BPL Card: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಕೆ.ಎಚ್.ಮುನಿಯಪ್ಪ ಶುಭಸುದ್ದಿ
BPL Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಇದೀಗ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಹೊಸ ಬಿಪಿಎಲ್ ಕಾರ್ಡ್ ವಿತರಣೆ ಯಾವಾಗಿನಿಂದ ಆರಂಭ ಆಗಲಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಅನರ್ಹರು ಪಡೆದುಕೊಂಡಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಶ್ರೀಮಂತರು ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಹಿಂದಿನಿಂದಲೂ ಕೇಳಿಬಂದಿದ್ದವು.

ಆದರೆ, ಕಳೆದ ಕೆಲ ತಿಂಗಳುಗಳಿಂದ ಎಚ್ಚೆತ್ತ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಯಾರೆಲ್ಲಾ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆಯೋ ಅಂತಹರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮಾಡುತ್ತಿದೆ. ಈ ನಡುವೆಯೇ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅರ್ಹರಿಗೆ ಶೀಘ್ರವೇ ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿಪಕ್ಷಗಳು ಸರ್ಕಾರದ ಬಳಿ ಹಣ ಇಲ್ಲ, ಗ್ಯಾರಂಟಿಗಳು ಮುಚ್ಚಿಹೋಗುತ್ತವೆ ಎಂದು ಆರೋಪಗಳನ್ನು ಮಾಡುತ್ತಲಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಅಭಿವೃದ್ಧಿ ಕಾರ್ಯಗಳಿಗೂ ಸಹ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ. ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10,00,000 ಅನರ್ಹರನ್ನು ಎಪಿಎಲ್‌ಗೆ ವರ್ಗಾಹಿಸುತ್ತಿದ್ದೇವೆ ಎಂದು ಹೇಳಿದರು.
ಎಪಿಎಲ್ ಕಾರ್ಡ್‌ಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಅವರು ತೆಗೆದುಕೊಳ್ಳುತ್ತಿರಲಿಲ್ಲ. ಆದ್ದರಿಂದ ಅದನ್ನ ನಿಲ್ಲಿಸಿದೆವು. ಬೇಡಿಕೆಗಳು ಬಂದರೆ, ಮತ್ತೆ ಅಕ್ಕಿ ಕೊಡುತ್ತೇವೆ. ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳುವವರನ್ನು ನಿಲ್ಲಿಸಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಇನ್ನೂ ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. ಸದ್ಯ ಇದೀಗ ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ದಾರರನ್ನು ಜಾಲಾಡುವ ಕಾರ್ಯ ನಡೆಯುತ್ತಿದೆ.
ಸಿ.ಟಿ.ರವಿ ಅವರು ಅಧಿವೇಶನದಲ್ಲಿ ಮಾತನಾಡಿ, ರಾಜ್ಯದಲ್ಲಿ ಅಕ್ರಮ ಅಕ್ಕಿ ಸಾಗಣೆಯಾಗುತ್ತಿದೆ ಎಂದು ರಾಜ್ಯ ಸರ್ಕಾರವೇ ತಿಳಿಸಿತ್ತು. ವಿದೇಶಗಳಿಗೂ ಸಹ ಇಲ್ಲಿನ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ. ಹೆಚ್ಚು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತಿಲ್ಲವೇ? ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಯಾಕೆ? ಈ ಬಗ್ಗೆ ಎಸ್‌ಐಟಿ ತನಿಖೆ ಅಗತ್ಯ ಎಂದು ಹೇಳಿದರು.












Click it and Unblock the Notifications