National Highway: ಕರ್ನಾಟಕದಲ್ಲಿ ಬಾಕಿ ಉಳಿದ & ಪೂರ್ಣಗೊಂಡ ರಾ‍ಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಬಿಗ್ ಅಪ್ಡೇಟ್

National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಲಿದೆ. ಇದೀಗ ಕರ್ನಾಟಕದಲ್ಲಿ ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ಪೂರ್ಣಗೊಂಡಿರುವ ಹಾಗೂ ಬಾಕಿ ಉಳಿದಿರುವ ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಅಪ್ಡೇಟ್‌ ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಭಾರತಮಾಲಾ ಪರಿಯೋಜನಾ' ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ 334 ಕಿಲೋ ಮೀಟರ್‌ಗಳಷ್ಟು ಹೆದ್ದಾರಿ ನಿರ್ಮಾಣ ಕಾಮಗಾರಿ ಇನ್ನೂ ಬಾಕಿ ಉಳಿದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಚಾರವನ್ನು ಬಿಚ್ಚಿಟ್ಟರು.

National Highway 334 km Bharatmala Highway Work Pending in Karnataka Gadkari Shares 2028-29 Target

ನಿತಿನ್ ಗಡ್ಕರಿ ಮಹತ್ವದ ಮಾಹಿತಿ

ಈ ಕುರಿತು ಎದುರಾದ ಪ್ರಶ್ನೆಗೆ ಉತ್ತರ ನೀಡಿದ ಅವರು, ಯೋಜನೆಗೆ ಸಂಬಂಧಿಸಿದಂತೆ ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ನಡೆದಿರುವ ಪ್ರಗತಿ ಮತ್ತು ವಿಳಂಬಕ್ಕೆ ಕಾರಣವಾದ ಅಂಶಗಳ ಕುರಿತು ವಿವರಣೆ ನೀಡಿದರು. ಅಲ್ಲದೆ, ಯಾವಾಗ ಪೂರ್ಣ ಗೊಳಿಸಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಪೂರ್ಣಗೊಂಡ, ಬಾಕಿ ಉಳಿದ ಕಾಮಗಾರಿ ವಿವರ

ದೇಶಾದ್ಯಂತ ಒಟ್ಟು 34,800 ಕಿಲೋಮೀಟರ್ ಹೆದ್ದಾರಿ ನಿರ್ಮಾಣ ಮಾಡುವ ಗುರಿ ಹೊಂದಲಾಗಿತ್ತು. ಈ ಪೈಕಿ ಈವರೆಗೆ 26,425 ಕಿಲೋ ಮೀಟರ್ ಉದ್ದದ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಒಟ್ಟು 1,603 ಕಿ.ಮೀ. ಹೆದ್ದಾರಿ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, ಇದರಲ್ಲಿ 1,269 ಕಿಲೋ ಮೀಟರ್ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 334 ಕಿಲೋ ಮೀಟರ್ ಕಾಮಗಾರಿ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ರಾಜ್ಯದಲ್ಲಿ ಈ ಯೋಜನೆ ನಿರೀಕ್ಷಿತ ವೇಗದಲ್ಲಿ ಪೂರ್ಣಗೊಳ್ಳದಿರಲು ಹಲವು ಸವಾಲುಗಳು ಎದುರಾಗಿವೆ ಎಂದು ಸಚಿವರು ವಿವರಿಸಿದರು. ಭೂಸ್ವಾಧೀನ ಪ್ರಕ್ರಿಯೆ ಹಾಗೂ ವಿವಿಧ ಇಲಾಖೆಗಳಿಂದ ಶಾಸನಬದ್ಧ ಅನುಮತಿಗಳನ್ನು ಪಡೆಯುವಲ್ಲಿ ವಿಳಂಬವಾಗಿದೆ ಎಂದು ವಿವರಿಸಿದರು.

ಕಾಮಗಾರಿ ಪೂರ್ಣ ಯಾವಾಗ?

ರಸ್ತೆ ಬದಿಯ ಒತ್ತುವರಿ ತೆರವುಗೊಳಿಸುವುದು, ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಎದುರಾಗಿದ್ದು, ನಿರ್ಮಾಣ ಸಾಮಗ್ರಿಗಳು ಹಾಗೂ ಅಗತ್ಯ ಖನಿಜಗಳ ಲಭ್ಯತೆ ಕಡಿಮೆಯಾಗಿದೆ. ಗುತ್ತಿಗೆದಾರರ ಕಳಪೆ ಕಾರ್ಯಕ್ಷಮತೆ, ಕೋವಿಡ್-19 ಸಾಂಕ್ರಾಮಿಕದ ಪ್ರಭಾವ ಹಾಗೂ ಪ್ರಕೃತಿ ವಿಕೋಪದಂತಹ ಸಮಸ್ಯೆಗಳು ಎದುರಾಗಿವೆ. ಈ ಎಲ್ಲಾ ಅಡೆತಡೆಗಳನ್ನು ನಿವಾರಣೆ ಮಾಡಿಕೊಂಡು ಯೋಜನೆಯನ್ನು 2028-29ರ ವೇಳೆಗೆ ಪೂರ್ಣಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ನಿತಿನ್ ಗಡ್ಕರಿ ಅವರು ಸದನಕ್ಕೆ ಸ್ಪಷ್ಟಪಡಿಸಿದ್ದಾರೆ.

ಸುಧಾಮೂರ್ತಿ ಹೇಳಿದ್ದೇನು?

ದೇಶದಲ್ಲಿ ಸೂಕ್ತ ಹಾಗೂ ವೈಜ್ಞಾನಿಕ ಚಾಲನಾ ತರಬೇತಿ ನೀಡುವುದರಿಂದ ಮಾತ್ರ ರಸ್ತೆ ಅಪಘಾತಗಳು ಮತ್ತು ಅದರಿಂದ ಸಂಭವಿಸುವ ಸಾವುಗಳನ್ನು ತಡೆಯಲು ಸಾಧ್ಯ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ನಾಮನಿರ್ದೇಶಿತ ಸಂಸದೆ ಸುಧಾಮೂರ್ತಿ ಅವರು ಎತ್ತಿದ ವಿಷಯಕ್ಕೆ ಉತ್ತರಿಸಿದ ಅವರು, ಚಾಲಕರಲ್ಲಿ ಲೇನ್ ಶಿಸ್ತು ಮತ್ತು ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಕಟ್ಟುನಿಟ್ಟಿನ ತರಬೇತಿ ನೀಡುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ದೇಶದ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳಿಂದಾಗಿ ಪ್ರತಿವರ್ಷ ಸುಮಾರು 1,80,000 ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂಬುದು ಅತ್ಯಂತ ವಿಷಾದನೀಯ ಸಂಗತಿ. ರಾಷ್ಟ್ರೀಯ ಹೆದ್ದಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿವೆ. ಆದರೂ ಸಹ ಚಾಲಕರ ನಿರ್ಲಕ್ಷ್ಯತೆಯಿಂದ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ ಎಂದು ಹೇಳಿದರು.

ಆತಂಕ ವ್ಯಕ್ತಪಡಿಸಿದ ಸುಧಾಮೂರ್ತಿ

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಂಸದೆ ಸುಧಾಮೂರ್ತಿ ಅವರು, ದೇಶದಲ್ಲಿ ವಿಶ್ವದರ್ಜೆಯ ರಸ್ತೆ ನಿರ್ಮಾಣ ಆಗುತ್ತಿದ್ದರೂ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು. ಚಾಲನಾ ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸರ್ಕಾರದ ಬಳಿ ನಿರ್ದಿಷ್ಟ ಯೋಜನೆಯಿದೆಯೇ ಎಂದು ಪ್ರಶ್ನಿಸಿದರು.

ಕೆಲವರು ಗೊತ್ತಿಲ್ಲದೆ ಹಣ ನೀಡಿ ಪರವಾನಗಿ ಪಡೆಯುತ್ತಿದ್ದಾರೆ. ಚಾಲಕರು ವಾಹನ ಚಾಲನೆ ಪರೀಕ್ಷೆಯಲ್ಲಿ ಹೇಗೆ ತೇರ್ಗಡೆಯಾಗಿದ್ದಾರೆ ಎಂಬುದಕ್ಕೆ ಸೂಕ್ತ ವೀಡಿಯೋ ಸಾಕ್ಷ್ಯಗಳು ಅಥವಾ ದಾಖಲೆಗಳು ಇರುವುದಿಲ್ಲ. ಇದರಿಂದ ಅರಿವಿಲ್ಲದೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವ ಪ್ರಕರಣಗಳೂ ಹೆಚ್ಚುತ್ತಿವೆ ಎಂದು ಸುಧಾಮೂರ್ತಿ ಸದನದ ಗಮನಕ್ಕೆ ತರುವ ಮೂಲಕ ಗಮನ ಸೆಳೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+