ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
ಬೆಂಗಳೂರು, ಏಪ್ರಿಲ್ 25: ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕೆಲವು ಗಂಟೆಗಳು ಮಾತ್ರ ಉಳಿದಿದೆ. ಇತ್ತ ರಾಜ್ಯದಲ್ಲಿನ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಕಮಲ-ದಳ ನಾಯಕರು ಮೈತ್ರಿಯಾಗಿದ್ದು, ಮೈತ್ರಿಯಲ್ಲಿ ಬಿರುಕಿದೆ ಎಂಬುದನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರೆ ಒಪ್ಪಿಕೊಂಡಿದ್ದಾರೆ.
ಹೌದು, ಹಾಸನದಲ್ಲಿ ಕೆಲವು ಬಿಜೆಪಿ ನಾಯಕರು ಸಹಕಾರ ಕೊಡುತ್ತಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದ್ದು, ಈ ಬಾರಿಯೂ ಸಂಕಷ್ಟದಲ್ಲಿ ದಳಪತಿಗಳು ಸಿಲುಕಿದಂತೆ ಕಾಣುತ್ತಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿತ್ತು. ಅಲ್ಲದೇ 2019 ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ನಡೆಸಿ ಹೀನಾಯವಾಗಿ ಸೋಲು ಅನುಭವಿಸಿದ್ದರು.

ಇದೀಗ 2024 ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಣದಲ್ಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಇತ್ತ ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಸ್ವಾಭಿಮಾನದ ಪ್ರಶ್ನೆಯಾಗಿತ್ತು. ಆದರೆ, ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಮೈತ್ರಿಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಕೈ ಸೇರಿದ್ದು, ಸುಮಲತಾ ಅಂಬರೀಶ್ ಕೊನೆಗೂ ಬಿಜೆಪಿ ಸೇರ್ಪಡೆಯಾಗಿದ್ದು, ಮಂಡ್ಯ ಮೈತ್ರಿ ಅಭ್ಯರ್ಥಿ ಪರ ಬೆಂಬಲ ಸೂಚಿಸಿರುವುದಾಗಿ ಹೇಳಿದ್ದಾರೆ. ಆದರೆ, ಇದುವರೆಗೂ ಸಹ ಕುಮಾರಸ್ವಾಮಿ ಅವರ ಪರ ಪ್ರಚಾರ ಮಾಡದೇ ಸೈಲೆಂಟ್ ಆಗಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ನಡೆಸಿದ್ರು, ಸುಮಲತಾ ಪರವಾಗಿ ನಟ ದರ್ಶನ್ ಹಾಗೂ ಯಶ್ ಅಬ್ಬರದ ಪ್ರಚಾರವನ್ನ ನಡೆಸಿದ್ರು. ಆದರೆ, ಇದೀಗ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರ ಸುಮಲತಾ ಅವರ ಆಪ್ತ ಹಾಗೂ ನಟ ದರ್ಶನ ಅವರು ಪ್ರಚಾರ ನಡೆಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇತ್ತ ಕುಮಾರಸ್ವಾಮಿ ಅವರ ಪರವಾಗಿ ಇದುವರೆಗೂ ಸುಮಲತಾ ಅಂಬರೀಶ್ ಅವರು ಪ್ರಚಾರ ನಡೆಸದೇ ಬೇರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು. ದಳಪತಿಗಳನ್ನ ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ.
ಇನ್ನೂ ಹಾಸನದಲ್ಲೂ ಸಹ ಮೊದಲಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ತೀವ್ರ ವಿರೋಧವನ್ನ ಹಾಸನ ನಾಯಕರು ವ್ಯಕ್ತಪಸಿದ್ದರು. ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಎದುರಾಗಿರುವ ಸಂಕಷ್ಟವನ್ನು ನಿವಾರಿಸುವಲ್ಲಿ ಇದೀಗ ಬಿಜೆಪಿ ನಾಯಕರು ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರೀತಂ ಗೌಡ ಪ್ರಚಾರ ಆರಂಭಿಸಿದ್ದಾರೆ. ಆದರೆ, ಎಲ್ಲಿಯೂ ಪ್ರಜ್ವಲ್‌ರೇವಣ್ಣ ಅವರ ಹೆಸರು ಹೇಳದೆ ಪ್ರಚಾರ ನಡೆಸಿದ್ದಾರೆ.
ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಕೋಟ್ಯಾಂತರ ಜನರು ಕನಸು ಕಟ್ಟಿಕೊಂಡಿದ್ದಾರೆ. ನಾನು ಕಳೆದ ಆರು ತಿಂಗಳಿನಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಅದಕ್ಕೂ ಮುನ್ನ ಬಿಜೆಪಿ 28 ಕ್ಕೆ 28 ಗೆಲ್ಲಬೇಕೆಂಬ ಕನಸಿನಿಂದ ಪ್ರಚಾರ ಮಾಡಿದ್ದೇನೆ ಎಂದು ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಹೆಸರು ಹೇಳದೇ ಪ್ರಚಾರ ನಡೆಸಿದ್ದಾರೆ. ಇತ್ತ ಹಾಸನ ಬಿಜೆಪಿ ಕೆಲ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ನಡೆಸುತ್ತಿದ್ದು,ಹಾಸನ ಕ್ಷೇತ್ರದಲ್ಲಿ ಕೆಲವು ಬಿಜೆಪಿ ನಾಯಕರ ಬೆಂಬಲ ಜೆಡಿಎಸ್ ಅಭ್ಯರ್ಥಿಗೆ ಸಿಕ್ಕಿಲ್ಲ ಎಂದು ದೇವೇಗೌಡ್ರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತಿನಿ. ಇವತ್ತು ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ, ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋಆಪರೇಟ್ ಮಾಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಕೋಆಪರೇಟ್ ಮಾಡ್ತಿಲ್ಲ. ಅದರಿಂದ ಕುಮಾರಸ್ವಾಮಿ ಏನೋ ಅಪಾಯ ಆಗುತ್ತೆ ಅಂತ, ಏನು ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ, ಅದು ಜೀವನ್ಮರಣದ ಪ್ರಶ್ನೆ ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು 140 ಕೋಟಿ ಎನ್‌ಓಸಿ ರಿಲೀಸ್ ಮಾಡಿದ್ದಾರೆ. 28 ಕ್ಕೆ 28 ಸ್ಥಾನ ಗೆಲ್ಲುಬೇಕು, ಯಾರೇ ಪ್ರಚಾರ, ಅಪಪ್ರಚಾರ ಏನೇ ಮಾಡಲಿ ಎಂದು ಹೆಚ್ ಡಿ ದೇವೇಗೌಡ್ರು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications