ರಾಜ್ಯದ ಕರಾವಳಿಯಲ್ಲಿ ಚಂಡಮಾರುತ ಅಪಾಯ ಉಪಶಮನ ಯೋಜನೆ ಜಾರಿ
ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಕರಾವಳಿಯಲ್ಲಿ ಚಂಡಮಾರುತ ಉಪಶಮನ ಯೋಜನೆ ಸಿದ್ಧವಾಗಿದೆ, ಯೋಜನೆಯು ಕೇಂದ್ರ ಸರ್ಕಾರ ಹಾಗೂ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಉಪ ಕಾರ್ಯದರ್ಶಿ ಟಿ. ನಾರಾಯಣಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಚಂಡಮಾರುತ ಮತ್ತು ಪ್ರವಾಹ ವಿಪತ್ತು ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು, ರಾಜ್ಯ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯಕ್ರಮ ಪ್ರಗತಿಯಲ್ಲಿದೆ ಎಂದು ನುಡಿದರು.
ಮೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಈ ಯೋಜನೆಯ ಯಶಸ್ವಿ ನಿರ್ವಣೆಗಾಗಿ ತರಬೇತಿ ಏರ್ಪಡಿಸಲಾಗಿದೆ.

ರಾಜ್ಯ ಸರ್ಕಾರ ವಿಪತ್ತು ನಿರ್ವಹಣೆ ಯೋಜನೆಯನ್ನು ಸಿದ್ದಪಡಿಸಿ ಎರಡು ಬಾರಿ ಪುನರ್ ಪರಿಶೀಲನೆ ನಡೆಸಿದೆ, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಪತ್ತು ಪ್ರಾಧಿಕಾರ ರಚನೆಯಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಾಹಣೆ ಪ್ರಾಧಿಕಾರದ ಮುಖ್ಯಸ್ಥರಾಗಿದ್ದಾರೆ ಎಂದರು.












Click it and Unblock the Notifications