ಲೋಕಸಭಾ ಚುನಾವಣೆ ಫಲಿತಾಂಶ : ಡಿಕೆಶಿ ಮೊದಲ ಪ್ರತಿಕ್ರಿಯೆ
Recommended Video
ಲೋಕಸಭೆ ಚುನಾವಣೆ ಫಲಿತಾಂಶ 2019 | ಡಿ ಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ | Oneindia Kannada
ಬೆಂಗಳೂರು, ಮೇ 28 : 'ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ದೊಡ್ಡ ನಷ್ಟವನ್ನು ನಿರೀಕ್ಷೆ ಮಾಡಿರಲಿಲ್ಲ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ವಿದೇಶ ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಸೋಮವಾರ ಮುಂಜಾನೆ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. 2019ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವಾಗ ಅವರು ಕುಟುಂಬದ ಜೊತೆ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದರು.

ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದರು.
'ನಾನು ಇಂದು ಬಂದಿದ್ದೇನೆ. ಪಕ್ಷದ ನಾಯಕರನ್ನು ಭೇಟಿಯಾಗಬೇಕು. ಕಾಂಗ್ರೆಸ್ ಪಕ್ಷವನ್ನು ಏನೂ ಮಾಡಲು ಆಗುವುದಿಲ್ಲ. ಗಾಂಧಿ ಕುಟುಂಬ ಪಕ್ಷವನ್ನು ಎಲ್ಲಾ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಕಾಪಾಡಿದೆ' ಎಂದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಮತ್ತು ದೇಶದಲ್ಲಿ ಭಾರಿ ಹಿನ್ನಡೆ ಉಂಟಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಪಕ್ಷದ ಅಭ್ಯರ್ಥಿ ಜಯಗಳಿಸಿದ್ದಾರೆ.












Click it and Unblock the Notifications