ಮುಂದಿನ ಶೈಕ್ಷಣಿಕ ವರ್ಷದಿಂಧ ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿ : ಬಿ.ಸಿ. ನಾಗೇಶ್
ಬೆಂಗಳೂರ ನ.10: ಮುಂದಿನ ವರ್ಷದಿಂದಲೇ ಕರ್ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಪ್ರಯತ್ನ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಸಹಯೋಗದಲ್ಲಿ ಬೆಂಗಳೂರಿನ ಜಯನಗರದಲ್ಲಿ ಆರ್.ವಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಸಚಿವ ಬಿ.ಸಿ. ನಾಗೇಶ್ ಮಾತನಾಡಿದರು.
ಜ್ಞಾನ, ವಿಜ್ಞಾನ, ಕೌಶಲ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕೃತಿ, ಮತ್ತು ಸಂಸ್ಕಾರವನ್ನು ನೀಡುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಅದನ್ನು 'ರಾಷ್ಟ್ರೀಯ ಶಿಕ್ಷಣ ನೀತಿ-2020' ಪೂರೈಸುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ. ಮುಂದಿನ ವರ್ಷದಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಎಲ್ಲರಿಗೂ ಶಿಕ್ಷಣ ನೀಡುವುದರಿಂದ ದೇಶದಲ್ಲಿ ಜಾತಿ ವ್ಯವಸ್ಥೆ, ತಾರತಮ್ಯ ಹೋಗಲಾಡಿಸಬಹುದು ಎಂದು ದಶಕಗಳಿಂದ ಹೇಳಿಕೊಂಡು ಬಂದಿದ್ದೇವೆ. ಅದಕ್ಕಾಗಿ ದೇಶದ ಪ್ರತಿಯೊಬ್ಬ ಪ್ರಜೆಗೆ ಅಕ್ಷರ ಜ್ಞಾನ, ಶಿಕ್ಷಣ ನೀಡುವ ಸರ್ವ ಪ್ರಯತ್ನಗಳು ನಡೆಯುತ್ತಲೇ ಇವೆ. ಸರ್ಕಾರಗಳ ಪ್ರಯತ್ನದ ಫಲವಾಗಿ ದೇಶದಲ್ಲಿ ಸಾಕ್ಷರರ ಪ್ರಮಾಣ ಏರಿಕೆಯಾಯಿತು. ಸಮ ಸಮಾಜ ನಿರ್ಮಾಣದ ಕನಸುಗಳು, ಉದ್ದೇಶಗಳು ಸಾಕಷ್ಟು ವರ್ಷಗಳ ಕಾಲ ಈಡೇರಿದವು. ಆದರೆ, ಇತ್ತೀಚಿನ ವರ್ಷಗಳಲ್ಲಿ ವಿಜ್ಞಾನ, ತಂತ್ರಜ್ಞಾನದ ವೇಗದ ಬೆಳವಣಿಗೆ, ಯಂತ್ರೋಪಕರಣಗಳ ಬಳಕೆಯಿಂದ ಜನರಿಗೆ ಐಷಾರಾಮಿ ಜೀವನ ಸಿಗುತ್ತಿದೆ. ಜನರ ಶ್ರಮ ಕಡಿಮೆಯಾಗುತ್ತಿದೆ. ದುರಾದಷ್ಟವಷಾತ್ ಈ ಐಷಾರಾಮಿ ವ್ಯವಸ್ಥೆಯು ವ್ಯಕ್ತಿ, ವ್ಯಕ್ತಿಗಳನ್ನು ದೂರ ಮಾಡುತ್ತಿದೆ. ಸಮಾಜದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಸಂಸ್ಕಾರ, ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಮರೆತಿರುವ ಕಾರಣ ನಮ್ಮ ಸಮಾಜದಲ್ಲಿ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಇದರಿಂದ ಹೊರ ಬರಬೇಕಾದರೆ ಶಿಕ್ಷಣದಲ್ಲಿ ಸಂಸ್ಕೃತಿ, ಸಂಸ್ಕಾರ, ಮೌಲ್ಯಗಳು, ಪರಸ್ಪರರ ನಡುವೆ ಗೌರವ ಭಾವನೆಯ ಅಗತ್ಯತೆ ಇದೆ' ಎಂದರು.
ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ. ಎಲ್ಲರಿಗೂ ಶಿಕ್ಷಣ ನೀಡಬೇಕು. ಜನರ ಅಗತ್ಯತೆಗಳಿಗೆ ತಕ್ಕಂತೆ ಶಿಕ್ಷಣ ನೀಡಬೇಕು. ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕು. ಶಿಕ್ಷಣದಿಂದ ಸಾಮಾಜಿಕ ಕಳಕಳಿ ಬರಬೇಕು. ಆರೋಗ್ಯಕರ ಸಮಾಜದ ಮೂಲಕ ಸ್ವಾಭಿಮಾನಿ ವ್ಯಕ್ತಿಗಳನ್ನು ಸೃಷ್ಟಿಸುವ ಶಿಕ್ಷಣ ನೀತಿ ಭಾರತಕ್ಕೆ ಅಗತ್ಯವಿದೆ ಎಂದು ಜನಸಂಘದ ನೇತಾರ, ಶಿಕ್ಷಣ ತಜ್ಞ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರು ದಶಕಗಳ ಹಿಂದೆಯೇ ಹೇಳಿದ್ದರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರನ್ನು ಸ್ಮರಿಸಿದರು.

ರಾಷ್ಟ್ರೀಯ ಭಾವನೆ, ಭಾರತದ ಬಗ್ಗೆ ಗೌರವ, ದೇಶವನ್ನು ವಿಶ್ವಗುರು ಮಾಡುವ ಶಿಕ್ಷಣ ರಾಷ್ಟ್ರೀಯ ಶಿಕ್ಷಣ ನೀತಿ ಒಳಗೊಂಡಿರಬೇಕು ಎಂದು ಶ್ಯಾಮ್ ಪ್ರಸಾದ್ ಮುಖರ್ಜಿ ಹೇಳಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕೂಡ ಅದನ್ನೇ ಹೇಳಿದ್ದರು. ಸಂಸ್ಕೃತಿ ಮತ್ತು ವಿಜ್ಞಾನದ ಸಮನ್ವಯತೆಯ ಶಿಕ್ಷಣ ನೀಡುವುದು ಅತ್ಯಂತ ಅಗತ್ಯವಿದೆ. ಎನ್ಇಪಿ-2020 ಈ ಎಲ್ಲ ಗುರಿ, ಉದ್ದೇಶಗಳನ್ನು ಒಳಗೊಂಡಿದೆ' ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದರು. ಒಂದು ದಿನದ ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐಗಳು, ಡಯಟ್ ಪ್ರಾಂಶುಪಾಲರು, ಪದವಿಪೂರ್ವ ಇಲಾಖೆಯ ಉಪ ನಿರ್ದೇಶಕರು, ನಿರ್ದೇಶಕರು ಮತ್ತು ರಾಜ್ಯ ಕಚೇರಿ ಅಧಿಕಾರಿಗಳು ಸೇರಿ 400ಕ್ಕೂ ಹೆಚ್ಚು ಅಧಿಕಾರಿಗಳು ಭಾಗವಹಿಸಿದ್ದರು.
ಶಿಕ್ಷಣ ತಜ್ಞರಾದ ಎಂ.ಕೆ. ಶ್ರೀಧರ್, ಡಾ. ಗುರುರಾಜ ಕರಜಗಿ, ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯದ ಪ್ರೊ. ಹೃಷಿಕೇಶ್ ಮತ್ತು ಶಿಕ್ಷಣ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎಚ್.ಬಿ ಚಂದ್ರಶೇಖರ್ ಅವರು ವಿವಿಧ ಅವಧಿಗಳಲ್ಲಿ ಎನ್‌ಇಪಿ ಕುರಿತು ವಿಷಯ ಮಂಡಿಸಿದರು.
Recommended Video
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications