ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಹೊಸದಾಗಿ 500 ಜನೌಷಧಿ ಕೇಂದ್ರ ಸ್ಥಾಪನೆ: ಸಚಿವ ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ನವೆಂಬರ್ 12: ಕರ್ನಾಟಕ ರಾಜ್ಯದಲ್ಲಿ ಬೇಡಿಕೆಗನುಗುಣವಾಗಿ ಹೊಸದಾಗಿ ಮತ್ತೆ 500 ಪಿಎಂ ಜನೌಷಧಿಕ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮಗಳಿಗೆ ತಿಳಿಸಿರುವ ಸಚಿವರು, ರಾಜ್ಯದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಔಷಧ ಮತ್ತು ಶಸ್ತ್ರಚಿಕಿತ್ಸೆಯ ಪರಿಕರ ಲಭ್ಯವಾಗುವಂತೆ ಈವರೆಗೆ 1052 ಜನೌಷಧ ಮಳಿಗೆಗಳನನ್ನು ತೆರೆಯಲಾಗಿದೆ. ಇದರಿಂದ ಬಡವರು, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳು ಲಭ್ಯವಾಗುತ್ತಿವೆ. ಈ ಸಂಬಂಧ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಅತ್ಯುತ್ತಮವಾಗಿ ಜಾರಿಯಾಗಿದೆ ಎಂದು ತಿಳಿಸಿದರು.

ಜನೌಷಧಿ ಮಳಿಗೆ ತೆರೆಯುವ ಸಾಲಿನಲ್ಲಿ ದೇಶದಲ್ಲೇ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ನೋನ್ಮುಖವಾಗಿದೆ ಎಂದು ವಿವರಿಸಿದರು.

 500 ಜನೌಷಧಿ ಮಳಿಗೆ ತೆರೆಯಲು ಚಿಂತನೆ

500 ಜನೌಷಧಿ ಮಳಿಗೆ ತೆರೆಯಲು ಚಿಂತನೆ

ಇದಲ್ಲದೇ ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಬಿಪಿಪಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವರ್ಷದ ಫೆಬ್ರವರಿ ನಂತರ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದೆ. ಬೇಡಿಕೆಗಳಿಗೆ ಅನುಗುಣವಾಗಿ ಹೊಸದಾಗಿ ಜನೌಷಧಿ ಮಳಿಗೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

 ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಲಿ 200 ಜನೌಷಧಿ ಮಳಿಗೆ ಇವೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಲಿ 200 ಜನೌಷಧಿ ಮಳಿಗೆ ಇವೆ

ರಾಜ್ಯದಲ್ಲಿ ಜನೌಷಧಿ ಮಳಿಗೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಹೊಸದಾಗಿ ಪ್ರಸ್ತಾವನೆ ಸಲ್ಲಿಸಿರುವುದನ್ನು ಹೊರತುಪಡಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 200 ಔಷಧ ಮಳಿಗೆ ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಉತ್ತರ ಕರ್ನಾಟಕದ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದೆ. ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದರು.

 ಬ್ರಾಂಡೆಡ್ ಔಷಧಿ ಅತೀ ಕಡಿಮೆ ಬೆಲೆಗೆ ಲಭ್ಯ

ಬ್ರಾಂಡೆಡ್ ಔಷಧಿ ಅತೀ ಕಡಿಮೆ ಬೆಲೆಗೆ ಲಭ್ಯ

ರಾಜ್ಯದಲ್ಲಿ ಜನರಿಕ್ ಔಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಎನ್ಎಬಿಎಲ್ ಪ್ರಯೋಗಾಲಯದಲ್ಲಿ ಜನೌಷಧಿ ಮಳಿಗೆಗಳನ್ನು ಪರೀಕ್ಷಿಸಿ ಸಾರ್ವಜನಿಕ ಉಪಯೋಗಕ್ಕೆ ಜನೌಷಧಿ ಕೇಂದ್ರಗಳಲ್ಲಿ ದೊರೆಯುವಂತೆ ಮಾಡಲಾಗುತ್ತಿದೆ. ಒಟ್ಟು 1,451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳು ಸಹ ಇಲ್ಲಿ ದೊರೆಯುತ್ತಿವೆ ಎಂದರು.

 ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ

ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಲು ಉದ್ದೇಶ ಹೊಂದಿರುವ ಫಾರ್ಮಸಿ ಪದವಿಧರರಿಂದ ಮಳಿಗೆಗಳನ್ನು ತೆರೆಯಲು ಹೆಚ್ಚಿನ ಬೇಡಿಕೆ ಇದೆ. ಸ್ವಾಯತ್ತ ಸಂಸ್ಥೆಗಳಿಗೆ 120 ಚದರ ಅಡಿ ಸ್ಥಳವನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯೂರೋ ಆಫ್ ಫಾರ್ಮಸಿ ಪಬ್ಲಿಕ್ ಸೆಕ್ಟರ್ ಯೂನಿಟ್ಸ್ ಆಫ್ ಇಂಡಿಯಾ (ಬಿಪಿಪಿಐ) ಪ್ರತಿಯೊಂದು ಜನೌಷಧಿ ಮಳಿಗೆ ಪ್ರಾರಂಭಿಸಲು ಪ್ರೋತ್ಸಾಹ ಧನ ನೀಡುತ್ತದೆ. ತೆರೆಯಲಿರುವ ಪ್ರತಿ ಮಳಿಗೆಗೆ ಮಾಸಿಕ ಖರೀದಿಗೆಂದು ವಹಿವಾಟಿಗೆ ತಕ್ಕಂತೆ 15,000 ರೂ. ಮೀರದಂತೆ ಒಟ್ಟಾರೆ ರೂ.2.50 ಲಕ್ಷ ವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಡ ವರ್ಗಕ್ಕೆ ಹೆಚ್ಚು ಅನುಕೂಲ: ಜನೌಷಧಿ ಮಳಿಗೆಗಳಿಂದ ಬಿಪಿಎಲ್ ಮತ್ತು ಬಡ ವರ್ಗದ ಜನರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತಿದೆ. ಮತ್ತಷ್ಟು ಮಳಿಗೆಗಳನ್ನು ತೆರೆದು ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ವರ್ಷ 300 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಉತ್ತಮ ಸಾಧನೆ ಮಾಡಿದ್ದೇವೆ ಎಂದು ಸುಧಾಕರ್ ತಿಳಿಸಿದರು.

English summary
New 500 Generic medical shop will be open soon in Karnataka, 2nd position for Karnataka in PM Janaushadhi scheme Health minister Dr. K Sudhakar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X