ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್
ಬೆಂಗಳೂರು, ಏಪ್ರಿಲ್ 20: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿ ಫಯಾಜ್ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಕನ್ನಡ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಸಿರುವ ನಟಿ ರಚಿತಾ ರಾಮ್, ನೇಹಾ ಫೋಟೋ ಹಂಚುವ ಮೂಲಕ ನ್ಯಾಯಕ್ಕಾಗಿ ಕೂಗೆತ್ತಿದ್ದಾರೆ. ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ. ಸರ್ಕಾರಕ್ಕೆ ನನ್ನ ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ #Wewantjustice ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.













Click it and Unblock the Notifications