ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

ಬೆಂಗಳೂರು, ಏ. 29 : ಇನ್ನುಮುಂದೆ ಶಾಲೆಗಳ ಜೊತೆ ಪಿಯು ಕಾಲೇಜುಗಳಲ್ಲಿಯೂ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಹಾಡಬೇಕಾಗಿದೆ. ಸರ್ಕಾರಿ ಮತ್ತು ಖಾಸಗಿ ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಪ್ರತಿದಿನ ವಿದ್ಯಾರ್ಥಿಗಳು ಸಾಮೂಹಿಕವಾಗಿ ರಾಷ್ಟ್ರಗೀತೆಯನ್ನು ಹಾಡಿ ನಂತರ ತರಗತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಏ.27ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸದ್ಯ, ಕಾಲೇಜುಗಳಿಗೆ ಬೇಸಿಗೆ ರಜೆ ಇದ್ದು, ಜೂನ್‌ನಲ್ಲಿ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ಈ ಆದೇಶ ಜಾರಿಗೆ ಬರಲಿದೆ. [ರಾಷ್ಟ್ರಗೀತೆ ವೇಳೆ ವೇದಿಕೆ ಬಿಟ್ಟಿಳಿದ ರಾಜ್ಯಪಾಲರು]

Pre-University Education

ಇದುವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಾಗಿತ್ತು. ಈ ಆದೇಶದ ಪ್ರಕಾರ ಪದವಿ ಪೂರ್ವ ಕಾಲೇಜುಗಳಲ್ಲಿಯೂ ರಾಷ್ಟ್ರಗೀತೆ ಹಾಡಬೇಕಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ. [ಈ ಮೇಕೆಯನ್ನಾದರೂ ನೋಡಿ ಬುದ್ಧಿ ಕಲೀರೋ!]

ಶಾಲೆ ಮತ್ತು ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಕೋಲ್ಕೊತಾ ಹೈಕೋರ್ಟ್ 2014ರಲ್ಲಿ ತೀರ್ಪು ನೀಡಿತ್ತು. ಇದರ ಅನ್ವಯ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ 2015ರ ಜ.5ರಂದು ಸೂಚನೆ ರವಾನಿಸಿತ್ತು. ಈ ಸೂಚನೆ ಅನ್ವಯ ಆದೇಶವನ್ನು ಜಾರಿಗೊಳಿಸಲಾಗಿದೆ. [ಎಸ್ಸೆಸ್ಸೆಲ್ಸಿ, ಪಿಯೂ ಫಲಿತಾಂಶ ದಿನಾಂಕ ದೇವರಿಗ್ಗೊತ್ತು]

ರಾಷ್ಟ್ರಗೀತೆ ಕುರಿತು : ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆಯನ್ನು 1950ರಲ್ಲಿ ರಾಷ್ಟ್ರಗೀತೆ ಎಂದು ಸರ್ಕಾರ ಘೋಷಿಸಿತು. 52 ಸೆಕೆಂಡುಗಳಿಗೆ ಮೀರದಂತೆ ರಾಷ್ಟ್ರಗೀತೆಯನ್ನು ಹಾಡಿ ಮುಗಿಸಬೇಕಾಗಿದೆ. ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕು. ಹಾಡುವುದಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುತ್ತದೆ. [ಹೆಚ್ಚಿನ ಓದಿಗೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+