National Highways: ರಾಜ್ಯದ ಪ್ರಮುಖ ಚತುಷ್ಪಥ ಹೆದ್ದಾರಿ ‍ಯೋಜನೆ ಬಿಗ್ ಅಪ್ಡೇಟ್ ಕೊಟ್ಟ ವಿ.ಸೋಮಣ್ಣ

ಬೆಂಗಳೂರು: ಕೇಂದ್ರ ಸರ್ಕಾರ ಕಳೆದ ವರ್ಷ ಅನುಮೋದನೆ ನೀಡಿದ್ದ ತುಮಕೂರು ಜಿಲ್ಲೆ ವ್ಯಾಪ್ತಿಯ ಪ್ರಮುಖ ಹೆದ್ದಾರಿ ಚತುಷ್ಪಥ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಈ ಕುರಿತು ಖುಷಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ಯೋಜನೆ ಕಾಮಗಾರಿ ಶೀಘ್ರವೇ ಆರಂಭಿಸುವ ಕುರಿತು ಮಾಹಿತಿ ನೀಡಿದ್ದಾರೆ.

ಎಕ್ಸ್ ಖಾತೆಯಲ್ಲಿ ವಿ.ಸೋಮಣ್ಣ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಫೋಟೋ ಹಾಗೂ ಅನುಮೋದನೆ ಆದೇಶ ಹಂಚಿಕೊಂಡಿದ್ದಾರೆ. ನಿತಿನ್ ರಾಷ್ಟ್ರೀಯ ಹೆದ್ದಾರಿ 69ರ ಶಿರಾ - ಬಡವನಹಳ್ಳಿ- ಬೈರೆನಹಳ್ಳಿ ಒಟ್ಟು 52 ಕಿ.ಮಿ. ಅಂದಾಜು 1,585 ಕೋಟಿ ವೆಚ್ಚದ ಚತುಷ್ಪಥ ಹೆದ್ದಾರಿ ನಿರ್ಮಾಣ ಆಗಲಿದೆ. ಇದರಿಂದ ಮದ್ಯ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಿಂದ ತಿರುಪತಿ ಮತ್ತು ಚೆನ್ನೈ ನಡುವಿನ ಪ್ರಯಾಣಕ್ಕೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.

National Highway 69

ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿಲೋ ಮೀಟರ್ ಉದ್ದದ ರೂ. 584.98 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಇದರಿಂದ ಈ ಭಾಗದ ರಸ್ತೆ ಸಾರಿಗೆ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ ಎಂದರು.

2025ರಲ್ಲಿ ಕೇಂದ್ರದಿಂದ ಅನುಮೋದನೆ

ತುಮಕೂರು ಜಿಲ್ಲೆಯ ಸರ್ವತೋಮುಖ ಪ್ರಗತಿಯ ಭಾಗವಾಗಿ ನನ್ನ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮಿ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2025ರ ಮಾರ್ಚ್‌ 07ರಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ ಗಡ್ಕರಿಯವರು ಅನುಮೋದನೆ ನೀಡಿದ್ದರು. ಇದೀಗ, ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಪ್ರಾರಂಭಿಸಲು ಈಗಾಗಲೇ ಗುತ್ತಿಗೆ ಆದೇಶ ನೀಡಲಾಗಿದೆ ಎಂದು ವಿವರಿಸಿದರು.

ರಾಷ್ಟ್ರೀಯ ಹೆದ್ದಾರಿ 69ರ ಶಿರಾ- ಬಡವನಹಳ್ಳಿ- ಬೈರೆನಹಳ್ಳಿ ಒಟ್ಟು 52 ಕಿಲೋ ಮೀಟರ್ ಅಂದಾಜು 1,585 ಕೋಟಿ ವೆಚ್ಚದ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಕಲ್ಯಾಣ ಕರ್ನಾಟಕ ಭಾಗದಿಂದ ತಿರುಪತಿ ಮತ್ತು ಚೆನ್ನೈ ನಡುವಿನ ಪ್ರಯಾಣಕ್ಕೂ ಸಹಾಯವಾಗಲಿದೆ ಎಂದರು.

ಬೆಂಗಳೂರು 2ನೇ ಅಂತಾರಾಷ್ಟ್ರೀಯ ನಿರ್ಮಾಣಕ್ಕೆ ಪೂರಕ

ಈ ಹೆದ್ದಾರಿ ನಿರ್ಮಾಣದಿಂದ ಶಿರಾದಿಂದ ಮಧುಗಿರಿ, ಚಿಕ್ಕಬಳ್ಳಾಪುರ, ಚಿಂತಾಮಣಿ ಮಾರ್ಗವಾಗಿ ತಿರುಪತಿಗೆ ಕೇವಲ 4 ಗಂಟೆಯ ಅವಧಿಯಲ್ಲಿ ತಲುಪಬಹುದಾಗಿದೆ. ಸುಮಾರು 60 ಕಿ.ಮಿ. ರಸ್ತೆ ಪ್ರಯಾಣ ಕಡಿಮೆಯಾಗಲಿದೆ. ವಸಂತನರಸಾಪುರ ಹಾಗೂ ಶಿರಾ ಕೈಗಾರಿಕಾ ಪ್ರದೇಶಗಳಿಂದ ಚೆನೈ ಬಂದರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಲಿದೆ. ಅಲ್ಲದೇ, ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪೂರಕವಾಗಿ ಶಿರಾ-ಬೆಂಗಳೂರಿನ ನಡುವೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಿದೆ.

ಬಡವನಹಳ್ಳಿಯಿಂದ ಬೈರೆನಹಳ್ಳಿ ಭಾಗದ 32 ಕಿಲೋ ಮೀಟರ್ ಚತುಷ್ಪಥ ರಸ್ತೆಗೆ ರೂ.1,000 ಕೋಟಿ ಅನುಮೋದನೆ ಪಡೆಯುವ ಬಗ್ಗೆ ಈಗಾಗಲೇ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಮುಂದಿನ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಳ್ಳಲಾಗುವುದು.

ತುಮಕೂರು ಜಿಲ್ಲೆಯ ಅಭಿವೃದ್ದಿಗೆ ನಿರಂತರ ಸಹಕಾರ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ನೀತಿನ್ ಗಡ್ಕರಿ ಅವರಿಗೆ ತುಮಕೂರು ಜನತೆಯ ಪರ ಸಚಿವರು ಧನ್ಯವಾದ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+