BPL Card: ಹೊಸ ಬಿಪಿಎಲ್‌ ಪಡಿತರ ಚೀಟಿ ಅರ್ಜಿ ಸಲ್ಲಿಕೆ ದಿನಾಂಕ ರಿವೀಲ್‌

BPL Ration Card: ರಾಜ್ಯದಲ್ಲಿ ಅನರ್ಹರ ಬಳಿ ಇರುವ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿದೆ. ಬಳಿಕ ಇಂತಹರನ್ನು ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ಸಹ ನಡೆಯುತ್ತಿದೆ. ಈ ನಡುವೆಯೇ ಹೊಸದಾಗಿ ಬಿಪಿಎಲ್‌ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ ಭರ್ಜರಿ ಗುಡ್‌ ನ್ಯೂಸ್‌ವೊಂದನ್ನು ಸಿಕ್ಕಂತಾಗಿದೆ.

ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್‌ ಕಾರ್ಡ್‌ ಪಡೆದುಕೊಳ್ಳುವ ಮೂಲಕ ಅನರ್ಹರು ಬಡವರ ಹೊಟ್ಟೆಗೆ ಕಲ್ಲು ಹಾಕುವ ಕೆಲಸವನ್ನು ಮಾಡುತ್ತಿದ್ದರು. ಇದಕ್ಕೆ ಇದೀಗ ಆಹಾರ ಇಲಾಖೆ ಕಡಿವಾಣ ಹಾಕಲು ಮುಂದಾಗಿದೆ. ಅನಹರ್ರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ಮುಂದುವರೆಸಿದೆ. ಈ ನಡುವೆಯೇ ಶುಭ ಸುದ್ದಿಯೊಂದನ್ನು ಸರ್ಕಾರ ನೀಡಿದೆ.

New BPL Ration Card Application Submit Date Revealed

ಇನ್ನೂ ಬಹುತೇಕ ಮಂದಿ ಅರ್ಹರಿದ್ದರೂ ಸಹ ಅವರಿಗೆ ಬಿಪಿಎಲ್‌ ಕಾರ್ಡ್‌ಗಳು ಸಿಕ್ಕಿಲ್ಲ. ಇಂತಹವರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಅರ್ಹರು ಹೊಸ ಬಿಪಿಎಲ್‌ ಕಾರ್ಡ್‌ಗೆ ಯಾವಾಗಿನಿಂದ ಅರ್ಜಿ ಸಲ್ಲಿಕೆ ಮಾಡಬಹುದು ಎನ್ನುವ ಮಾಹಿತಿಯನ್ನು ರಿವೀಲ್‌ ಮಾಡಿದೆ. ಹಾಗಾದ್ರೆ, ಯಾವಾಗಿನಿಂದ ಆರಂಭ ಎಂಬ ಪ್ರಶ್ನೆ ಬಹುತೇಕ ಮಂದಿಯ ತಲೆಯಲ್ಲಿ ಕಾಡುತ್ತಿರುತ್ತದೆ. ಉತ್ತರವನ್ನು ಇಲ್ಲಿ ನೀಡಲಾಗಿದೆ ನೋಡಿ.

ಹೊಸ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಯಾವಾಗ?: ರಾಜ್ಯದಲ್ಲಿ ಅನರ್ಹರ ಬಳಿ ಇರುವ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತಿಸಲಾಗುವುದು. ಅಷ್ಟೇ ಸಂಖ್ಯೆಯಲ್ಲೇ ಹೊಸ ಬಿಪಿಎಲ್‌ ಕಾರ್ಡ್‌ಗೆ ಮುಂದಿನ ತಿಂಗಳು ಅಂದರೆ ಅಕ್ಟೋಬರ್‌ನಲ್ಲಿ ಅರ್ಜಿ ಆಹ್ವಾನಿಸಲು ಆಹಾರ ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಕೆ.ಎಚ್‌.ಮುನಿಯಪ್ಪ ಕೊಟ್ಟ ಸ್ಪಷ್ಟನೆ ಏನು?: ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು, ಸರ್ಕಾರದ ಮಾನದಂಡಗಳ ಅನ್ವಯ ಬಿಪಿಎಲ್‌ ಕಾರ್ಡ್‌ಗಳನ್ನು ಪರಿಷ್ಕಣೆ ಮಾಡಲಾಗುವುದು. ಅನರ್ಹರು ಎಂದು ಕಂಡುಬಂದರೆ ಅಂತಹರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗುವುದು. ಯಾವ ಪಡಿತರ ಚೀಟಿಗಳನ್ನೂ ರದ್ದುಪಡಿಸುವುದಿಲ್ಲೆ ಎಂದು ಸ್ಪಷ್ಟನೆ ನೀಡಿದರು.

ಎಲ್ಲಾ ಪಡಿತರ ಚೀಟಿಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ. ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆ ಕಂಡುಬಂದರೆ, 24 ಗಂಟೆಯೊಳಗೆ ಸರಿಪಡಿಸಿ ಆಹಾರಧಾನ್ಯ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು. ಇನ್ನು ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಪಿಎಲ್‌ ಕಾರ್ಡ್‌ಗಳು ಅತೀ ಹೆಚ್ಚು ಇವೆ. ಶೇಕಡ 75ರಷ್ಟು ಬಿಪಿಎಲ್‌ ಕಾರ್ಡ್‌ಗಳು ರಾಜ್ಯದಲ್ಲಿ ಇವೆ. ಈ ಹಿನ್ನೆಲೆ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ ಅನಿವಾರ್ಯ ಆಗಿದೆ ಎಂದು ಹೇಳಿದರು.

ಸಾಮಾನ್ಯವಾಗಿ ಬಿಪಿಎಲ್‌ ಕಾರ್ಡ್‌ಗಳನ್ನು ಬಡತನ ರೇಖೆಗಿಂತ ಕೆಳಗಿನವರಿಗೆ ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಬಕಪಕ್ಷಿಗಳಂತೆ ಅನರ್ಹರು ಸಹ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಬಡವರ ಅನ್ನ ಕಿತ್ತುಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದ್ದು, ಇದರಿಂದ ಅನರ್ಹ ಪಡಿತರ ಚೀಟಿದಾರರಿಗೆ ಢವಢವ ಶುರು ಆದಂತಾಗಿದೆ.

ಈಗಾಗಲೇ ಈ ಹಿಂದೆಯೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿತ್ತು. ಆದರೆ, ಆ ವೇಳೆ ಬಡವರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಬಳಿಕ ಎಚ್ಚೆತ್ತ ಸರ್ಕಾರ ಯಾರೆಲ್ಲಾ ಬಡವರ ಬಿಪಿಎಲ್‌ ಕಾರ್ಡ್‌ಗಳು ರದ್ದಾಗಿವೆಯೋ ಅವರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸುವುದಲ್ಲದೆ, ಅವರಿಗೆ ಸಿಗಬೇಕಾದ ಪಡಿತರವನ್ನು ಕೂಡ ತಲುಪಿಸಲಾಗುತ್ತದೆ ಎಂದು ಭರವಸೆ ನಿಡಿತ್ತು. ಆಗ ನಿಲ್ಲಿಸಿದ್ದ ಪರಿಶೀಲನೆ ಕಾರ್ಯವನ್ನು ಇದೀಗ ಮತ್ತೆ ಮುಂದುವರೆಸಿದ್ದು, ಸರಿಯಾಗಿ ಗಮನಿಸಿ ಅನರ್ಹರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+