ಬೆಂಗಳೂರು ಸೇರಿ ವಿವಿಧ ಸಾರಿಗೆ ನಿಗಮಗಳಿಗೆ ಹೊಸ ಇ ಬಸ್‌ಗಳು- ಯಾವ ನಿಗಮಕ್ಕೆ ಎಷ್ಟು ಬಸ್, ವ್ಯಯಿಸುತ್ತಿರುವ ಹಣವೆಷ್ಟು? ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್ 09: ಬೆಂಗಳೂರು ಮಹಾನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಪ್ರಾರಂಭಿಸಿ ಒಂದೂವರೆ ವರ್ಷಗಳಾಗಿದೆ. ಕೆಲ ಸಮಸ್ಯೆಗಳನ್ನು ಎದುರಿಸಿದ ಬಳಿಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್ ಬಸ್‌ಗಳ ಮೂಲಕ ಎಂದು ಲಾಭವನ್ನು ಪಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಮಹಾನಗರದಲ್ಲಿ ಒಟ್ಟು 390 ಇ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಪ್ರತಿದಿನ ಸರಾಸರಿ 3 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ. ನಗರದ ಇತರ ಸಾಮಾನ್ಯ ಬಸ್ ಸೇವೆಗಳಿಗಿಂತ ಇ-ಬಸ್‌ಗಳನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿರಿಯ ಬಿಎಂಟಿಸಿ ಅಧಿಕಾರಿಯೊಬ್ಬರ ಪ್ರಕಾರ, 'ನವೀನತೆ, ಸೌಕರ್ಯ ಮತ್ತು ಪರಿಸರ ಸ್ನೇಹಪರತೆಯಂತಹ ಅಂಶಗಳ ಕಾರಣ ಈ ಬಸ್‌ಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಪ್ರತಿದಿನ ಬಸ್‌ಗಳು ಒಟ್ಟು 80,000 ಕಿಮೀ ಗಳನ್ನು ಕ್ರಮಿಸುತ್ತವೆ. ಸರಾಸರಿ, ಪ್ರತಿ ಕಿಲೋಮೀಟರ್‌ಗೆ (ಇಪಿಕೆಎಂ) ಆದಾಯ 50 ರೂ.ಆಗಿದೆ. ಸಾಮಾನ್ಯ ಸೇವೆಗಳಿಗಿಂತ 5 ರೂ. ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಹಣವನ್ನು ಬಳಸಿಕೊಳ್ಳುವ ಮೂಲಕ ನಿಗಮವು ತನ್ನ ಮೊದಲ ಇ-ಬಸ್ ಸೇವೆಯನ್ನು ಡಿಸೆಂಬರ್ 2021 ರಲ್ಲಿ ಪ್ರಾರಂಭಿಸಿತು. ಯೋಜನೆಯಡಿ 90 ಬಸ್‌ಗಳನ್ನು ಹೊರತರಲಾಗಿದೆ. ಆಗಸ್ಟ್ 2022 ರ ನಂತರ, ಯೋಜನೆಯ ಅಡಿಯಲ್ಲಿ 300 ಹೆಚ್ಚಿನ ಇ-ಬಸ್‌ಗಳನ್ನು ಪರಿಚಯಿಸಲಾಗಿದೆ. ಬಸ್ಸುಗಳು 18 ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತವೆ. ಇವುಗಳು ಅನೇಕ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕಿಸುತ್ತವೆ.

ಹೊಸ 921 ವಾಹನಗಳು ಸೇರ್ಪಡೆಗೊಂಡ ನಂತರ, ಇ-ಬಸ್‌ಗಳ ಸಂಖ್ಯೆ 1,311 ಕ್ಕೆ ತಲುಪುತ್ತದೆ ಎಂದು ತಿಳಿದುಬಂದಿದೆ. ಹಂತ ಹಂತವಾಗಿ ಡೀಸೆಲ್ ಬಸ್‌ಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
1,020 ಹೊಸ ಬಸ್‌ಗಳನ್ನು ವಿವಿಧ ಸರ್ಕಾರಿ ಸಾರಿಗೆ ನಿಗಮಗಳಿಗೆ ಖರೀದಿಸಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಂದಾಜು 150 ಕೋಟಿ ವೆಚ್ಚದಲ್ಲಿ 320 ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸಲಿದೆ.
ಮುಂದಿನ ದಿನಗಳಲ್ಲಿ ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (ಜಿಸಿಸಿ) ಹಣಕಾಸು ಮಾದರಿಯಲ್ಲಿ ಬಿಎಂಟಿಸಿಗೆ 320 ಬಸ್‌ಗಳನ್ನು ಖರೀದಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 100 ಕೋಟಿ ರೂಪಾಯಿ ವೆಚ್ಚದಲ್ಲಿ 250 ಬಸ್‌ಗಳನ್ನು ಖರೀದಿಸಲಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 150 ಕೋಟಿ ರೂಪಾಯಿ ವೆಚ್ಚದಲ್ಲಿ 350 ಬಸ್‌ಗಳನ್ನು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 100 ಕೋಟಿ ರೂ. ವೆಚ್ಚದಲ್ಲಿ 250 ಬಸ್‌ಗಳನ್ನು ಖರೀದಿಸಲಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications