ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾರ್ಯಪಡೆಯಿಂದ ಶೀಘ್ರ ಅಂತಿಮ ವರದಿ

|
Google Oneindia Kannada News

ಬೆಂಗಳೂರು, ನ. 05: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚನೆ ಮಾಡಲಾಗಿರುವ ಕಾರ್ಯಪಡೆಯು ತನ್ನ ಅಂತಿಮ ಶಿಫಾರಸುಗಳ ಕರಡನ್ನು ಇನ್ನೆರಡು ದಿನಗಳಲ್ಲಿ ಸರಕಾರಕ್ಕೆ ಸಲ್ಲಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ. 'ರಾಷ್ಟ್ರೀಯ ಶಿಕ್ಷಣ ನೀತಿ-2020; ವಿಶ್ವಗುರುವಾಗುವತ್ತ ಭಾರತ' ಎಂಬ ವಿಷಯದ ಬಗ್ಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಏರ್ಪಡಿಸಿದ್ದ ವೆಬಿನಾರ್‌ನಲ್ಲಿ ಅವರು ಮಾತನಾಡಿದ್ದಾರೆ.

ನಿವೃತ್ತ ಐಎಎಸ್‌ ಅಧಿಕಾರಿ ಎಸ್.ವಿ. ರಂಗನಾಥ್‌ ಅವರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದ್ದು, ಕಾರ್ಯಪಡೆಯು ಈಗಾಗಲೇ ಪ್ರಾಥಮಿಕ ಹಂತದ ಶಿಫಾರಸುಗಳನ್ನು ಸಲ್ಲಿಸಿದೆ. ಅಂತಿಮ ಹಂತದ ಶಿಫಾರಸುಗಳನ್ನು ನವೆಂಬರ್ 07 ಸಲ್ಲಿಸಲಿದೆ ಎಂದು ಡಾ. ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.

ಗಳಿಸಿದ ಜ್ಞಾನ ಸಮಾಜಕ್ಕೆ ಇರಲಿ

ಗಳಿಸಿದ ಜ್ಞಾನ ಸಮಾಜಕ್ಕೆ ಇರಲಿ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ವಜೂಭಾಯಿ ವಾಲಾ ಅವರು, ಸಮಾಜಕ್ಕೆ ಒಳ್ಳೆಯದಾಗುವ ಹಾಗೂ ಎಲ್ಲ ಹಂತಗಳಲ್ಲೂ ಜ್ಞಾನವನ್ನು ಹೆಚ್ಚಿಸುವ ಕೆಲಸ ಆಗಬೇಕಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಗಳಿಸಿದ ಜ್ಞಾನವನ್ನು ಸಮಾಜಕ್ಕೇ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಬೋಧಕರ ಪಾತ್ರ ಅತಿದೊಡ್ಡದು ಎಂದರು.

ವಿದ್ಯಾರ್ಥಿಗಳಿಗೆ ತಾವು ಯಾಕೆ ಶಿಕ್ಷಣ ಪಡೆಯುತ್ತಿದ್ದೇವೆ? ಅದನ್ನು ಯಾವ ದಿಕ್ಕಿನಲ್ಲಿ, ಹೇಗೆ ಬಳಕೆ ಮಾಡಬೇಕು? ಗಳಿಸಿದ ಜ್ಞಾನವನ್ನು ಸಾರ್ಥಕಗೊಳಿಸಿಕೊಳ್ಳುವುದು ಹೇಗೆ? ಎಂಬ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅತ್ಯಂತ ಮುಖ್ಯವಾದ ಸಂಗತಿ ಎಂದು ರಾಜ್ಯಪಾಲ ವಾಲಾ ಅವರು ಹೇಳಿದರು.

ಆಧ್ಯಾತ್ಮ ಮತ್ತು ತಂತ್ರಜ್ಞಾನ ಒಟ್ಟಿಗಿರಲಿ

ಆಧ್ಯಾತ್ಮ ಮತ್ತು ತಂತ್ರಜ್ಞಾನ ಒಟ್ಟಿಗಿರಲಿ

ವೆಬಿನಾರ್‌ನಲ್ಲಿ ಭಾಗವಹಿಸಿ ಮಾತಣಾಡಿದ ಶ್ರೀ ರವಿಶಂಕರ್‌ ಗುರೂಜಿ ಅವರು, ತಂತ್ರಜ್ಞಾನ ಮತ್ತು ಆಧ್ಯಾತ್ಮವನ್ನು ಬೇರೆ ಬೇರೆಯಾಗಿ ನೋಡಬಾರದು. ನಮ್ಮ ಮನಸ್ಸು ಮತ್ತು ದೇಹಕ್ಕೆ ಹೇಗೆ ಅವಿನಾಭಾವ ಸಂಬಂಧ ಇದೆಯೋ ಅದೇ ರೀತಿ ಆಧ್ಯಾತ್ಮಕ್ಕೂ ತಂತ್ರಿಕೆತೆಗೂ ಸಂಬಂಧ ಇದೆ. ಈ ಹಿನ್ನೆಲೆ ಇವೆರಡೂ ಅಂಶಗಳೂ ಒಟ್ಟಾಗಿ ಇರಬೇಕು ಎಂದರು.

ನಮಗೆಲ್ಲರಿಗೂ ಗೊತ್ತಿರುವಂತೆ ತಂತ್ರಜ್ಞಾನ ಇಲ್ಲದಿದ್ದರೆ, ಜೀವನದಲ್ಲಿ ಆರಾಮ ಎನ್ನುವುದು ಇರುವುದಿಲ್ಲ. ಅದೇ ರೀತಿ ಮನಸ್ಸಿನಲ್ಲಿ ಶಾಂತಿ-ಪ್ರಸನ್ನತೆ ಇಲ್ಲದಿದ್ದರೆ ಮತ್ತೂ ಜೀವನದಲ್ಲಿ ಶಾಂತಿ ಇರುವುದಿಲ್ಲ. ನಮ್ಮಲ್ಲಿ ಅಂತರ್‌ಶಾಂತಿ, ಪ್ರಸನ್ನತೆ ಇರಬೇಕಾದರೆ ಅದಕ್ಕೆ ಆಧ್ಯಾತ್ಮ ಬೇಕೇ ಬೇಕು. ಹೀಗಾಗಿ ಶಿಕ್ಷಣದಲ್ಲಿ ಜೀವನದ ಮೌಲ್ಯಗಳನ್ನು ಅಳವಡಿಸಬೇಕು ರವಿಶಂಕರ್ ಗುರೂಜಿ ಹೇಳಿದರು.

ನಾವೇ ಮೊದಲು!

ನಾವೇ ಮೊದಲು!

ಉಳಿದೆಲ್ಲ ರಾಜ್ಯಗಳಿಗಿಂತ ಮೊದಲೇ ಶಿಕ್ಷಣ ನೀತಿಯನ್ನು ಹಂತಹಂತವಾಗಿ ಜಾರಿ ಮಾಡುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಾದ ಎಲ್ಲ ಹೆಜ್ಜೆಗಳನ್ನು ಇಡಲಾಗುತ್ತಿದೆ. ಇರುವ ವಿಶ್ವವಿದ್ಯಾಲಯಗಳಲ್ಲಿಯೇ 6 ಸಂಶೋಧನಾ ಹಾಗೂ 10 ಬೋಧನಾ ವಿವಿಗಳನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದಂತೆ 34 ಶಿಕ್ಷಣ ಸಂಸ್ಥೆಗಳನ್ನು ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸಲಾಗುವುದು. ಎಲ್ಲೆಡೆಯು ಬಹುವಿಷಯಗಳ ಕಲಿಕೆ ಮತ್ತು ಬೋಧನೆಗೆ ಒತ್ತಾಸೆ ನೀಡಲಾಗುತ್ತಿದೆ. ಇದರಿಂದ ಸಮಾಜದಲ್ಲಿರುವ ಸಾಮಾಜಿಕ, ಆರ್ಥಿಕ ಮತ್ತಿತರೆ ಎಲ್ಲ ಸಮಸ್ಯೆಗಳಿಗೆ ಚರಮಗೀತೆ ಹಾಡುವುದು ನಮ್ಮ ಉದ್ದೇಶವಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳಿದರು.

ಪಠ್ಯ, ಪಠ್ಯೇತರ ಎರಡೂ ಇರಲಿವೆ

ಪಠ್ಯ, ಪಠ್ಯೇತರ ಎರಡೂ ಇರಲಿವೆ

ಈ ವರೆಗೂ ಪಠ್ಯೇತರ ಚಟುವಟಿಕೆಗೂ ಪಠ್ಯಕ್ಕೂ ಸಂಬಂಧವೇ ಇರುತ್ತಿಲ್ಲ. ಇನ್ನು ಮುಂದೆ ಹಾಗಾಗುವುದಿಲ್ಲ. ಪಠ್ಯೇತರ ವಲಯದಲ್ಲಿದ್ದ ಕ್ರೀಡೆ, ಕಲೆ, ಸಂಗೀತ ಮತ್ತಿತರೆ ವಿಷಯಗಳಲ್ಲಿಯೂ ಪಠ್ಯದ ವ್ಯಾಪ್ತಿಗೇ ಬರುತ್ತವೆ. ಆಗ ಜ್ಞಾನಾರ್ಜನೆಯ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಆಯ್ಕೆ ಹೆಚ್ಚಾಗುತ್ತದೆ. ಅದರಿಂದ ಬಹ ಆಯಾಮದ ಪ್ರತಿಭೆಗಳು ನಮ್ಮ ಶೈಕ್ಷಣಿಕ ವ್ಯವಸ್ಥೆಯಿಂದ ಹೊರಹೊಮ್ಮಲಿವೆ ಎಂದು ಡಾ. ಅಶ್ವಥ್ ನಾರಾಯಣ ಅವರು ಮಾತನಾಡಿದರು.

English summary
The task force, which has been set up for national education policy, will submit its final draft to the government in two days, said Higher Education Minister C.N. Ashwath Narayan, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X