ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಬಂದ ಹೊಸ ಅತಿಥಿಗಳು: ಪ್ರಾಣಿ ಪ್ರಿಯರಲ್ಲಿ ಸಂತಸ

ಶಿವಮೊಗ್ಗ ನವೆಂಬರ್ 20: ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಸದಸ್ಯರು ಆಗಮಿಸಿದ್ದಾರೆ. ಕೇರಳ ರಾಜ್ಯದ ತಿರುವನಂತಪುರದಿಂದ 5 ಬಗೆಯ ಹೊಸ ಪ್ರಾಣಿ, ಪಕ್ಷಿಗಳು ಬಂದಿಳಿದಿವೆ. ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮದಡಿ ಹೊಸ ಪ್ರಾಣಿ ಪಕ್ಷಿಗಳು ಮೃಗಾಲಯಕ್ಕೆ ಸೇರ್ಪಡೆಗೊಂಡಿದೆ.

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮ ಅತ್ಯಂತ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮೈಸೂರು, ಬನ್ನೇರುಘಟ್ಟದ ನಂತರ ಶಿವಮೊಗ್ಗದ ಹುಲಿ ಮತ್ತು ಸಿಂಹಧಾಮ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಮೃಗಾಲಯವನ್ನು ಅರಣ್ಯದ ನಡುವೆ 250 ಹೆಕ್ಟೇರ್ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

new animals come to shivamogga tyavarekoppa tiger and lion sanctuary from kerala

ಆದ್ದರಿಂದ ಪ್ರವಾಸಿಗರು ಪ್ರಾಣಿ ಲೋಕದ ಜೊತೆಗೆ ಸಸ್ಯ ಪ್ರಪಂಚವನ್ನು ಕಣ್ತುಂಬಿಕೊಳ್ಳಲು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇನ್ನು ಅರಣ್ಯದ ನಡುವೆ ಪ್ರಾಣಿಗಳನ್ನು ಸ್ವತಂತ್ರವಾಗಿ ಓಡಾಡುವುದನ್ನು ನೋಡಿ ಆನಂದಿಸಲು ಇಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.

ಹೊಸ ಸದಸ್ಯರ ಆಗಮನದಿಂದಾಗಿ ತ್ಯಾವರೆಕೊಪ್ಪದ ಮೃಗಾಲಯದಲ್ಲಿ ಪ್ರಾಣಿ ಪ್ರಭೇದಗಳ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಪ್ರಾಣಿಗಳ ವಿನಿಮಯ ಕಾರ್ಯಕ್ರಮದಡಿ ಹೆಚ್ಚುವರಿ ಪ್ರಾಣಿಗಳನ್ನು ವಿನಿಮಯ ಮಾಡಿಕೊಳ್ಳಲು ಅನುಮೋದನೆ ದೊರತಿತ್ತು. ಅದರಂತೆ, ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹೆಚ್ಚುವರಿಯಾದ ಪ್ರಾಣಿಗಳನ್ನು ತಿರುವನಂತಪುರ ಮೃಗಾಲಯಕ್ಕೆ ರವಾನಿಸಲಾಗಿದೆ.

new animals come to shivamogga tyavarekoppa tiger and lion sanctuary from kerala

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಒಂದು ಗಂಡು, ಒಂದು ಹೆಣ್ಣು ಒಟ್ಟು 2 ಘಾರಿಯಲ್ ಮೊಸಳೆಗಳು, 2 ಗಂಡು, 2 ಹೆಣ್ಣು ಒಟ್ಟು 4 ಲೆಸ್ಸರ್ ರಿಹ ಪಕ್ಷಿಗಳು, ಒಂದು ಗಂಡು ಕತ್ತೆ ಕಿರುಬ, ಎರಡು ಮುಳ್ಳು ಹಂದಿ, ಮೂರು ಗಂಡು, ಮೂರುಹೆಣ್ಣು ಸನ್‌ಕನೂರು ಪಕ್ಷಿಗಳು ವಿನಿಮಯವಾಗಿವೆ. ಇದರ ಜೊತೆಗೆ ತ್ಯಾವರೆಕೊಪ್ಪದಿಂದ ತಿರುವನಂತಪುರಕ್ಕೆ ಎರಡು ಮೊಸಳೆ, ಮೂರು ಹೆಣ್ಣು ಕತ್ತೆ ಕಿರುಬ, ಎರಡು ನರಿ, 2 ತಾಳೆಬೆಕ್ಕುಗಳು ರವಾನೆಯಾಗಿವೆ.

ಇನ್ನು ಘಾರಿಯಲ್ ಮೊಸಳೆ ಅಳಿವಿನಂಚಿನಲ್ಲಿರುವ ಪ್ರಭೇದವಾಗಿದ್ದು, ಇವುಗಳ ಸಂರಕ್ಷಣೆ ಕುರಿತು ಪ್ರಕೃತಿ ಶಿಕ್ಷಣ ನೀಡಲು ತ್ಯಾವರೆಕೊಪ್ಪಕ್ಕೆ ತರಲಾಗಿದೆ. ದಕ್ಷಿಣ ಅಮೆರಿಕಕ್ಕೆ ಸಂಬಂಧಿಸಿದ ಲೆಸ್ಪೆರ್ ರಿಹಾ ಮತ್ತು ಸನ್‌ ಕಾನ್ನೂ‌ರ್ ಪ್ರಭೇದಗಳು ದಕ್ಷಿಣ ಅಮೆರಿಕಕ್ಕೆ ಸಂಬಂಧಿಸಿದವು. ಇವೆರಡು ಇದೇ ಮೊದಲು ತ್ಯಾವರೆಕೊಪ್ಪದ ಮೃಗಾಲಯಕ್ಕೆ ಬಂದಿರುವುದು ಪ್ರಾಣಿ ಪ್ರಿಯರಲ್ಲಿ ಸಂತಸಕ್ಕೆ ಕಾರಣವಾಗಿವೆ.

new animals come to shivamogga tyavarekoppa tiger and lion sanctuary from kerala

ಶಿವಮೊಗದ ತ್ಯಾವರೆಕೊಪ್ಪದಲ್ಲಿ ವಿವಿಧ ಪಕ್ಷಿಗಳ ಕಲರವ, ಹುಲಿ, ಸಿಂಹಗಳ ಘರ್ಜನೆ, ನೀರು ಕುದುರೆಯ ಕಣ್ಣಾಮುಚ್ಚಾಲೆ, ಕಾಡು ಕೋಣದ ರೋಷಾವೇಶದ ನೋಟಗಳನ್ನು ಕಾಣಬಹುದಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಪ್ರತಿ ತಿಂಗಳು ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಹಾಗೂ ಇಲ್ಲಿನ ಪ್ರಾಣಿ ಪ್ರಪಂಚದ ಕುತೂಹಲಕಾರಿ ಸಂಗತಿಗಳನ್ನು ತಿಳಿದುಕೊಳ್ಳುತ್ತಾರೆ.

ಇಲ್ಲಿ ಅತ್ಯಂತ ಹತ್ತಿರದಿಂದ ವಿವಿಧ ರೀತಿಯ ಪಕ್ಷಿಗಳನ್ನು ನೋಡಬಹುದಾಗಿದೆ. ಹಲವು ಜಾತಿಯ ಪಕ್ಷಿಗಳನ್ನು ಕಂಡು ಪ್ರವಾಸಿಗರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಈ ಪಕ್ಷಿಗಳನ್ನು ನೋಡಲು ಮತ್ತು ಅವುಗಳ ಫೋಟೋ ಕ್ಲಿಕ್ಕಿಸಲು ಇಲ್ಲಿ ವಿಶಾಲವಾದ ವ್ಯವಸ್ಥೆ ಮಾಡಲಾಗಿದ್ದು ಗಾಜಿನ ಒಳಗಿನಿಂದ ಪಕ್ಷಿಗಳನ್ನು ನೋಡಬಹುದಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಪಕ್ಷಿಗಳು ವಿಶಾಲವಾದ ಜಾಗದಲ್ಲಿ ಓಡಾಡಲು ಇಲ್ಲಿ ಅವಕಾಶವನ್ನು ಕಲ್ಪಿಸಲಾಗಿದ್ದು ಇವುಗಳನ್ನು ನೋಡಿ ಪ್ರವಾಸಿಗರು ಆನಂದಪಡುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+