ಕರ್ನಾಟಕದ 5 ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ: ಭೂಮಿಗೆ ಬಂಗಾರದ ಬೆಲೆ ನಿರೀಕ್ಷೆ!

Karnataka Mini Airport Projects: ಕರ್ನಾಟಕದ ಪ್ರಮುಖ ಐದು ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವುದಕ್ಕೆ ಶುರುವಾಗಿದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಈ ಬಗ್ಗೆ ಕೇಂದ್ರ ಸರ್ಕಾರವು ಯಾವುದೇ ಗುಡ್‌ನ್ಯೂಸ್ ಇಲ್ಲಿಯ ವರೆಗೆ ನೀಡಿಲ್ಲ. ಇದೀಗ ಉಡಾನ್‌ ಯೋಜನೆಯಡಿ ಕರ್ನಾಟಕದ ಐದು ಪ್ರದೇಶಗಳಿಗೆ ಬಂಪರ್ ಬಂದಿದ್ದು. ಈ ಭಾಗಗಳಲ್ಲಿ ಭೂಮಿಗೆ ಚಿನ್ನದ ಬೆಲೆ ಬರುವುದಕ್ಕೆ ಶುರುವಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಐದು ಮಿನಿ ವಿಮಾನ ನಿಲ್ದಾಣ ಯೋಜನೆಯು ಚುರುಕು ಪಡೆದುಕೊಂಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕವು ಅಭಿವೃದ್ಧಿಯ ವೇಗದಲ್ಲಿದ್ದು ವಿವಿಧ ಪ್ರಮುಖ ಹಾಗೂ ದೊಡ್ಡ ಯೋಜನೆಗಳು ಕರ್ನಾಟಕದಲ್ಲಿ ಜಾರಿಯಾಗುತ್ತಿವೆ. ಇದೀಗ ಇದರ ಭಾಗವಾಗಿ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಐದು ಮಿನಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಇದರಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಭೂಮಿಗೆ ಭರ್ಜರಿ ಬೆಲೆ ಬರುವುದಕ್ಕೆ ಪ್ರಾರಂಭವಾಗಿದೆ. ಉಡಾನ್‌ ಯೋಜನೆಯಡಿ ಐದು ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಕೋಲಾರ, ಬಳ್ಳಾರಿ, ರಾಯಚೂರು, ಕುಶಾಲನಗರ ಹಾಗೂ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಒಟ್ಟಾರೆ ಈ ಯೋಜನೆಯ ಅಡಿಯಲ್ಲಿ 7 ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

New Airports in 5 districts of Karnataka Expect gold-like prices for land Property Boom

ಬಳ್ಳಾರಿ ಮತ್ತು ಕೋಲಾರ ಏರ್‌ಸ್ಟ್ರಿಪ್‌ಗಳಲ್ಲಿ ಸಣ್ಣ ವಿಮಾನಗಳ ಕಾರ್ಯಾಚರಣೆಗಾಗಿ ಬಿಡ್‌ಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಸಂಸತ್‌ನಲ್ಲಿ ತಿಳಿಸಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲೆಹರ್‌ ಸಿಂಗ್‌ ಸಿರೋಯಾ ಅವರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಭೂಸ್ವಾಧೀನ ಪ್ರಕ್ರಿಯೆಗೆ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರವನ್ನು ಕೇಳಿದೆ. ಈ ಯೋಜನೆಗೆ ಕರ್ನಾಟಕ ಸರ್ಕಾರವೇ ಉಚಿತವಾಗಿ ಭೂಮಿ ನೀಡಲಿದೆ ಎಂದು ಹೇಳಲಾಗಿದೆ.

ಪ್ರಾರಂಭಿಕ ಹಂತದಲ್ಲಿ ಸಣ್ಣ ವಿಮಾನಗಳ ಕಾರ್ಯಾಚರಣೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣಗಳ ಅಭಿವೃದ್ಧಿಯೂ ಆಗಲಿದೆ. ರಾಯಚೂರು, ಕುಶಾಲನಗರ ಹಾಗೂ ಹಾಸನದಲ್ಲಿ ಏರ್‌ಸ್ಟ್ರಿಪ್‌ಗಳ ನಿರ್ಮಾಣಕ್ಕೆ ಬಿಡ್‌ ಪ್ರಕ್ರಿಯೆ ನಡೆದಿದೆ ಎನ್ನಲಾಗಿದೆ.

ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ ನಿರೀಕ್ಷೆ: ಇನ್ನು ಹೊಸ ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆ ಚುರುಕು ಪಡೆದುಕೊಂಡ ಬೆನ್ನಲ್ಲೇ ವಿವಿಧ ಪ್ರದೇಶಗಳಲ್ಲಿ ಭೂಮಿಯ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಮೂಡಿದೆ. ಈಗಾಗಲೇ ವಿವಿಧ ಪ್ರದೇಶದಲ್ಲಿ ರಿಯಲ್‌ ಎಸ್ಟೇಟ್ ಬೂಸ್ಟ್‌ ಆಗಿದ್ದು. ಭೂಮಿಗೆ ಬಂಗಾರದ ಬೆಲೆ ಬರುವ ನಿರೀಕ್ಷೆ ಮೂಡಿದೆ. ಇನ್ನು ಉಡಾನ್‌ ಯೋಜನೆಯಲ್ಲಿ 7 ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯೂ ಇದೆ. ಅದರಲ್ಲಿ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಬೀದರ್, ಕಲಬುರಗಿ ಹಾಗೂ ತೋರಣಗಲ್ಲು ಪ್ರದೇಶಗಳು ಸೇರಿವೆ. ಒಟ್ಟು 7 ಏರ್‌ಪೋರ್ಟ್‌ಗಳನ್ನು ಆಪರೇಟ್‌ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+