ಕೊರೊನಾ ವೈರಸ್: ಚಿಕ್ಕಮಗಳೂರು 111, ಚಿತ್ರದುರ್ಗ 66, ರಾಮನಗರದಲ್ಲಿ 57 ಕೇಸ್ ಪತ್ತೆ

ಚಿಕ್ಕಮಗಳೂರು, ಆಗಸ್ಟ್ 13: ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುರುವಾರ 111 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1929 ಕ್ಕೆ ಏರಿಕೆಯಾಗಿದೆ.

Recommended Video

      DJ ಹಳ್ಳಿಯಲ್ಲಿ ಇದೀಗ ಶುರುವಾಯ್ತು ಹೊಸ ಆತಂಕ | Oneindia Kannada

      ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು 53, ತರೀಕೆರೆ 34, ಕಡೂರು 16, ಮೂಡಿಗೆರೆ 7 ಹಾಗೂ ಶೃಂಗೇರಿಯಲ್ಲಿ 1 ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 38 ಮಂದಿ ಸಾವನ್ನಪ್ಪಿದ್ದು, 587 ಸಕ್ರಿಯ ಪ್ರಕರಣಗಳಿವೆ.

      ಚಿತ್ರದುರ್ಗದಲ್ಲಿ ಮತ್ತೆ 66 ಜನರಿಗೆ ಕೊರೊನಾ ಸೋಂಕು

      ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ ಮತ್ತೆ 66 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1350 ಕ್ಕೆ ಏರಿಕೆಯಾಗಿದೆ.

      111 New Coronavirus Infection Cases Reported In Chikkamagaluru District

      ಜಿಲ್ಲೆಯ ಹಲವೆಡೆ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 45 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ-12 ಹೊಳಲ್ಕೆರೆ-05, ಹಿರಿಯೂರು-20, ಚಳ್ಳಕೆರೆ-22, ಹೊಸದುರ್ಗ-06 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 01 ಸೇರಿದಂತೆ ಒಟ್ಟು 66 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

      ಒಟ್ಟು 982 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದುವರೆಗೆ 18 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 706 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 625 ಸಕ್ರಿಯ ಪ್ರಕರಣಗಳು ಇವೆ.

      ರಾಮನಗರ ಜಿಲ್ಲೆಯಲ್ಲಿ 57 ಕೊರೊನಾ ಪ್ರಕರಣ ದೃಢ

      ರಾಮನಗರ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 2 ಮಂದಿ ಸಾವನ್ನಪ್ಪಿದ್ದು, 57 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ 1974 ಪ್ರಕರಣಗಳು ದಾಖಲಾಗಿವೆ.

      ಜಿಲ್ಲೆಯಲ್ಲಿ ಚನ್ನಪಟ್ಟಣ 5, ಕನಕಪುರ 8, ಮಾಗಡಿ 6 ಮತ್ತು ರಾಮನಗರ 38 ಪ್ರಕರಣಗಳು ಸೇರಿ ಇಂದು ಒಟ್ಟು 57 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ತಿಳಿಸಿದ್ದಾರೆ.

      ಇಂದು ಕನಕಪುರ ತಾಲ್ಲೂಕಿನಲ್ಲಿ ಒಬ್ಬರು ಹಾಗೂ ರಾಮನಗರ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 2, ಕನಕಪುರ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 6 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+