ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜೆಡಿಎಸ್ ಗೆ ಒಲಿದ ಈ ಕ್ಷೇತ್ರ: ಮೈತ್ರಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು, ಜನವರಿ 29: ಲೋಕಸಭಾ ಚುನಾವಣೆ ಹಿನ್ನೆಲೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಕಣಕ್ಕಿಳಿಸಿದ್ದಾರೆ.
ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ೯(ಸೋಮವಾರ) ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಉಪಸ್ಥಿತರಿದ್ದರು.
ಯಡಿಯೂರಪ್ಪ ನಿವಾಸದಲ್ಲಿ ಮೈತ್ರಿ ನಾಯಕರು ಸಭೆ
ಬಿಜೆಪಿ ಹಾಗೂ ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆಗೆ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡ ಬಳಿಕ ಮೈತ್ರಿ ನಾಯಕರೆಲ್ಲ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರನ್ನು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಲೋಕಸಭಾ ಚುನಾವಣೆ ತಯಾರಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಕುರಿತು ಚರ್ಚೆ ನಡೆದಿದ್ದು, ಈ ಕ್ಷೇತ್ರವನ್ನ ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಿತ್ತು. ಈ ನಿರ್ಧಾರಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ಇದೀಗ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಕಣಕ್ಕಿಳಿಸಿದ್ದಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ, ಇದೀಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಬಿಜೆಪಿಯೂ ಜೆಡಿಎಸ್ಗೆ ಬಿಟ್ಟುಕೊಡುವ ಬಗ್ಗೆ ತಿರ್ಮಾನಿಸಿದ್ದು, ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಕಣಕ್ಕಿಳಿಸಿದ್ದಾರೆ.












Click it and Unblock the Notifications