ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಎದುರಾಯ್ತು ಮೊದಲ ಅಗ್ನಿ ಪರೀಕ್ಷೆ!

|
Google Oneindia Kannada News

ಬೆಂಗಳೂರು, ಸೆ. 28: ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೊದಲ ಅಗ್ನಿ ಪರೀಕ್ಷೆಯೂ ಎದುರಾದಂತಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯ ಸವಾಲನ್ನು ಬಿಜೆಪಿ ಎದುರಿಸಬೇಕಿದೆ.

ಶಾಸಕರಾಗಿದ್ದ ಮಾಜಿ ಸಚಿವ ದಿ. ಸಿ.ಎಂ. ಉದಾಸಿ ಅವರ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಹಾಗೆ ಮಾಜಿ ಸಚಿವ ದಿ. ಎಂ. ಮನಗೂಳಿ ಅವರ ನಿಧನದಿಂದ ವಿಜಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪ್ರಭಾವವನ್ನು ಬೀರುವುದಿಲ್ಲ. ಆದರೂ ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅತ್ಯಂತ ಮಹತ್ವದ್ದಾಗಿದೆ.

ಜೊತೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೂ ಕೂಡ ಈ ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಬಿಜೆಪಿಯಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆಯ ಗೊಂದಲ ಮುಂದುವರೆದಿದೆ ಎನ್ನಲಾಗಿದೆ.

ಅಖಾಡಕ್ಕಿಳಿದ ಸಿಎಂ ಬೊಮ್ಮಾಯಿ!

ಅಖಾಡಕ್ಕಿಳಿದ ಸಿಎಂ ಬೊಮ್ಮಾಯಿ!

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಮೊದಲ ಮಹತ್ವದ ಉಪ ಚುನಾವಣೆ ಎದುರಾಗಿದೆ. ಹಾನಗಲ್ ಹಾಗೂ ಸಿಂಧಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಿದೆ. ಈ ಉಪ ಚುನಾವಣೆ ಗೆಲ್ಲುವ ಮೂಲಕ ಶಾಡೋ ಸಿಎಂ ಅಪಖ್ಯಾತಿಯಿಂದ ಬಸವರಾಜ ಬೊಮ್ಮಾಯಿ ಅವರು ಹೊರ ಬರಬೇಕಿದೆ. ಹೀಗಾಗಿ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಸಿಎಂ ಬಸವರಾಜ ಬೊಮ್ಮಾಯಿ ಅಖಾಡಕ್ಕಿಳಿದಿದ್ದಾರೆ. ಮಹತ್ವದ ಹೇಳಿಕೆಯನ್ನೂ ಕೊಟ್ಟಿದ್ದಾರೆ.

ಯಡಿಯೂರಪ್ಪ ಹೆಸರು ಪ್ರಸ್ತಾಪಿಸದ ಸಿಎಂ ಬೊಮ್ಮಾಯಿ!

ಯಡಿಯೂರಪ್ಪ ಹೆಸರು ಪ್ರಸ್ತಾಪಿಸದ ಸಿಎಂ ಬೊಮ್ಮಾಯಿ!

ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ಘೊಷಣೆ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, "ಎರಡೂ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಮೊನ್ನೆಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಎರಡೂ ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸುತ್ತೇವೆ. ಸ್ಥಳೀಯರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಎರಡು ಕ್ಷೇತ್ರ ಗಳಲ್ಲೂ ಗೆಲ್ಲುವ ವಿಶ್ವಾಸ ಇದೆ.

ನನ್ನ ನಾಯಕತ್ವ ಮಾತ್ರವಲ್ಲ, ಪಕ್ಷದ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ" ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದಿರುವುದು ಕುತೂಹಲ ಮೂಡಿಸಿದೆ.

ತವರು ಜಿಲ್ಲೆಯಲ್ಲಿ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ!

ತವರು ಜಿಲ್ಲೆಯಲ್ಲಿ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ!

ಜೊತೆಗೆ ಅನರೀಕ್ಷಿತವಾಗಿ ಒಲಿದು ಬಂದಿರುವ ಮುಖ್ಯಮಂತ್ರಿ ಹುದ್ದೆಯೊಂದಿಗೆ ತವರು ಜಿಲ್ಲೆಯಲ್ಲಿ ತಮ್ಮ ಪ್ರಭಾವ ತೋರಿಸಬೇಕಾ ಅನಿವಾರ್ಯತೆಯಿದೆ. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರವು ಸಿಎಂ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಪಕ್ಕದ ಕ್ಷೇತ್ರ. ಹೀಗಾಗಿ ಅಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಗಿಂತ ಸಿಎಂ ಬೊಮ್ಮಾಯಿ ಅವರಿಗೆ ಹೆಚ್ಚಿನ ಒತ್ತಡವಿದೆ.


ಇನ್ನು ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲವಾಗಿಲ್ಲ. ಅಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರ ಅವರಿಗೆ ಟಿಕೆಟ್ ಕೊಡಲು ಬಿಜೆಪಿ ತೀರ್ಮಾನಿಸಿದೆ ಎಂಬ ಮಾಹಿತಿಯಿದೆ. ಅಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿ ಟಿಕೆಟ್‌ಗೆ ಪ್ರಯತ್ನ ನಡೆಸಿದ್ದರು ಎನ್ನಲಾಗಿತ್ತು.

ಬಿಜೆಪಿ ಭವಿಷ್ಯಕ್ಕೆ ಹೈಕಮಾಂಡ್ ಪ್ರಯೋಗ!

ಬಿಜೆಪಿ ಭವಿಷ್ಯಕ್ಕೆ ಹೈಕಮಾಂಡ್ ಪ್ರಯೋಗ!

ಕರ್ನಾಟಕದಲ್ಲಿ ಬಿಜೆಪಿ ಕಟ್ಟಿಬೆಳೆಸಿದ ಹಾಗೂ ಎರಡು ಬಾರಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕತ್ವದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಹೀಗಾಗಿಯೇ ಇತ್ತೀಚೆಗೆ ದಾವಣಗೆರೆಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮುಖ್ಯಮಂತ್ರಿ ಬಸವರಾಜ ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆಗಳನ್ನು ಮಾಡುತ್ತೇವೆ ಎಂದು ಘೊಷಣೆ ಮಾಡಿದ್ದರು. ಅದಾದ ಬಳಿಕ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ.


ಹೀಗಾಗಿ ಈ ಉಪ ಚುನಾವಣೆ ಸಿಎಂ ಬದವರಾಜ ಬೊಮ್ಮಾಯಿ ಅವರಿಗೆ ಅಗ್ನಿಪರೀಕ್ಷೆಯಾಗಿದೆ. ಜೊತೆಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಶಾಡೋ ಸಿಎಂ ಪರಿಧಿಯಿಂದ ಸೂಚಿಸಿದೆ ಎನ್ನಲಾಗಿದೆ. ಹೀಗಾಗಿ ಅ. 30ರಂದು ನಡಯಲಿರುವ ಉಪ ಚುನಾವಣೆ ಫಲಿತಾಂಶ ರಾಜ್ಯ ಬಿಜೆಪಿ ನಾಯಕತ್ವವವನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸಲಿದೆ ಎಂಬುದೂ ಕೂಡ ಬಿಜೆಪಿ ವಲಯದಿಂದಲೇ ಬಂದಿರುವ ಮಾಹಿತಿ!

English summary
New challenge raised to Chief Minister Basavaraj Bommai with assembly by-election. KNow more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X