ಕರ್ನಾಟಕ; ಹೊಸ ಕೋವಿಡ್ ಪ್ರಕರಣ 5 ಸಾವಿರಕ್ಕಿಂತ ಕಡಿಮೆ
ಬೆಂಗಳೂರು, ಅಕ್ಟೋಬರ್ 26: ಕರ್ನಾಟಕದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 8,02,817ಕ್ಕೆ ಏರಿಕೆಯಾಗಿದೆ. ಆದರೆ, ಕಳೆದ ಎರಡು ದಿನಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತ ಕಡಿಮೆಯಾಗಿದೆ.
ಅಕ್ಟೋಬರ್ 24ರಂದು 4471, ಅಕ್ಟೋಬರ್ 25ರಂದು 4439 ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ಹೊಸ ಪ್ರಕರಣಕ್ಕಿಂತ ಡಿಸ್ಚಾರ್ಜ್ ಆದವರ ಸಂಖ್ಯೆಯೇ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಇದುವರೆಗೂ ಗುಣಮುಖಗೊಂಡವರ ಸಂಖ್ಯೆ 7,10,843ಕ್ಕೆ ಏರಿಕೆಯಾಗಿದೆ. ಶನಿವಾರ 7153 ಜನರು, ಭಾನುವಾರ 10,106 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಕಡಿಮೆಯಾಗುತ್ತಿದೆ. ಅಕ್ಟೋಬರ್ 24ರಂದು 86,749, ಅಕ್ಟೋಬರ್ 25ರಂದು 81,050 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದವು.
ಶನಿವಾರ ರಾಜ್ಯದಲ್ಲಿ 52 ಜನರು ಮೃತಪಟ್ಟಿದ್ದಾರೆ. ಭಾನುವಾರ ರಾಜ್ಯದಲ್ಲಿ ಒಟ್ಟು ಮೃತಪಟ್ಟವರು ಕೇವಲ 32. ರಾಜ್ಯದಲ್ಲಿ ಇದುವರೆಗೂ ಒಟ್ಟು ಮೃತಪಟ್ಟವರ ಸಂಖ್ಯೆ 10,905.
ರಾಜ್ಯದಲ್ಲಿ ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿಯೇ ಶನಿವಾರ 2,251, ಭಾನುವಾರ 2,468 ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,25,773ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಹೊರತುಪಡಿಸಿದರೆ ಬೆಳಗಾವಿ 24428, ಬಳ್ಳಾರಿ 36815, ಹಾಸನ 24213, ಮೈಸೂರು 46705, ಧಾರವಾಡ 20495 ಒಟ್ಟು ಪ್ರಕರಣಗಳಿವೆ.











Click it and Unblock the Notifications