‌ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕದ ದಳದ ಕಚೇರಿ; ರಾಜ್ಯ ಅಗ್ನಿಶಾಮಕ ದಳಕ್ಕೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ: ಪರಮೇಶ್ವರ

ಬೆಂಗಳೂರು, ಜೂನ್ 11: ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕದ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿಯಲ್ಲಿ ತೆರೆದಿದೆ. ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಪರಮೇಶ್ವರ್‌ ತಿಳಿಸಿದರು.

ಕೋರಮಂಗಲದ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ಮಂಗಳವಾರ ನಡೆದ 'ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಅವರು, ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಇಲಾಖೆಯ ಕೆಲಸ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದೀರಿ. ಭವಿಷ್ಯ ಉಜ್ವಲವಾಗಿರಲಿ ಎಂದರು.

National Level Appreciation for State Fire Brigade Says Home Minister Parameshwar

ಅವಘಡಗಳಲ್ಲಿ ಬೆಂಕಿ ನಂದಿಸಲು 90 ಮೀಟರ್‌ವರೆಗೆ ನೀರು ತಲುಪಿಸಬಹುದಾದ ಏರಿಯಲ್ ಲ್ಯಾಡರ್ ಅಳವಡಿಸಿಕೊಳ್ಳಲಾಗಿದೆ. ಬಹುತೇಕ ರಾಜ್ಯಗಳಲ್ಲಿ ಇದು ಇಲ್ಲ. ಅಲ್ಲದೇ, ಮೊದಲ ಬಾರಿಗೆ ಇಲಾಖೆಯ ವಾಹನಗಳಿಗೆ ಪೆಟ್ರೋಲ್ ಕಾರ್ಡ್ ಸವಲತ್ತು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಅಗ್ನಿಶಾಮಕ ದಳ ಎಂದರೆ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇದಕ್ಕೆ ಕಾರಣರಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ. ಹೊಸದಾಗಿ ಇಲಾಖೆಗೆ ನೇಮಕ ಹೊಂದಿರುವ ಸಿಬ್ಬಂದಿಗಳಿಗೆ ತಮಗೆ ತರಬೇತಿ ನೀಡಲಾಗಿದೆ. ಮುಂದಿನ ಮುವತ್ತೈದು ವರ್ಷ ನಿಮ್ಮ ಜೊತೆಗೆ ಇರುತ್ತದೆ. ಕರ್ತವ್ಯದಲ್ಲಿ ಶಿಸ್ತು ಪಾಲನೆ ಮೂಲಕ ಇಲಾಖೆಯ ಕೀರ್ತಿ ಹೆಚ್ಚಿಸಬೇಕು ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಎನ್‌ಸಿಸಿ ತರಬೇತಿ ಪಡೆದುಕೊಂಡಿದ್ದೇನೆ. ನನ್ನ ಜೀವನದಲ್ಲಿ ಶಿಸ್ತು ಬಂದಿರುವುದಕದಕೆ ಇದೇ ಮೂಲ ಕಾರಣ. ನೀವು ಪಡೆದುಕೊಂಡಿರುವ ತರಬೇತಿಯು ಸಹ ಕರ್ತವ್ಯದಲ್ಲಿ ಮಾತ್ರವಲ್ಲದೇ, ದೈನಂದಿನ ಜೀವನವು ಶಿಸ್ತಿನಿಂದ ಇರಲಿದೆ ಎಂದು ಹೇಳಿದರು. ಸಂವಿಧಾನ ನಮ್ಮ ದೇಶದ ಮೂಲ ಗ್ರಂಥ. ವಿಶ್ವದಲ್ಲೇ ಹೆಚ್ಚು ಪ್ರಖ್ಯಾತಿ ಪಡೆದಿದೆ. 148 ಕೋಟಿ ಜನಸಂಖ್ಯೆಗೆ ಆಧಾರವಾಗಿದೆ. ಇದು ಇಲ್ಲವಾಗಿದ್ದರೆ ಯಾವ ಸಮಸ್ಯೆಗೂ ಉತ್ತರ ಸಿಗುವುದಿಲ್ಲ. ಸಂವಿಧಾನವು ಭಗವದ್ಗೀತೆ, ಕುರಾನ್, ಬೈಬಲ್ ಇದ್ದಂತೆ‌ ಎಂದರು.

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಯಾವುದೇ ಧರ್ಮ, ರಾಜಕೀಯ, ವ್ಯಕ್ತಿಗೆ ಕೆಲಸ ಮಾಡುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಿಮಗೆ ಪ್ರಮಾಣ ಬೋದನೆ ಮಾಡಲಾಗಿದೆ‌ ಅದೇ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಆಧುನಿಕ ಜಗತ್ತು ತಾಂತ್ರಿಕವಾಗಿ ಸಾಕಷ್ಟು ಬದಲಾವಣೆ ಕಂಡಿದೆ. ಅಗ್ನಿ ಶಾಮಕ ದಳ‌ ಮತ್ತು ತುರ್ತುಸೇವೆಯ ಐವತ್ತು ವರ್ಷಗಳ ಹಿಂದೆ ಸಿಬ್ಬಂದಿಗಳ ಕಾರ್ಯವೈಖರಿ ಬೇರೆ ಇತ್ತು. ಈಗ ಬದಲಾಗಿದೆ. ನಗರಗಳಲ್ಲಿ ದೊಡ್ಡ ಕಟ್ಟಡಗಳು ನಿರ್ಮಣವಾಗಿವೆ. ಅವಘಡಗಳು ಸಂಭವಿಸಿದಾಗ ಹೇಗೆ ನಿಭಾಯಿಸಬೇಕು ಎಂದು ತರಬೇತಿ ನೀಡಲಾಗಿದೆ. ತಾಂತ್ರಿಕ ಉಪಕರಣಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಉತ್ತರ ಕರ್ನಾಟಕ ಭಾಗದದವು ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಗೆ ನೇಮಕಾತಿ ಹೊಂದುತ್ತಿದ್ದಾರೆ. ಇದು ಸಂತೋಷದಾಯಕ ವಿಚಾರ. ಈ ಭಾಗದವರು ಸಹ ನೇಮಕ ಹೊಂದಲು ಆಸಕ್ತಿ ತೋರಬೇಕು ಎಂದರು.

ಬಿಜಾಪುರದ ಇಂಡಿ ತಾಲ್ಲೂಕಿನ ಲಚ್ಚಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಸಾತ್ವಿಕ್ ಎಂಬ ಮಗುವನ್ನು ನಮ್ಮ ಸಿಬ್ಬಂದಿ ನಿರಂತರ ಕಾರ್ಯಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದ್ದಾರೆ ಎಂಬುದನ್ನು ಕೇಳಲು ಸುಲಭ. ಆದರೆ ಜೀವದ ಹಂಗು ತೊರೆದು, ತಮ್ಮ ಕುಟುಂಬವನ್ನು ಜ್ಞಾಪಿಸಿಕೊಳ್ಳದೆ ಸತತ 19 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+