ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಆರ್ಥಿಕ, ಸಾಮಾಜಿಕ ಸವಾಲುಗಳನ್ನು ಎದುರಿಸಬೇಕಿದೆ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜು. 28: ಮುಖ್ಯಮಂತ್ರಿಯಾಗಿ ನನ್ನ ಎದುರು ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳಿವೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದದರು. ಅಲ್ಲಿ ಸಂಪುಟ ಸಭೆಗೂ ಮೊದಲು ಮಾತನಾಡಿದ್ದಾರೆ.

Recommended Video

ಸಿಎಂ ಆಗ್ತಿಂದ್ದಂತೆ ವಿರೋಧಪಕ್ಷಕ್ಕೆ ಟಾಂಗ್ ಕೊಟ್ಟ ಬಸವರಾಜ್ ಬೊಮ್ಮಾಯಿ | Oneindia Kannada

"ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ವೈರಸ್ ಸೇರಿದಂತೆ ಹಲವು ಸಮಖಷ್ಟಗಳಿದ್ದಾಗ ನನ್ನನ್ನು ಸೇರಿಸಿಕೊಂಡು ಕೆಲಸ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅದು ಸಹಾಯಕವಾಗಲಿದೆ" ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

new chief minister basavaraj bommai first reaction after oath taking

"ಈಗ ಸಚಿವ ಸಂಪುಟ ಸಭೆಯಲ್ಲಿ ಸದ್ಯದ ರಾಜ್ಯದ ಸ್ಥಿತಿಗತಿಗಳ ವಿವರ ಪಡೆಯುತ್ತೇನೆ. ಈಗಿನ ಹಣಕಾಸಿನ ಸ್ಥಿತಿ ನೋಡಿಕೊಂಡು ಹಲವು ನಿರ್ಧಾರಗಳನ್ನು ಮಾಡುತ್ತೇನೆ. ಆರ್ಥಿಕ, ಸಾಮಾಜಿಕ ಸವಾಲುಗಳಿರುವುದು ನಿಜ. ಆದರೆ ಈ ಸವಾಲುಗಳನ್ನು ಪಕ್ಷದ ಹಿರಿಯರ, ಎಲ್ಲರ ಮಾರ್ಗದರ್ಶನದಲ್ಲಿ ಅವರ ಸಲಹೆಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಎದುರಿಸುತ್ತೇನೆ. ನಾನು ಮುಖ್ಯಮಂತ್ರಿ ಮಾತ್ರವಲ್ಲ ಎಲ್ಲರೊಳಗೊಬ್ಬ ಎಂಬಂತೆ ಕೆಲಸ ಮಾಡುತ್ತೇನೆ" ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

"ಇಂದು ದೆಹಲಿಗೆ ಹೋಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇನೆ. ರಾಜ್ಯದ ಸ್ಥಿತಿಗತಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾಡುತ್ತೇವೆ. ಎಲ್ಲರ ಸಹಕಾರದೊಂದಿಗೆ ಉತ್ತಮವಾಗಿ ಕೆಲಸ ಮಾಡುತ್ತೇನೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

English summary
New chief minister Basavaraj Bommai first reaction after oath taking. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X