ಕರ್ನಾಟಕ ಚುನಾವಣೆ : 100 ಕ್ಷೇತ್ರಗಳಲ್ಲಿ ಎನ್‌ಸಿಪಿ ಸ್ಪರ್ಧೆ

Posted By: Gururaj
Subscribe to Oneindia Kannada

ಬೆಂಗಳೂರು, ಮಾರ್ಚ್ 9 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಎನ್‌ಸಿಪಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಎನ್‌ಸಿಪಿಯ ರಾಜ್ಯ ಸಂಚಾಲಕ ಪ್ರಕಾಶ್ ಕೆ.ಮೋರೆ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. '100ಕ್ಕೂ ಅಧಿಕ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ನೂರಾರು ಅಭ್ಯರ್ಥಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ' ಎಂದರು.

ಜೆಡಿಎಸ್ ಬಲದಿಂದ ಎನ್ ಸಿಪಿಗೆ ಕರ್ನಾಟಕದಲ್ಲಿ ಗೆಲ್ಲುವ ವಿಶ್ವಾಸ

'ಜೆಡಿಎಸ್ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆಯುತ್ತಿವೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಪಿ.ಜಿ.ಆರ್.ಸಿಂಧ್ಯಾ ಅವರ ಜೊತೆ ಮಾತನಾಡಿದ ಬಳಿಕ ಶರತ್ ಪವಾರ್ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ' ಎಂದು ಪ್ರಕಾಶ್ ಕೆ.ಮೋರೆ ಹೇಳಿದರು.

NCP to contest in 100 seats in Karnataka assembly elections 2018

ಎನ್‌ಸಿಪಿ ತಿಲಕ್ ಆರ್.ನಂಬಿಯಾರ್, ಅಶೋಕ್ ಜಾವಳ್ಳಿ, ಎಸ್‌.ಎ.ಶೈಕ್ ಅವರನ್ನು ಪಕ್ಷದ ಕರ್ನಾಟಕ ರಾಜ್ಯದ ವಕ್ತಾರರನ್ನಾಗಿ ನೇಮಕ ಮಾಡಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಜೆಡಿಎಸ್‌ ಪಕ್ಷ ಈಗಾಗಲೇ ಬಿಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ. 20 ಕ್ಷೇತ್ರದಲ್ಲಿ ಬಿಎಸ್‌ಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Nationalist Congress Party (NCP) Karnataka convenor Prakash K.More said that, NCP will field candidates in 100 constituencies in the Karnataka assembly elections 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ