ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಹೆಚ್ಚಳ; ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಹರಡುವಿಕೆ ತಡೆಯಲು ಅವಶ್ಯಕವಾಗಿ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿದ ಅವರು, ರಾಜ್ಯದ ಕೊರೊನಾ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ. ಕೊರೊನಾ ಮುಂದಿನ ಅಲೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

 ದೇಶದಲ್ಲಿ ಮತ್ತೆ ಏರಿಕೆಯಾದ ಕೊರೊನಾ; 44,230 ಹೊಸ ಪ್ರಕರಣ ದಾಖಲು ದೇಶದಲ್ಲಿ ಮತ್ತೆ ಏರಿಕೆಯಾದ ಕೊರೊನಾ; 44,230 ಹೊಸ ಪ್ರಕರಣ ದಾಖಲು

ರಾಜ್ಯದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Need To Tighten Borders To Stop Spread Of Coronavirus Says CM Bommai

"ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೊನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೊನಾ ಸೋಂಕಿನ ಹರಡುವಿಕೆ ತಡೆಯುವುದು" ಎಂದು ಹೇಳಿದ್ದಾರೆ.

ಕೇರಳದ ನಂತರ ನೆರೆಯ ಕರ್ನಾಟಕ ಮತ್ತು ತಮಿಳುನಾಡು ಕೂಡ ಗುರುವಾರ ಹೊಸ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ದಾಖಲಿಸಿದೆ.

ರಾಜ್ಯದಲ್ಲಿ ಗುರುವಾರ 2052 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1332 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೂ 36491 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬುಧವಾರದ 1,531 ಹೊಸ ಪ್ರಕರಣಗಳಿಂದ ದೈನಂದಿನ ಪ್ರಮಾಣವು 34 ಪ್ರತಿಶತದಷ್ಟು ಹೆಚ್ಚಾಗಿದೆ. ದಿನವು 1,332 ಸೋಂಕಿತರು ಬಿಡುಗಡೆಯಾಗಿದ್ದಾರೆ. ಹೊಸ ಪ್ರಕರಣಗಳನ್ನು ಹೆಚ್ಚಾಗುವುದು ಮುಂದುವರಿಯುತ್ತಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು ಚೇತರಿಕೆಯ ಪ್ರಮಾಣ 28,41,479 ಆಗಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2901247ಕ್ಕೆ ಏರಿಕೆಯಾಗಿದೆ. ಒಟ್ಟು 2841479 ಸೋಂಕಿತರು ಗುಣಮುಖರಾಗಿದ್ದು. 23253 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಏರಿಕೆಯೊಂದಿಗೆ, ಕರ್ನಾಟಕದಲ್ಲಿ ಕೊರೊನಾ ಸೋಂಕು ತಪಾಸಣೆ ವೇಗ ತಗ್ಗಿದೆ. ಗುರುವಾರ 29,402 ಮಂದಿಗೆ ರಾಪಿಡ್ ಆಂಟಿಜೆನ್ ಟೆಸ್ಟ್ ಹಾಗೂ 1,19,459 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,48,861 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 70,80,543 ಜನರಿಗೆ ರಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗುರುವಾರ 506 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1226463ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 15852ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.37ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.70ರಷ್ಟಿದೆ.

ದೇಶದಲ್ಲಿ ಕೆಲವು ವಾರಗಳಿಂದ ಇಳಿಕೆಯಾಗಿದ್ದ ಕೊರೊನಾ ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ದೇಶದಲ್ಲಿ ದಾಖಲಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕೇರಳ ರಾಜ್ಯವೊಂದರಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸದ್ದಿಲ್ಲದೇ ಏರಿಕೆ ಹಾದಿ ಹಿಡಿದಿವೆ.

Recommended Video

ಕಷ್ಟಕ್ಕೆ ಸ್ಪಂದಿಸೋ ಹೆಮ್ಮೆಯ ನಾಯಕ ಜಮೀರ್! | Oneindia Kannada

ದಕ್ಷಿಣ ರಾಜ್ಯಗಳನ್ನು ಹೊರತುಪಡಿಸಿ, ಮಹಾರಾಷ್ಟ್ರದಲ್ಲಿಯೂ ಸೋಂಕುಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದೆ. ಮಹಾರಾಷ್ಟ್ರದಲ್ಲಿ 7,242 ಹೊಸ ಪ್ರಕರಣಗಳು ಗುರುವಾರ ದಾಖಲಾಗಿವೆ. ಇದು ಒಂದು ವಾರದಲ್ಲಿ ಅತಿ ಹೆಚ್ಚಿನ ಕೊರೊನಾ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಲ್ಲಿ ಭಾರತದ ಹೊಸ ಪ್ರಕರಣಗಳಲ್ಲಿ 50% ಕ್ಕಿಂತ ಹೆಚ್ಚು ಕೇರಳದ್ದು ಆಗುತ್ತಿದೆ. ಕೇರಳವು ಗುರುವಾರ 22,064 ಹೊಸ ಪ್ರಕರಣಗಳನ್ನು ದಾಖಲಿಸಿದೆ. ಏತನ್ಮಧ್ಯೆ, ಕರ್ನಾಟಕದ ಪ್ರಕರಣಗಳ ಸಂಖ್ಯೆ 19 ದಿನಗಳ ನಂತರ 2,000 ದಾಟಿದೆ.

English summary
CM Basavaraj Bommai on Friday said there is a need to tighten the borders and take measures to put in place compulsory testing to stop the spread of the coronavirus,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X