ಚಿತ್ರದುರ್ಗ 140, ರಾಮನಗರದಲ್ಲಿ 135 ಕೊರೊನಾ ಪ್ರಕರಣಗಳು ಪತ್ತೆ

ಚಿತ್ರದುರ್ಗ, ಸೆಪ್ಟೆಂಬರ್ 10: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,299ಕ್ಕೆ ಏರಿಕೆಯಾದಂತಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 58, ಚಳ್ಳಕೆರೆ 36, ಹಿರಿಯೂರು 19, ಹೊಸದುರ್ಗ 21, ಮೊಳಕಾಲ್ಮುರು 4 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 02 ಸೇರಿದಂತೆ ಒಟ್ಟು 140 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 92 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 770 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

New 140 Covid-19 Cases Reported In Chitradurga District

ಇದುವರೆಗೆ 35 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 2,876 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,388 ಸಕ್ರಿಯ ಪ್ರಕರಣಗಳು ಇವೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 32,589 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 46,341 ಜನರ ಮಾದರಿ ಸಂಗ್ರಹಿಸಲಾಗಿದ್ದು, 40,264 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,336 ಜನರ ವರದಿ ಬರುವುದು ಬಾಕಿ ಇದೆ. 442 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಇಂದು 135 ಕೊರೊನಾ ಕೇಸ್ ದೃಢ

ರಾಮನಗರದಲ್ಲಿ ಇಂದು 135 ಕೊರೊನಾ ಸೋಂಕು ಪತ್ತೆಯಾಗಿವೆ ಎಂದು ಜಿಲ್ಲಾಡಳಿತದ ಹೆಲ್ತ್ ಬುಲೆಟಿನ್ ವರದಿಯಲ್ಲಿ ತಿಳಿಸಿದೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ-25, ಮಾಗಡಿ ತಾಲ್ಲೂಕಿನಲ್ಲಿ-20, ಕನಕಪುರ ತಾಲ್ಲೂಕಿನಲ್ಲಿ-32, ರಾಮನಗರ ತಾಲ್ಲೂಕಿನಲ್ಲಿ-58 ಪಾಸಿಟಿವ್ ಪ್ರಕರಣಗಳು ದೃಢವಾಗಿವೆ.

ಎಲ್ಲ ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು 117 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3383 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 828 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 4263ಕ್ಕೆ ಏರಿಕೆಯಾಗಿವೆ.

Recommended Video

      ನಮ್ ಹಣೆಬರಹ ಯಾವಾಗ್ಲೂ ಇಷ್ಟೇ ಬಿಡಿ.? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+