NDTV Survey: ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು ಬಿಜೆಪಿಗೆ ಮತ ನೀಡುತ್ತಾರಾ?; ಇಲ್ಲಿದೆ ವಿವರ
ಕರ್ನಾಟಕ ರಾಜ್ಯದ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಪಡೆದ ಹೆಚ್ಚಿನ ಫಲಾನುಭವಿಗಳು 2023ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಮತ ಹಾಕುವುದಾಗಿ ಸೂಚಿಸಿದ್ದಾರೆ ಎಂದು ಎನ್‌ಡಿಟಿವಿ ಮತ್ತು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಾರ್ವಜನಿಕ ಅಭಿಪ್ರಾಯ ಸಮೀಕ್ಷೆ ತಿಳಿಸಿದೆ.
ಕಲ್ಯಾಣ ಯೋಜನೆಗಳ ಫಲಾನುಭವಿಗಳು ಶೇ.40ಕ್ಕಿಂತ ಹೆಚ್ಚು
ಬಿಜೆಪಿ ಪಕ್ಷಕ್ಕೆ ಮತ ಹಾಕಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳು ಶೇ.40ಕ್ಕಿಂತ ಹೆಚ್ಚಿದ್ದರೆ, ವಿಪಕ್ಷ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ಸೂಚಿಸಿದವರು ಶೇಕಡಾ 30ಕ್ಕಿಂತ ಹೆಚ್ಚು ಮತ್ತು ಶೇ.40ಕ್ಕಿಂತ ಕಡಿಮೆ ಇದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಭಾಗ್ಯಲಕ್ಷ್ಮಿ ಯೋಜನೆ, ಹೆಣ್ಣು ಮಕ್ಕಳಿಗೆ ಅವರು 10ನೇ ತರಗತಿ ಓದುವವರೆಗೆ ಹಣಕಾಸಿನ ನೆರವು ನೀಡುತ್ತದೆ. ಶೇ.45ರಷ್ಟು ಜನರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಶೇ.44ರಷ್ಟು ಫಲಾನುಭವಿಗಳು ಬಿಜೆಪಿಗೆ ಮತ ಹಾಕುವುದಾಗಿ ಹೇಳಿದ್ದಾರೆ. ಶೇ.32ರಷ್ಟು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಾಗಿ ತಿಳಿಸಿದ್ದಾರೆ.
ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯ ಪಿಂಚಣಿ ಶೇ.29ರಷ್ಟು ಫಲಾನುಭವಿಗಳಿಗೆ ತಲುಪಿದ್ದು, ಶೇ.45ರಷ್ಟು ಜನರು ಬಿಜೆಪಿಗೆ ಮತ ಹಾಕುವುದಾಗಿ ಮತ್ತು ಶೇ.36ರಷ್ಟು ಜನರು ಕಾಂಗ್ರೆಸ್‌ಗೆ ಮತ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯ ಕವಚ ಯೋಜನೆ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆರೋಗ್ಯ ಯೋಜನೆಯು ಶೇ.23 ಪ್ರತಿಶತ ಫಲಾನುಭವಿಗಳಿಗೆ ಮುಟ್ಟಿದ್ದು, ಶೇ.51ರಷ್ಟು ಜನರು ಬಿಜೆಪಿಗೆ ಮತ ಹಾಕುವುದಾಗಿ ಹಾಗೂ ಶೇ.31ರಷ್ಟು ಮಂದಿ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಕೂಡ ಬಿಜೆಪಿಗೆ ಮತ ಹಾಕುವುದಾಗಿ ಸೂಚಿಸಿದ್ದಾರೆ.
ಅದರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು (ನರೇಗಾ) ಶೇ.31ರಷ್ಟು ಜನರು ಲಾಭ ಪಡೆದಿದ್ದಾರೆ. ಹೀಗಾಗಿ ಶೇ.46ರಷ್ಟು ಜನರು ತಮ್ಮ ಮತವನ್ನು ಬಿಜೆಪಿಗೆ ಹಾಕುತ್ತೇವೆ ಎಂದು ಸೂಚಿಸಿದ್ದು, ಶೇ.34ರಷ್ಟು ಜನರು ಕಾಂಗ್ರೆಸ್‌ಗೆ ತಮ್ಮ ಮತ ಎಂದಿದ್ದಾರೆ.

ಶೇ.47ರಷ್ಟು ಜನರು ಬಿಜೆಪಿಗೆ ಮತ
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಪಘಾತ ವಿಮಾ ಯೋಜನೆಯು ಶೇ.21ರಷ್ಟು ಫಲಾನುಭವಿಗಳಿಗೆ ಹೋಗಿದ್ದು, ಶೇ.47ರಷ್ಟು ಜನರು ಬಿಜೆಪಿಗೆ ಮತ ಹಾಕಲಿದ್ದರೆ, ಶೇ.33ರಷ್ಟು ಮಂದಿ ಕಾಂಗ್ರೆಸ್‌ಗೆ ಮತ ಹಾಕಲಿದ್ದಾರೆ ಎಂದು ಸಮೀಕ್ಷೆಯ ಮೂಲಕ ತಿಳಿದುಬಂದಿದೆ.
ಮೂಲಸೌಕರ್ಯ ಅಭಿವೃದ್ಧಿ ಮತ್ತು ಅಗತ್ಯ ಸೇವೆಗಳ ಪೂರೈಕೆಯಲ್ಲಿ ಹೆಚ್ಚಿನ ಶೇಕಡಾವಾರು ಪ್ರತಿಕ್ರಿಯಿಸಿದ ಜನರು ಯಾವುದೇ ಸುಧಾರಣೆ ಕಂಡಿಲ್ಲ ಎಂದು ಹೇಳಿದವರಿಗೆ ಹೋಲಿಸಿದರೆ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದವರೇ ಜಾಸ್ತಿ ಇದ್ದಾರೆ. ಆಡಳಿತಾರೂಢ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರು ಒಲವು ತೋರಿದ್ದಾರೆ.
ಕರ್ನಾಟಕದಲ್ಲಿ ರಸ್ತೆಗಳು ಸುಧಾರಣೆ ಕಂಡಿವೆ
ಇನ್ನು ಶೇ.52 ರಷ್ಟು ಜನರು ಕರ್ನಾಟಕದಲ್ಲಿ ರಸ್ತೆಗಳು ಸುಧಾರಣೆ ಕಂಡಿವೆ ಎಂದು ಹೇಳಿದ್ದರೆ, ಶೇ.16ರಷ್ಟು ಜನರು ರಸ್ತೆಗಳ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿಸಿದ್ದಾರೆ.
ಶೇ.46ರಷ್ಟು ಜನರು ವಿದ್ಯುತ್ ಪೂರೈಕೆ ಉತ್ತಮವಾಗಿದೆ ಎಂದು ಹೇಳಿದ್ದರೆ, ಶೇ.10ರಷ್ಟು ವಿದ್ಯುತ್ ಪೂರೈಕೆ ಸರಿಯಾಗಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಹೆಚ್ಚಿನ ಶೇಕಡಾವಾರು ಜನರು ಸರ್ಕಾರಿ ಆಸ್ಪತ್ರೆಗಳು ಮತ್ತು ಶಾಲೆಗಳಲ್ಲಿ ಪರಿಸ್ಥಿತಿ ಹಾಗೆಯೇ ಉಳಿದಿದೆ ಎಂದು ಹೇಳಿದರು.
ಶೇ.30ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳು ಸುಧಾರಣೆ ಕಂಡಿದೆ ಎಂದು ಅಭಿಪ್ರಾಯಪಟ್ಟಿದ್ದರೆ, ಶೇ.48ರಷ್ಟು ಜನರು ಆಸ್ಪತ್ರೆಗಳ ಪರಿಸ್ಥಿತಿ ಹಾಗೆಯೇ ಉಳಿದಿದೆ ಎಂದಿದ್ದಾರೆ. ಶೇಕಡಾ 35ರಷ್ಟು ಜನರು ಸರ್ಕಾರಿ ಶಾಲೆಗಳ ಪರಿಸ್ಥಿತಿ ಉತ್ತಮವಾಗಿವೆ ಎಂದು ಪ್ರತಿಕ್ರಿಯಿಸಿದ್ದರೆ, ಶೇ.45ರಷ್ಟು ಜನರು ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ ಎಂದು ತಿಳಿಸಿದ್ದಾರೆ.












Click it and Unblock the Notifications