ಮೈ ಶುಗರ್ ಕಾರ್ಖಾನೆಗೆ ಹೊಸ ಬಾಯ್ಲಿಂಗ್ ಹೌಸ್: ಮಂಡ್ಯ ರೈತರಿಗೆ ಸಿಎಂ ಸಿಹಿಸುದ್ದಿ
ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ, ಕಬ್ಬಿನ ಗುಣಮಟ್ಟ ಹೆಚ್ಚಿಸುವತ್ತ ಗಮನ ಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಂಡ್ಯದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಿದ್ದ "ಕೃಷಿ ಮೇಳ 2025" ಕಾರ್ಯಕ್ರಮದಲ್ಲಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆಯಾದ ಮೈ ಶುಗರ್ ಅನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಸಹ ಮನ್ನಾ ಮಾಡಿದೆ. ಈಗ ಮೈ ಶುಗರ್ ಕಾರ್ಖಾನೆಗೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರೈತರು ತಮ್ಮ ವ್ಯವಸಾಯ ಪದ್ಧತಿಯಲ್ಲಿ ಸಮಗ್ರ ಕೃಷಿ ಪದ್ಧತಿ ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು. ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಶ್ವವಿದ್ಯಾನಿಲಯದ ಅಗತ್ಯವಿದೆ ಎಂದು ನನಗೂ ತಿಳಿಯಿತು. ನಂತರ ಈ ವಿಚಾರವನ್ನ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಎಲ್ಲ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲಾಯಿತು ಎಂದಿದ್ದಾರೆ.

ರೈತರಿಗೆ ತಳಿ-ತಂತ್ರಜ್ಞಾನ ತಲುಪಿಸಿ
ಮಂಡ್ಯ ಭಾಗದ ಐದು ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲೆ ಇಟ್ಟುಕೊಂಡರೆ ಪ್ರಯೋಜನವಿಲ್ಲ. ಅದನ್ನು ರೈತರಿಗೆ ತಲುಪಿಸಬೇಕು. ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ. ರಾಜಕೀಯಕ್ಕೆ ಬರುವ ಮೊದಲು ನಾನು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ. ಹಾಗಾಗಿ ರೈತರು ಆಧುನಿಕ ಯಂತ್ರೋಪಕರಣಗಳನ್ನು ಬಳಸಿ ಕೃಷಿ ಮಾಡಬೇಕು. ಇದರಿಂದ ಸಮಯ ಮತ್ತು ಹಣ ಎರಡು ಉಳಿತಾಯವಾಗುತ್ತದೆ. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತಿದೆ ಎಂದಿದ್ದಾರೆ.
ಸ್ಯಾಂಡ್ವಿಚ್ ಸ್ನಾತಕೋತರ ಪದವಿ
ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ. ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ. ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ. ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ, ಕಬ್ಬಿನ ಗುಣಮಟ್ಟ ಹೆಚ್ಚಿಸುವತ್ತ ಗಮನ ಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?











Click it and Unblock the Notifications