಿಷ್ಠೆ ಎರಡನೆಯದ್ದು, ಪ್ರತಿಷ್ಠೆಗಾಗಿ ಇಂಗ್ಲೀಷ್ ನಲ್ಲಿ ಅದೇನು ಸಿಕ್ಕತ್ತೋ ಗೊತ್ತಿಲ್ಲ. ಆದ್ರೆ ಕನ್ನಡ ಕಲಿಯದೆ ಮಿಕ್ಕೆಲ್ಲಾ ಭಾಷೆ ಅಚ್ಚುಕಟ್ಟಾಗಿ ಬರಲು ಸಾಧ್ಯವೇ ಇಲ್ಲ, ನಮ್ಮ ವಾತಾವರಣಕ್ಕೆ!' ಎಂದು ಬರೆದಿದ್ದಾರೆ.
Koo Appಕನ್ನಡ ಮಾಧ್ಯಮದಲ್ಲಿ ಕಲಿಸದೇ ಇರಲು ಕಾರಣಗಳಿವೆ, ಬಹುಮುಖ್ಯವಾದದ್ದು ಮಗು ಇನ್ನೂ ಚಡ್ಡಿ ಹಾಕುವಾಗಲೇ ಮುಂದೆ ಕಾಲೇಜಿನಲ್ಲಿ ಇಂಗ್ಲೀಷ್ ಸಮಸ್ಯೆ ಆಗಬಾರದು ಎನ್ನುವ ಗಾಬರಿ-Ness. ಪ್ರತಿಷ್ಠೆ ಎರಡನೆಯದ್ದು, ಪ್ರತಿಷ್ಠೆಗಾಗಿ ಇಂಗ್ಲೀಷ್ ನಲ್ಲಿ ಅದೇನು ಸಿಕ್ಕತ್ತೋ ಗೊತ್ತಿಲ್ಲ. ಆದ್ರೆ ಕನ್ನಡ ಕಲಿಯದೆ ಮಿಕ್ಕೆಲ್ಲಾ ಭಾಷೆ ಅಚ್ಚುಕಟ್ಟಾಗಿ ಬರಲು ಸಾಧ್ಯವೇ ಇಲ್ಲ, ನಮ್ಮ ವಾತಾವರಣಕ್ಕೆ! #ಕನ್ನಡಮಾಧ್ಯಮಕಲಿಕೆ - Vahini Manjrekar (@HalfMen) 25 June 2022

'ಕನ್ನಡದ ಅಸ್ಮಿತೆ, ಕನ್ನಡಿಗರೇ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮಕ್ಕೆ ತಳ್ಳಿ ಕನ್ನಡ ಕಲಿಕೆಯಲ್ಲಿ ಹಿಂದೇಟುಹಾಕುವಂತೆ ಮಾಡುತ್ತಿದ್ದಾರೆ, ಇತ್ತ ಕನ್ನಡವನ್ನೂ ಸರಿಯಾಗಿ ಕಲಿಯದೆ ಇಂಗ್ಲೀಷ್ ಕಲಿಕೆಗೂ ಒಗ್ಗಲಾರದೆ ಮಕ್ಕಳು ಪರಿತಪಿಸುವುದು ಯಾರಿಗೂ ತಿಳಿಯದ ವಿಷಯವಲ್ಲ' ಎಂದು ದಿವ್ಯಾ ರಾಮಕೃಷ್ಣ ಎನ್ನುವವರು ಬರೆದುಕೊಂಡಿದ್ದಾರೆ.
'ಕಡ್ಡಾಯವಾಗದಿದ್ದರೆ ಕನ್ನಡಿಗರ ಮಕ್ಕಳು ಕನ್ನಡ ಹೊರತುಪಡಿಸಿ ಮತ್ತೆಲ್ಲ ಭಾಷೆಗಳನ್ನು ಕಲಿತು ಕನ್ನಡವನ್ನೇ ಮರೆಯುವ ಪರಿಸ್ಥತಿ ಎದುರಾಗಲಿದೆ.' ಎಂದು ಚಂದ್ರಿಕಾ ಹೆಗಡೆ ಅವರು ಭವಿಷ್ಯದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ.
ಇದರೊಂದಿಗೆ ವಿರೇಶ್ ಎಂಬುವವರು ಕೂ ಮಾಡಿ 'ಸರ್ಕಾರಿ ಶಾಲೆಗಳು ಉತ್ತಮ ವಿದ್ಯಾರ್ಥಿಗಳನ್ನು ತಯಾರು ಮಾಡುವುದರಲ್ಲಿ ಸಫಲರಾಗಿವೆ, ಕಾಲಮಾನದಲ್ಲಿ ತಮ್ಮನ್ನು ತಾವು ಉಳಿಸಿಕೊಳ್ಳಲು ವಿಫಲವಾಗಿವೆ. ಪ್ರೈವೇಟ್ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಬ್ಯುಸಿನೆಸ್ ಮಾಡಲು ಮುಂದಾಗುತ್ತವಾ? ಮಠ ಮಾನ್ಯಗಳು ಮಾಡಬಹುದು, ಅವುಗಳು ಮಾಡುವುದು ಬ್ಯುಸಿನೆಸ್ ಅಲ್ಲವಲ್ಲ..ಆ ಕಾರಣಕ್ಕೆ' ಎಂದಿದ್ದಾರೆ.

'ಉದ್ಯೋಗದ ಕೊರತೆ, ಕನ್ನಡ ಅನ್ನದ ಭಾಷೆಯಾಗಿಲ್ಲ ಎನ್ನುವ ಕೂಗು. ಕನ್ನಡದಲ್ಲಿ ಅನ್ನ ಉಣ್ಣುವ ಜನರೇ ಇಲ್ಲದಿರುವ ಪ್ರಸಂಗ ಬರುವ ಮುಂಚೆ ಕನ್ನಡದಿಂದ ಹಿಡಿದು ಬಡಿದಾಡಿ ತಿನ್ನಲು ಸಜ್ಜಾಗಿರುವ ಕ್ಷೇತ್ರಕ್ಕೆ ಸರ್ಕಾರ, ಉದ್ಯಮ ನೆರವಾಗಬೇಕು' ಎಂದು ಸಂಧ್ಯಾ ಎನ್ನುವವರು ಹೇಳಿದ್ದಾರೆ.
-
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications