ಶಿರಾಡಿ ಘಾಟ್ ವಿಸ್ತರಣೆಗಾಗಿ ಹೆದ್ದಾರಿ ಪ್ರಾಧಿಕಾರದಿಂದ ಬಿಡ್‌ಗಳ ಆಹ್ವಾನ
ಬೆಂಗಳೂರು, ನವೆಂಬರ್ 3: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಂಗಳೂರು- ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ75ರ ಶಿರಡಿ ಘಾಟ್ ವಿಭಾಗದ ಮಾರನಹಳ್ಳಿ- ಅಡ್ಡಹೊಳೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 1,976 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಬಿಡ್‌ಗಳನ್ನು ಆಹ್ವಾನಿಸಿದೆ.
23 ಕಿಮೀ ಕಾಮಗಾರಿಯ ಈ ಯೋಜನೆಗೆ 15,000 ಕೋಟಿ ರೂಪಾಯಿ ವೆಚ್ಚವಾಗಲಿದೆ. ನಾವು ಏಪ್ರಿಲ್ 2023ರೊಳಗೆ ಡಿಪಿಆರ್ ಅನ್ನು ಅಂತಿಮಗೊಳಿಸುತ್ತೇವೆ ಮತ್ತು ಮೇ 2023 ರಲ್ಲಿ ಬಿಡ್‌ಗಳನ್ನು ಆಹ್ವಾನಿಸುತ್ತೇವೆ ಎಂದು ಸಚಿವರು ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ನಡುವೆ ಸಕಲೇಶಪುರದಿಂದ ಮಾರನಹಳ್ಳಿವರೆಗಿನ ರಸ್ತೆ ದುರಸ್ತಿಗೆ ನಿರ್ಧರಿಸಲಾಗಿದೆ. ಸುಗಮ ಸಂಚಾರಕ್ಕಾಗಿ 12.2 ಕೋಟಿ ಮೊತ್ತದ ದುರಸ್ತಿ ಕಾಮಗಾರಿಗೆ ಬಿಡ್‌ಗಳು ಮೌಲ್ಯಮಾಪನ ಹಂತದಲ್ಲಿವೆ ಎಂದು ಗಡ್ಕರಿ ಅವರು ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 8ರಂದು ಲೋಕಸಭೆಯಲ್ಲಿ ಕಟೀಲ್ ಅವರಿಗೆ ಉತ್ತರಿಸಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶಿರಾಡಿ ಘಾಟ್‌ನಲ್ಲಿ ಸುರಂಗಗಳನ್ನು ನಿರ್ಮಿಸುವ ಯೋಜನೆಯನ್ನು ಕೈಬಿಟ್ಟಿದೆ. ರಾಷ್ಟ್ರೀಯ ಹೆದ್ದಾರಿ 75 ರ ಈ ರಸ್ತೆಯಲ್ಲಿ ಚತುಷ್ಪಥ ರಸ್ತೆ ನಿರ್ಮಿಸಲು ನಿರ್ಧರಿಸಿದೆ ಎಂದು ಹೇಳಿದ್ದನ್ನು ಸ್ಮರಿಸಬಹುದು. ಶಿರಾಡಿ ಘಾಟ್ ಭಾಗದಲ್ಲಿ ಸುರಂಗಗಳ ನಿರ್ಮಾಣಕ್ಕೆ ಭಾರಿ ಹೂಡಿಕೆ ಹಾಗೂ ಕಾಮಗಾರಿ ನಿರ್ವಹಣೆಯಲ್ಲಿ ತೊಂದರೆಗಳಿದ್ದು, ಕಾರ್ಯಸಾಧುವಲ್ಲ ಎಂದು ಸಚಿವರು ಹೇಳಿದ್ದರು.

ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಕೆಸಿಸಿಐ) ಕಳೆದ ಕೆಲವು ವರ್ಷಗಳಿಂದ ಶಿರಾಡಿ ಘಾಟ್ ವಿಸ್ತರಣೆಯ ಕಳಪೆ ಸ್ಥಿತಿಯ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದೆ. ಡಿಸೆಂಬರ್‌ನಲ್ಲಿ ಶಿರಾಡಿ ಘಾಟ್ ದುರಸ್ತಿಗೆ ಮೂರು ಪ್ರಕ್ರಿಯೆಗಳ ಮಾತುಕತೆ ನಡೆಯುತ್ತಿದೆ. ತಾತ್ಕಾಲಿಕ ಡಾಂಬರೀಕರಣ, ವೈಟ್ ಟಾಪಿಂಗ್, ಸುರಂಗ ಮಾಡುವ ಪ್ರಕ್ರಿಯೆ ಮಾತುಕತೆಯಲ್ಲಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಸಭೆಯಲ್ಲಿ ನಡೆಸಿ ಸಮಗ್ರ ಚರ್ಚೆ ನಡೆಸಲಿದ್ದೇವೆ ಎಂದು ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಅವರು ಈ ಹಿಂದೆ ಭೇಟಿ ನೀಡಿದ್ದಾಗ ಬೆಂಗಳೂರು-ಮಂಗಳೂರು ವಾಹನಗಳು ಶಿರಾಡಿ ಘಾಟ್‌ನ ಈಗಿರುವ ರಸ್ತೆಯಲ್ಲಿಯೇ ಹೋಗಲು ಅವಕಾಶ ನೀಡಲಾಗುತ್ತದೆ. ಆದರೆ, ಮಂಗಳೂರು-ಬೆಂಗಳೂರು ವಾಹನಗಳು ದೋಣಿಗಲ್ ಬಳಿ ಕಪ್ಪಳ್ಳಿ-ಕೆಸಗಾನಹಳ್ಳಿ ಮಾರ್ಗವಾಗಿ ಇರುವ ಹಳೆ ರಸ್ತೆ ಬಳಕೆ ಮಾಡಬೇಕು ಎಂದು ಹೇಳಿದ್ದರು.












Click it and Unblock the Notifications