ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
ಬೆಂಗಳೂರು, ಏಪ್ರಿಲ್ 20: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಕನ್ನಡ ನಟ ಧ್ರುವ ಸರ್ಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಸಿರುವ ಧ್ರುವ ಸರ್ಜಾ, ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ' ಎಂದು ನಟ ಧ್ರುವ ಸರ್ಜಾ ಅವರು 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ಅವರು ನೇಹಾ ಹಿರೇಮಠ್ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.

ಇನ್ನೂ ಧ್ರುವ ಸರ್ಜಾ ಈ ಕುರಿತು ಧ್ವನಿ ಎತ್ತಿದಕ್ಕೆ ಅಭಿಮಾನಿಗಳು ಪ್ರಶಂಸೆ ಸೂಚಿಸಿದ್ದಾರೆ. 'ತಮ್ಮ ಸಾಮಾಜಿಕ ಕಾಳಜಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ಅಲ್ಲದೇ ಅಪರಾಧಿಗೆ ಇನ್ನೂ ಜೀವಂತವಾಗಿ ಇಟ್ಟಿರುವುದೇ ಒಂದು ವಿಪರ್ಯಾಸ' ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಕೊಲೆ ಮಾಡಿದ್ದಕ್ಕೆ ವಿಡಿಯೋ ಇದೆ. ಸಾಕ್ಷಿ ಇನ್ನೇನು ಬೇಕು' ಎಂದು 'ಎಕ್ಸ್' ಬಳಕೆದಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏
— Dhruva Sarja (@DhruvaSarja) April 19, 2024
ಜೈ ಆಂಜನೇಯ 🙏 pic.twitter.com/z1gkJkEETU
ನೇಹಾ ಹಿರೇಮಠ್‌ಗೆ ನ್ಯಾಯ ಸಿಗಲೇಬೇಕು: ರಕ್ಷಿತಾ ಪ್ರೇಮ್
ನೇಹಾ ಹಿರೇಮಠ್‌ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್..'' ಎಂದು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತಾ ಪ್ರೇಮ್ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್‌ನಲ್ಲೇ ಹತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ'' ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.












Click it and Unblock the Notifications