ರಾಷ್ಟ್ರೀಯ ತೋಟಗಾರಿಕಾ ಮೇಳ-2021ಕ್ಕೆ ಇಂದು ತೆರೆ!
ಬೆಂಗಳೂರು, ಫೆ. 12: ಹೆಸರಘಟ್ಟದ ಐಐಎಚ್ಆರ್ ಆವರಣದಲ್ಲಿ ನಡೆಯುತ್ತಿರುವ ಐದು ದಿನಗಳ ರಾಷ್ಟ್ರೀಯ ತೋಟಗಾರಿಕಾ ಮೇಳ-2021 ಇಂದು ಶುಕ್ರವಾರ ಅಂತ್ಯವಾಗಲಿದೆ. ತೋಟಗಾರಿಕಾ ಮೇಳ ಇದೇ ಮೊದಲ ಬಾರಿಗೆ ಅನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ನಡೆಯುತ್ತಿದೆ. ಈಗಾಗಲೇ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಐವತ್ತು ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದಾರೆ. ಆಸಕ್ತರು ಹಾಗೂ ರೈತರಿಗೆ ಭಾಗವಹಿಸಲು ಇವತ್ತು (ಫೆ.12) ಕೊನೆಯ ದಿನವಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಐಐಎಚ್ಆರ್ ಸ್ಥಳೀಯ ರೈತರ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಿತ್ತು. ಹೊರರಾಜ್ಯಗಳ ರೈತರಿಗೆ ಆನ್‌ಲೈನ್ ಮೂಲಕ ಮೇಳದ ವೀಕ್ಷಣೆಗೆ ಅನುವು ಮಾಡಿಕೊಂಡಿತ್ತು. ಆದರೂ, ನಮ್ಮ ನೆರೆಯ ರಾಜ್ಯಗಳಾದ ಕೇರಳ, ತೆಲಂಗಾಣ, ಆಂಧ್ರ, ತಮಿಳುನಾಡು, ಪುದುಚೇರಿಯಿಂದ ಕೃಷಿಕರು, ತೋಟಗಾರಿಕಾ ಉತ್ಪನ್ನಗಳ ಉದ್ದಿಮೆದಾರರು ಮೇಳಕ್ಕೆ ಖುದ್ದು ಭೇಟಿಕೊಟ್ಟಿದ್ದರು. ಕೇರಳದಿಂದ ಬಹುಸಂಖ್ಯೆಯಲ್ಲಿ ಕೃಷಿ ಆಸಕ್ತರು ಆಗಮಿಸಿದ್ದು ವಿಶೇಷ.

ಉತ್ತರ ಕರ್ನಾಟಕ ಭಾಗದ ರೈತರು ತೋಟಗಾರಿಕೆ ಬೆಳೆಗಳ ಬಗ್ಗೆ ಹೆಚ್ಚು ಆಕರ್ಷಿತಗೊಂಡು, ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳ, ಕೃಷಿ ಆಧಾರಿತ ಸಸ್ವಹಾಯ ಸಂಘಗಳ ಮೂಲಕ ಭೇಟಿಕೊಟ್ಟಿದ್ದರು. ವಿಶೇಷ ಏನೆಂದರೆ, ಕೋವಿಡ್ ನಿರ್ಬಂಧದ ನಡುವೆಯೂ ಈ ಮೇಳಕ್ಕೆ ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಆಗಮಿಸಿದ್ದರು. ರೈತರು, ಸಂರಕ್ಷಿತ ಬೇಸಾಯ, ತೋಟಗಾರಿಕೆ ಬೇಸಾಯ ಪದ್ಧತಿಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದರು.

ಐಐಎಚ್ಆರ್‌ನ ಸುಮಾರು 650 ಎಕರೆ ಭೂಮಿಯಲ್ಲಿ ವಿಜ್ಞಾನಿಗಳು ಅವಿಷ್ಕರಿಸಿರುವ ವಿವಿಧ ಜಾತಿಗಳ ಹೂವು-ಹಣ್ಣು-ತರಕಾರಿಗಳ ಕುರಿತು ರೈತರು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಮಾಹಿತಿ ಪಡೆದುಕೊಂಡರು. ಬಿತ್ತನೆ ಬೀಜ, ರಸಗೊಬ್ಬರ, ಯಂತ್ರೋಪಕರಣ, ಹೂವಿನ ಗಿಡ ಅಲಂಕಾರಿಕ ಪುಷ್ಪಗಳು, ಔಷಧೀಯ ಗಿಡಗಳು, ಸೌಗಂಧಿಕ ಬೆಳೆಗಳು ಹಾಗೂ ಅಣಬೆ ಬೆಳೆಗಳ ಉತ್ಪಾದನೆ ಮತ್ತು ತಂತ್ರಜ್ಞಾನಗಳ ಕುರಿತು ತಜ್ಞರು ವಿವರಣೆ ನೀಡುತ್ತಿದ್ದಾರೆ.
Recommended Video

-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications