ನೇಹಾ ಹಿರೇಮಠ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ಗುರುವಾರ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿ ವಿಶ್ವ ವಿದ್ಯಾಲಯದಲ್ಲಿ ಪ್ರಥಮ ವರ್ಷ ಎಂಸಿಎ ಓದುತ್ತಿದ್ದ ನೇಹಾ ಹಿರೇಮಠರನ್ನು ಫಯಾಜ್ ಎನ್ನುವಾತ ಒಂಭತ್ತು ಬಾರಿ ಇರಿದುಕೊಂದಿದ್ದಾನೆ. ಪೊಲಿಸರು ಈಗಾಗಲೇ ಫಯಾಜ್‌ನನ್ನು ಬಂಧಿಸಿದ್ದಾರೆ.

Neha Hiremath Murder Case Outrage Against Karnataka Government

ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ವಿಪಕ್ಷ ನಾಯಕರು ಕಿಡಿ ಕಾರಿದ್ದಾರೆ.

ಗ್ಯಾರಂಟಿ ಜೊತೆ ರಕ್ಷಣೆ ಕೊಡಿ

ಘಟನೆ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ ಪ್ರತಿಕ್ರಿಯೆ ನೀಡಿದ್ದು, ತುಷ್ಠೀಕರಣ ರಾಜಕೀಯ ಬಿಟ್ಟು ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವಂತೆ ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, "ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಮುಸ್ಲಿಂ ಯುವಕರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆಯಾಗಿ ಇನ್ನೂ 48 ಗಂಟೆಗಳೂ ಕಳೆದಿಲ್ಲ, ಅಷ್ಟರಲ್ಲೇ ಮತಾಂಧರ ಮತ್ತೊಂದು ಮಸಲತ್ತು ಬೆಳಕಿಗೆ ಬಂದಿದೆ.

ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಹುಬ್ಬಳ್ಳಿ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು ಮುಸ್ಲಿಂ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ರಾಜ್ಯದಲ್ಲಿ ಮತಾಂಧರು ಯಾವ ಮಟ್ಟಕ್ಕೆ ಅಟ್ಟಹಾಸ ಮೆರೆಯುತ್ತಿದ್ದಾರೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ.

ಸಿಎಂ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಓಲೈಕೆ ರಾಜಕಾರಣದಿಂದ ರಾಜ್ಯದಲ್ಲಿ ಮತಾಂಧರಿಗೆ, ಮೂಲಭೂತವಾದಿಗಳಿಗೆ ರೆಕ್ಕೆ-ಪುಕ್ಕ ಬಂದಿದ್ದು ಕಾನೂನಿನ ಭಯವೇ ಇಲ್ಲದಂತಾಗಿದೆ.

ಯಾವುದೇ ಮುಲಾಜಿಲ್ಲದೆ ಈ ಕೂಡಲೇ ಆ ರಾಕ್ಷಸನನ್ನು ಬಂಧಿಸಿ ಕಾನೂನಿನ ವಶಕ್ಕೆ ಒಪ್ಪಿಸಬೇಕು. ಶಿಕ್ಷೆ ಆಗುವವರೆಗೂ ಬಿಡಬಾರದು.ಹೆಣ್ಣು ಮಕ್ಕಳಿಗೆ ಆ ಗ್ಯಾರೆಂಟಿ ಕೊಟ್ಟಿದ್ದೇವೆ, ಈ ಗ್ಯಾರೆಂಟಿ ಕೊಟ್ಟಿದ್ದೇವೆ ಎಂದು ಹಾದಿ ಬೀದಿಯಲ್ಲಿ ಭಜನೆ ಮಾಡುವ ಸಿಎಂ, ಡಿಸಿಎಂ ಮೊದಲು ಹೆಣ್ಣುಮಕ್ಕಳ ಬದುಕಿಗೆ ಗ್ಯಾರೆಂಟಿ ನೀಡಲಿ, ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರೆಂಟಿ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಟ್ವೀಟ್ ಮಾಡಿ, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಹಿಂದೂ ಯುವತಿ ನೇಹಾ ಕಗ್ಗೊಲೆ ಮಾಡಿರುವ ಫಯಾಜ್ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+