ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿಯಲ್ಲಿ ಚಂಡಮಾರುತ ಅಪಾಯ ಉಪಶಮನ ಯೋಜನೆ ಜಾರಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಕರಾವಳಿಯಲ್ಲಿ ಚಂಡಮಾರುತ ಉಪಶಮನ ಯೋಜನೆ ಸಿದ್ಧವಾಗಿದೆ, ಯೋಜನೆಯು ಕೇಂದ್ರ ಸರ್ಕಾರ ಹಾಗೂ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಉಪ ಕಾರ್ಯದರ್ಶಿ ಟಿ. ನಾರಾಯಣಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಚಂಡಮಾರುತ ಮತ್ತು ಪ್ರವಾಹ ವಿಪತ್ತು ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು, ರಾಜ್ಯ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯಕ್ರಮ ಪ್ರಗತಿಯಲ್ಲಿದೆ ಎಂದು ನುಡಿದರು.

ಅಪ್ಪಳಿಸಿದ ತಿತ್ಲಿ ಚಂಡಮಾರುತ: ಒಡಿಶಾ-ಆಂಧ್ರದಲ್ಲಿ ಹೈಅಲರ್ಟ್ ಅಪ್ಪಳಿಸಿದ ತಿತ್ಲಿ ಚಂಡಮಾರುತ: ಒಡಿಶಾ-ಆಂಧ್ರದಲ್ಲಿ ಹೈಅಲರ್ಟ್

ಮೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಈ ಯೋಜನೆಯ ಯಶಸ್ವಿ ನಿರ್ವಣೆಗಾಗಿ ತರಬೇತಿ ಏರ್ಪಡಿಸಲಾಗಿದೆ.

National cyclone risk mitigation project will implement in the state

ತಿತ್ಲಿ ಚಂಡಮಾರುತದ ಭೀಕರತೆಗೆ ಸಾಕ್ಷಿಯಾಗುವ ಚಿತ್ರಗಳು! ತಿತ್ಲಿ ಚಂಡಮಾರುತದ ಭೀಕರತೆಗೆ ಸಾಕ್ಷಿಯಾಗುವ ಚಿತ್ರಗಳು!

ರಾಜ್ಯ ಸರ್ಕಾರ ವಿಪತ್ತು ನಿರ್ವಹಣೆ ಯೋಜನೆಯನ್ನು ಸಿದ್ದಪಡಿಸಿ ಎರಡು ಬಾರಿ ಪುನರ್ ಪರಿಶೀಲನೆ ನಡೆಸಿದೆ, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಪತ್ತು ಪ್ರಾಧಿಕಾರ ರಚನೆಯಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಾಹಣೆ ಪ್ರಾಧಿಕಾರದ ಮುಖ್ಯಸ್ಥರಾಗಿದ್ದಾರೆ ಎಂದರು.

English summary
State government has prepared to implement the national cyclone risk mitigation project in the 321 kms of coastal area in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X