Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
ಬೆಂಗಳೂರು, ಏಪ್ರಿಲ್. 20: ಇಷ್ಟು ದಿನ ಮಳೆ ಇಲ್ಲದೆ ಬಿಸಿಲಿನ ಶಾಖ ಅನುಭವಿಸುತ್ತಿದ್ದ ರಾಜ್ಯದ ಜನ ನಿನ್ನೆಯಿಂದ ಮಳೆಯನ್ನು ನೋಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಮತ್ತು ಸೂಚನೆಗಳನ್ನು ನೀಡಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು - ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ.

1. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNMDC) ಹಾಗೂ ಭಾರತೀಯ ಹವಾಮಾನ ಇಲಾಖೆ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರೆ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ರಿಯಲ್ ಟೈಮ್ ಬೇಸಿಸ್‌ನಲ್ಲಿ ಪ್ರಸಾರ ಮಾಡುತ್ತಿದ್ದು, ಈ ಮುನ್ಸೂಚನೆಗಳನ್ನು ಎಲ್ಲಾ ಮಾಧ್ಯಮಗಳ ಮೂಲಕ ಪ್ರಚುರಪಡಿಸಬೇಕು.
2. ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಜೀವಹಾನಿಯನ್ನು ತಪ್ಪಿಸುವುದು ಹಾಗೂ ಸಾರ್ವಜನಿಕ ಆಸ್ತಿ / ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು.

3. ಸ್ಥಳೀಯ ಜನರನ್ನು ಎಬ್ಬರಿಸಲು ಹಾಗೂ ಗುಡುಗು ಮತ್ತು ಸಿದಿಲಿನ ಅಪಾಯಗಳನ್ನು ತಗ್ಗಿಸಲು ಹಾಗೂ ಜೀವನಾನಿಯನ್ನು ತಪ್ಪಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಶಿಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.
4. ಗುಡುಗು-ಸಿಡಿಲು ಸಂದರ್ಭಗಳಲ್ಲಿ ಅನುಸರಿಸಬೇಕಾದ ಮತ್ತು ಅನುಸರಿಸಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ (ಐಇಸಿ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.
ಗುಡುಗು, ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು
1. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸುವುದು.
2. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.
3. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯುವುದು.
4. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯುವುದು.
5. ಕೆರೆ ಮತ್ತು ನದಿಗಳು ಹಾಗೂ ಇನ್ನಿತರೆ ನೀರಿನ ಮೂಲಗಳಿಂದ ತಕ್ಷಣವೇ ದೂರವಿರುವುದು.
6. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
7. ಗುಡುಗು - ಸಿಡಿಲಿನ ಮುನ್ಸೂಚನೆ ಅಥವಾ ಮುನ್ನಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು ಹಾಗೂ ಮನೆಗಳಲ್ಲೆ ಇರುವುದು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು ಹಾಗೂ ಮರಗಳು ಮತ್ತು ವಿದ್ಯುತ್ ಲೈನ್‌ಗಳಿಂದ ದೂರ ವಾಹನ ನಿಲುಗಡೆ ಮಾಡುವುದು.
8. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.
9. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
10. ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು.
11. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ /ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.
12. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.
13. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
14. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
15. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.
16. ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
17. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.
18. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.
19. ಗುಡುಗು ಸಿಡಿಲಿನ ಸಮಯದಲ್ಲಿ ಬೈಕ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರ ಮಾಡದಿರುವುದು.
20. ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.
21. ದೋಣಿ ಪ್ರಯಾಣ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.
22. ಅರಣ್ಯ ಪ್ರದೇಶದಿಂದ ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿದೆ.
23. ಗುಡುಗು ಸಿಡಿಲಿನ ಸಮಯದಲ್ಲಿ ಬಯಲು ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ, ತಕ್ಷಣವೇ ಹತ್ತಿರದಲ್ಲೇ ಇರುವ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯದಿಂದ ಪಾರಾಗುವುದು.
24. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರುವುದು.
25. ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್ /ಎಲೆಕ್ನಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್‌ಟಾಪ್, ವಿಡಿಯೋ ಗೇಮ್ ಸಾಧನಗಳು, ಮೊಬೈಲ್ ಫೋನ್, ವಾಷಿಂಗ್ ಮಷಿನ್, ಸ್ಟವ್ ಹಾಗೂ ಇತರ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು.
26. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರಿಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್‌ಗಳು, ಬಾತ್‌ಬ್‌ಗಳು ಅಥವಾ ಇತರ ವಿದ್ಯುತ್ ಉಪಕರಣಗಳಿಂದ ದೂರವಿರುವುದು.
ಸಿಡಿಲು, ಮಿಂಚು ಬಡಿದಾಗ ಪ್ರಥಮ ಚಿಕಿತ್ಸೆ ಹೀಗಿರಲಿ
1. ಸಿಡಿಲು / ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 / 108 ಸಹಾಯವಾಣಿಗೆ ಕರ ಮಾಡಬೇಕು.
2. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ಈ ಕೆಳಕಂಡಂತೆ ನೀಡುವ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು / ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು( electrical charges) ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ.
3. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು (Carotid Artery) ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು.
4. ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ Cardiac compressions ಹಾಗೂ Cardiopulmonary Resuscitation ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
5. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಕಣ್ಣಿನ ದೃಷ್ಟಿ, ಕಿವಿಕೇಳಿಸುವಿಕೆ ಹಾಗೂ ಮೂಳೆಗಳ ಮುರಿದಿವೆಯೇ ಎಂದು ಪರೀಕ್ಷಿಸಬೇಕು, ಇದರಿಂದ ಪಾರ್ಶ್ವವಾಯು/ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು.
6. ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತಕ್ಷಣವೇ ಅವನನ್ನು / ಅವಳನ್ನು ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು.
7. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು/ ಅಘಾತಕ್ಕೆ ಒಳಗಾಗಿರಬಹುದು. ಆದ್ದರಿಂದ, ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ, ಸೂಕ್ತ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು.
8. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡಬೇಕು ಮತ್ತು ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications