ಚಾಲಕರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ: ಹೈಕೋರ್ಟ್
ಬೆಂಗಳೂರು, ಮೇ 09: ನಿರ್ಲಕ್ಷ್ಯದಿಂದ ಆಂಬ್ಯುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿದ್ದ ಸವಾರನಿಗೆ ವಿಚಾರಣಾ ನ್ಯಾಯಲಯ ವಿಧಿಸಿದ್ದ 6 ತಿಂಗಳ ಶಿಕ್ಷೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಅಷ್ಟೇ ಅಲ್ಲ ಅಜಾಗರೂಕವಾಗಿ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾದವರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯಾ ಮಾಡಿದಂತಾಗಲಿದೆ ಎಂದು ಹೇಳಿದೆ. ಹಾಗಾಗಿ ತಪ್ಪೆಸಗಿದ್ದ ಆ ಚಾಲಕನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿದೆ.

ಶಿಕ್ಷೆಯನ್ನು ಖಚಿತ ಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡಿವಳೆ ತಾಲೂಕಿನ ಸಂತೋಷ್ ಎಂಬುವರು ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಹೈಕೋರ್ಟ್ ಆದೇಶವೇನು?: ರಸ್ತೆ ಅಘಾತದಿಂದ ಒಂದು ಜೀವ ಕಳೆದುಕೊಳ್ಳುವಂತಹ ಪ್ರಕರಣಗಳಲ್ಲಿ ಕನಿಷ್ಟ ಪ್ರಮಾಣದ ಶಿಕ್ಷೆ ಮತ್ತು ಕೆಲವು ರೂ. ಗಳ ದಂಡ ವಿಧಿಸಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರ ಕುಟುಂಬಕ್ಕೆ ಅನ್ಯಾಯ ವೆಸಗಿದಂತಾಗಲಿದೆ.
ಅಲ್ಲದೆ, ಚಾಲಕರ ಅಜಾಗರೂಕ ಚಾಲನೆಯನ್ನು ಪ್ರೋತ್ಸಾಹಿಸಿದಂತಾಗಲಿದೆ. ಜತೆಗೆ, ಅವರ ವಾಹನಗಳನ್ನು ಸಂಚಾರ ನಿಯಮಗಳನ್ನು ಪಾಲಿಸದೆ ನಿರ್ಲಕ್ಷ್ಯ ಹೆಚ್ಚಳವಾಗಲು ಕಾರಣವಾಗಲಿದೆ. ಹಾಗೂ ಮನುಷ್ಯನ ಜೀವದ ಮೌಲ್ಯಕ್ಕೆ ಬೆಲೆಯೇ ಇಲ್ಲದಂತಾಗಲಿದೆ ಎಂದು ಪೀಠ ತಿಳಿಸಿದೆ.
ಪ್ರಕರಣದ ಗಂಭೀರತೆ ಮತ್ತು ಸಾಕ್ಷ್ಯಾಧಾರಗಳನ್ನು ಪರಿಗಣಿಸಿರುವ ವಿಚಾರಣಾ ನ್ಯಾಯಾಲಯ ಸರಿಯಾದ ಕಾನೂನು ಪ್ರಕಾರವೇ ಶಿಕ್ಷೆ ವಿಧಿಸಿದೆ. ಈ ಶಿಕ್ಷೆ ಅತ್ಯಂತ ಕಠಿಣವೂ ಅಲ್ಲ ಮತ್ತು ಸರಳವೂ ಅಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.
ಪ್ರಕರಣದ ಹಿನ್ನಲೆ: ಅರ್ಜಿದಾರ ತಾನು ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್ ವಾಹನವನ್ನು 2011ರ ಏಪ್ರಿಲ್ 19ರಂದು ಮೂಡಿಗೆರೆಯಿಂದ ಮಂಗಳೂರು ಕಡೆಗೆ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದರು. ಈ ವೇಳೆ ಬಿದರಳ್ಳಿ ಎಂಬ ಗ್ರಾಮದಲ್ಲಿ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇತರೆ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.
ಪ್ರಕರಣ ದಾಖಲಿಸಿಕೊಂಡಿದ್ದ ಮೂಡಿಗೆರೆ ಪೊಲೀಸರು ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 6 ತಿಂಗಳು ಸಾಧಾರಣ ಶಿಕ್ಷೆ ಮತ್ತು 4 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು.
ಇದನ್ನು ಅರ್ಜಿದಾರರು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶವನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications