ತುಮಕೂರು ಅಥವ ಕೋಲಾರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ
ಬೆಂಗಳೂರು, ಜನವರಿ 23: ತುಮಕೂರು ಅಥವ ಕೋಲಾರದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ರಾಜ್ಯ ಯೋಜನಾ ಮಂಡಳಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಹೊಸ ವಿಮಾನ ನಿಲ್ದಾಣ ನಿರ್ಮಾಣವಾದರೆ ಬೆಂಗಳೂರು ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದೆ.
ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ. ಜೆ. ಪುಟ್ಟಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಈಗಾಗಲೇ ಜನರ ದಟ್ಟಣೆ ಹೆಚ್ಚಾಗಿದೆ. ಈಗ ಹೆಚ್ಚುವರಿ ರನ್ ವೇಗಳನ್ನು ಸಹ ನಿರ್ಮಾಣ ಮಾಡಲಾಗಿದೆ" ಎಂದು ಹೇಳಿದರು.
ಬೆಂಗಳೂರು ನಗರಕ್ಕೆ ಹತ್ತಿರವಿರುವ ಕೋಲಾರ ಅಥವ ತುಮಕೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಬೇಕು. ಇದರಿಂದಾಗಿ ಬೆಂಗಳೂರು ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಮಂಡಳಿ ಶಿಫಾರಸು ಮಾಡಿದೆ.

ಕಲಬುರಗಿ ಮಾದರಿಯಲ್ಲಿ ವಿಜಯಪುರ ಅಥವ ಬೀದರ್‌ನಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು. ಇದರಿಂದಾಗಿ ದೊಡ್ಡ ವಿಮಾನ ನಿಲ್ದಾಣವಲ್ಲದಿದ್ದರೂ ಮಿನಿ ನಿಲ್ದಾಣಗಳು ಆಗಬೇಕು ಎಂದು ಮಂಡಳು ವರದಿಯಲ್ಲಿ ಹೇಳಿದೆ.
ರಾಜ್ಯ ಯೋಜನಾ ಮಂಡಳಿ ವಿವಿಧ ಇಲಾಖೆಗಳ ಕುರಿತ ತನ್ನ ಶಿಫಾರಸುಗಳನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಕೆ ಮಾಡಲಿದೆ. ಸರ್ಕಾರ ಯಾವುದಕ್ಕೆ ಒಪ್ಪಿಗೆ ನೀಡಲಿದೆ ಎಂದು ಕಾದು ನೋಡಬೇಕಿದೆ.












Click it and Unblock the Notifications