NEET, JEE ಪರೀಕ್ಷೆಗೆ ಉಚಿತ ತರಬೇತಿ, ಅರ್ಜಿ ಸಲ್ಲಿಕೆ ಹೇಗೆ?
ಬೆಂಗಳೂರು, ನವೆಂಬರ್ 20: ಉಚಿತವಾಗಿ ನೀಟ್ ಮತ್ತು ಜೆಇಇ ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿ ಉಚಿತವಾಗಿದ್ದು, ಆಸಕ್ತರು 4/12/2023ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು.
ಕರ್ನಾಟಕದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಕಛೇರಿ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿ ಕರೆಯಲಾಗಿದೆ.

ತರಬೇತಿಯ ವಿವರ; ಬೆಂಗಳೂರು, ಮೈಸೂರು, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ಮಾತ್ರ ತರಬೇತಿಯನ್ನು ನೀಡಲಾಗುತ್ತದೆ. ಈ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ/ 10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
Online ಮೂಲಕ ಅರ್ಜಿ ಸಲ್ಲಿಸಬೇಕು. ಇದಕ್ಕಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ಮಾತ್ರ ನೀಡಲಿದ್ದು, ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು.
ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಕ್ಲಾಸ್‌ರೂಂ (ಆಫ್‌ಲೈನ್) ಅಥವಾ ಆನ್‌ಲೈನ್ ಮೂಲಕ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಸೂಚನೆಗಳನ್ನು ಸಹ ನೀಡಲಾಗಿದೆ.
* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪವರ್ಗ-1, 2ಎ, 3ಎ ಅಥವಾ 3ಬಿ ಯ ಜಾತಿಗೆ ಸರಿರಬೇಕು.
* ಅಭ್ಯರ್ಥಿಯ ಮತ್ತು ಕುಟಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.6 ಲಕ್ಷಗಳು.
* ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಹೆಸರಿನಲ್ಲಿಯೇ ಇರಬೇಕು.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ/ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
* ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು.
* ತರಬೇತಿಯು ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ ಪ್ರಯಾಣ ಭತ್ಯೆ ಹಾಗೂ ಇತರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪ ಸಂಖ್ಯಾತ ಅಭ್ಯರ್ಥಿಗಳು ಈ ಇಲಾಖೆಯಿಂದ ನೀಡುವ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
* ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿ ವಿದ್ಯಾರ್ಥಿಯ ಹೆಸರಿನಲ್ಲಿರಬೇಕು, ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
* ಅರ್ಹ ಆಸಕ್ತ ವಿದ್ಯಾರ್ಥಿಗಳು Online ಮೂಲಕವೇ ಅರ್ಜಿಗಳನ್ನು ಸಲ್ಲಿಸುವುದು. ಬೇರೆ ಯಾವ ಪಕಾರಗಳಲ್ಲೂ ಸಲ್ಲಿಸುವ ವಿದ್ಯಾರ್ಥಿಯ ಅರ್ಜಿಯನ್ನಾಗಲಿ ಅಥವಾ ಮನವಿಯನ್ನಾಗಲಿ ಪರಿಗಣಿಸಲಾಗುವುದಿಲ್ಲ.
* ವಿದ್ಯಾರ್ಥಿಗಳು ತರಬೇತಿಯನ್ನು ಮಧ್ಯಂತರದಲ್ಲಿ ಬಿಟ್ಟು ಹೋದಲ್ಲಿ/ ತರಬೇತಿಯನ್ನು ಪೂರ್ಣಗೊಳಿಸದಿದ್ದಲ್ಲಿ, ಅವರ ತರಬೇತಿಗೆ ಆಗಿರುವ/ ಆಗುವ ವೆಚ್ಚವನ್ನು ಅಂತಹ ವಿದ್ಯಾರ್ಥಿಗಳು/ ಪೋಷಕರಿಂದ ವಸೂಲಾತಿ ಮಾಡಲಾಗುವುದು.
* ವಿದ್ಯಾರ್ಥಿಗಳಿಗೆ ಒಂದು ಸೆಟ್ ಕೋರ್ಸ್ ಮೆಟಿರಿಯಲ್‌ಗಳನ್ನು ಸಂಸ್ಥೆಗಳಿಂದ ಉಚಿತವಾಗಿ ನೀಡಲಾಗುವುದು.
* ತರಬೇತಿಯು ಉಚಿತವಾಗಿದ್ದು ವಿದ್ಯಾರ್ಥಿಗಳ ಶುಲ್ಕವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ 8050370004 (ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
SSLC Hindi Exam: ಮಾರ್ಚ್ 30ರ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications