NEET: ಕನ್ನಡ ಭಾಷಾ ಪರೀಕ್ಷೆ ಜುಲೈ 15ಕ್ಕೆ ಮುಂದೂಡಿಕೆ
ಬೆಂಗಳೂರು, ಜುಲೈ 10: ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಪಡೆಯಲು ಇಚ್ಛಿಸುವ ಹೊರ ರಾಜ್ಯ ಮತ್ತು ಗಡಿನಾಡಿನ ವಿದ್ಯಾರ್ಥಿಗಳಿಗೆ ಇಂದು ಕನ್ನಡ ಭಾಷಾ ಪರೀಕ್ಷೆ ನಡೆಯಬೇಕಾಗಿತ್ತು. ಇದನ್ನು ಜುಲೈ 15ಕ್ಕೆ ಮುಂದೂಡಲಾಗಿದೆ.
ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ರಾಜ್ಯದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಪಡೆಯಲು ಇಚ್ಛಿಸುವ ಹೊರ ರಾಜ್ಯ ಮತ್ತು ಗಡಿನಾಡಿನ ವಿದ್ಯಾರ್ಥಿಗಳು ಕನ್ನಡ ಭಾಷಾ ಪರೀಕ್ಷೆಯನ್ನು ಪಾಸು ಮಾಡುವುದು ಕಡ್ಡಾಯವಾಗಿದೆ. ಬಳಿಕವೇ ಅವರು ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದು












Click it and Unblock the Notifications