ಕರ್ನಾಟಕ; ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕುಸಿತ

ಬೆಂಗಳೂರು, ಅಕ್ಟೋಬರ್ 25 : ಕರ್ನಾಟಕದಲ್ಲಿ ಪ್ರತಿದಿನ ದಾಖಲಾಗುವ ಹೊಸ ಕೋವಿಡ್ ಪ್ರಕರಣಗಳಲ್ಲಿ ಭಾರಿ ಇಳಿಮುಖವಾಗಿದೆ. ಶನಿವಾರದ ವರದಿಯಂತೆ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,98,378.

ಶನಿವಾರ ಕರ್ನಾಟಕದಲ್ಲಿ 4,471 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ದಾಖಲಾದ ಅತಿ ಕಡಿಮೆ ಹೊಸ ಪ್ರಕರಣಗಳ ಸಂಖ್ಯೆ ಇದಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8 ಲಕ್ಷದ ಸಮೀಪಕ್ಕೆ ಬಂದಿದೆ.

ಕರ್ನಾಟಕದಲ್ಲಿ ಮಾರ್ಚ್ 8ರಂದು ಮೊದಲ ಕೋವಿಡ್ ಪ್ರಕರಣ ದಾಖಲಾಗಿತ್ತು. ಅಕ್ಟೋಬರ್ 24ಕ್ಕೆ ಒಟ್ಟು ಸೋಂಕಿತರ ಸಂಖ್ಯೆ 7. 98 ಲಕ್ಷಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದ್ದು, ಶನಿವಾರ ಮೃತಪಟ್ಟವರು ಕೇವಲ 52 ಜನರು.

ರಾಜ್ಯದಲ್ಲಿ ಹೆಚ್ಚು ಸೋಂಕಿತರು ಇರುವುದು ಬೆಂಗಳೂರು ನಗರದಲ್ಲಿ. ಶನಿವಾರ ನಗರದಲ್ಲಿ 2251 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,23,305ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ

ಕರ್ನಾಟಕದ ಕೋವಿಡ್ ವರದಿ

ಮಾರ್ಚ್ 8ರಂದು ಮೊದಲ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಯಿತು. 108 ದಿನಗಳಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿತು. 14 ದಿನಗಳಲ್ಲಿ 98 ಸಾವಿರ ಪ್ರಕರಣಗಳ ಸಂಖ್ಯೆ ಹೆಚ್ಚಾಯಿತು. ಈ ವಾರದ 7 ದಿನಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 32,792.

ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ

ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ

ಹೊಸ ಪ್ರಕರಣಗಳ ಜೊತೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆಯಾಗುತ್ತಿದೆ. ಅಕ್ಟೋಬರ್ 15ರ ವೇಳೆಗೆ 1 ಲಕ್ಷವಿದ್ದ ಸಕ್ರಿಯ ಪ್ರಕರಣಗಳು ಅಕ್ಟೋಬರ್ 24ಕ್ಕೆ 86,749ಕ್ಕೆ ಬಂದಿದೆ. ಹೊಸ ಪ್ರಕರಣಕ್ಕಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಗುಣಮುಖಗೊಳ್ಳುವವರು

ಗುಣಮುಖಗೊಳ್ಳುವವರು

ಶನಿವಾರ ರಾಜ್ಯದಲ್ಲಿ 4471 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಆದರೆ, ಗುಣಮುಖಗೊಂಡು ಡಿಸ್ಚಾರ್ಜ್ ಆದವರು 7153. ಇದುವರೆಗೂ ರಾಜ್ಯದಲ್ಲಿ 700737 ಜನರು ಗುಣಮುಖಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಹೇಳಿದೆ.

Recommended Video

    ಎಲ್ಲರೂ BJPಗೆ ಸೇರೋದು ಪಕ್ಕ!! | Oneindia Kannada
    ಬೆಂಗಳೂರು ನಗರ ಟಾಪ್

    ಬೆಂಗಳೂರು ನಗರ ಟಾಪ್

    ರಾಜ್ಯದಲ್ಲಿಯೆ ಹೆಚ್ಚು ಕೋವಿಡ್ ಸೋಂಕಿತರು ಇರುವ ಪಟ್ಟಿಯಲ್ಲಿ ಬೆಂಗಳೂರು ಟಾಪ್. 323305 ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ. ಸಕ್ರಿಯ ಪ್ರಕರಣಗಳ ಸಂಖ್ಯೆ. ಬಳ್ಳಾರಿ 36683, ಮೈಸೂರು 46565, ದಕ್ಷಿಣ ಕನ್ನಡ 29401 ಒಟ್ಟು ಪ್ರಕರಣಗಳಿವೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+