ಬಳ್ಳಾರಿ 370, ಚಿಕ್ಕಮಗಳೂರು 126, ರಾಮನಗರದಲ್ಲಿ 43 ಕೊರೊನಾ ಸೋಂಕು ದೃಢ

ಬಳ್ಳಾರಿ, ಆಗಸ್ಟ್ 23: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಒಂದೇ ದಿನ 370 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ವರದಿಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 17,679 ಕ್ಕೆ ಏರಿಕೆಯಾಗಿದೆ.

Recommended Video

      Congress ನಲ್ಲಿ ಹೆಚ್ಚಿದ ಆಂತರಿಕ ಬಿರುಕು , Kapil Sibal ಗರಂ | Oneindia Kannada

      ಬಳ್ಳಾರಿ ಜಿಲ್ಲೆಯ ನಾನಾ ತಾಲ್ಲೂಕುಗಳಲ್ಲಿ ಪತ್ತೆಯಾಗಿದ್ದ ಪ್ರಕರಣಗಳಲ್ಲಿ 320 ಜನ ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 11,710 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

      ಇಂದು 7 ಜನ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 218 ಜನರು ಕೊರೊನಾದಿಂದ ಮೃತಪಟ್ಟಿದ್ದು, 5761 ಸೋಂಕಿತ ಪ್ರಕರಣಗಳು ಸಕ್ರಿಯವಾಗಿವೆ.

      New 370 Coronavirus Infections Reported In Ballari District On Sunday

      ಕಾಫಿನಾಡಲ್ಲಿ 126 ಜನರಿಗೆ ಕೊರೊನಾ ಪಾಸಿಟಿವ್

      ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 126 ಜನರಿಗೆ ಕೊರೊನಾ ಸೋಂಕು ಪ್ರಕರಣ ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ ಈವರೆಗೆ 2940 ಮಂದಿ ಸೋಂಕಿತರು ಪತ್ತೆಯಾಗಿವೆ.

      ಚಿಕ್ಕಮಗಳೂರು 59, ತರೀಕೆರೆ 22, ಕಡೂರು 26, ಕೊಪ್ಪ 12, ಅಜ್ಜಂಪುರ 4, ಮೂಡಿಗೆರೆಯಲ್ಲಿ 3 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇಂದು ಕೊರೊನಾ ವೈರಸ್ ನಿಂದ ಗುಣಮುಖರಾಗಿ 44 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1046 ಸಕ್ರಿಯ ಪ್ರಕರಣಗಳಿವೆ.

      ಇಲ್ಲಿಯವರೆಗೆ 56 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದು, ಈವರೆಗೆ 1838 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

      ರಾಮನಗರದಲ್ಲಿ 43 ಕೊರೊನಾ ಪಾಸಿಟಿವ್ ಕೇಸ್ ಧೃಡ

      ರಾಮನಗರ ಜಿಲ್ಲೆಯಲ್ಲಿ ಇಂದು 43 ಕೊರೊನಾ ಸೋಂಕು ಪಾಸಿಟಿವ್ ಕೇಸ್ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2726ಕ್ಕೆ ಏರಿಕೆಯಾಗಿದೆ.

      ಚನ್ನಪಟ್ಟಣ ತಾಲ್ಲೂಕಿನಲ್ಲಿ-12, ಮಾಗಡಿ ತಾಲ್ಲೂಕಿನಲ್ಲಿ-2, ಕನಕಪುರ ತಾಲ್ಲೂಕಿನಲ್ಲಿ-10, ರಾಮನಗರ ತಾಲ್ಲೂಕಿನಲ್ಲಿ-19 ಪಾಸಿಟಿವ್ ಪ್ರಕರಣ ದೃಢವಾಗಿವೆ.

      ಎಲ್ಲ ಸೋಂಕಿತರು ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು 49 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1823 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ 872 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+