E Khata: ಬಿ -ಖಾತಾ ಆಸ್ತಿದಾರರಿಗೆ ಹೊಸ ಗುಡ್‌ನ್ಯೂಸ್!
E Khata: ಅನಧಿಕೃತ ಹಾಗೂ ಬಿ ಖಾತಾದ ಆಸ್ತಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿರುವ ಎಲ್ಲಾ ಅನಧಿಕೃತ ಆಸ್ತಿಗಳಿಗೆ ಹಾಗೂ ರೆವಿನ್ಯೂಗಳಿಗೆ ಬಿ -ಖಾತಾ ನೀಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವ ವಿಚಾರ ಗೊತ್ತೇ ಇದೆ. ಇದೀಗ ಇದರೊಂದಿಗೆ ಮತ್ತೊಂದು ಗುಡ್‌ನ್ಯೂಸ್ ಅನ್ನು ಕೊಡಲಾಗಿದ್ದು. ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಪ್ರಸ್ತಾಪಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಎಲ್ಲಾ ಆಸ್ತಿಗಳಿಗೆ ಕಡ್ಡಾಯ ಇ -ಖಾತಾ ಮಾಡಿದೆ. ಈ ರೀತಿ ಮಾಡಿದಾಗಲೇ ಬಿ -ಖಾತಾ ಇರುವ ಆಸ್ತಿದಾರರಿಗೆ ಬಿಗ್ ಶಾಕ್ ಎದುರಾಗಿತ್ತು. ಎಲ್ಲಿ ಬಿ - ಖಾತಾ ಇರುವವರಿಗೆ ಇ -ಖಾತಾ ಸಿಗುವುದಿಲ್ಲವೋ ಎನ್ನುವ ಆತಂಕ ಇತ್ತು.
ಕರ್ನಾಟಕದಲ್ಲಿ ಅಂದಾಜು 40ರಿಂದ 50 ಲಕ್ಷ ಆಸ್ತಿಗಳು ಬಿ -ಖಾತಾ ವ್ಯಾಪ್ತಿಯಲ್ಲಿ ಇವೆ ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ಆಸ್ತಿಗಳನ್ನು ಇದೀಗ ಬಿ ಖಾತಾದ ಮೂಲಕ ಇ -ಖಾತಾ ನೀಡುವುದಕ್ಕೆ ಕ್ರಮ ವಹಿಸಲಾಗುತ್ತಿದೆ. ಆದರೆ, ಈ ಆಸ್ತಿಗಳನ್ನು ಎ -ಖಾತಾಗೆ ವರ್ಗಾವಣೆ ಮಾಡುವುದಕ್ಕೆ ಕಾನೂನಿನ ಪ್ರಕಾರ ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಇದೀಗ ಬಿ -ಖಾತಾ ಇರುವವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಗುಡ್‌ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದ್ದಾರೆ.
ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮುನ್ಸಿಪಲ್ ಕಾಯ್ದೆಗಳ ತಿದ್ದುಪಡಿಯಂತೆ ಕರ್ನಾಟಕ ಪೌರಸಭೆಗಳ (ತೆರಿಗೆ) ನಿಯಮಗಳು 1995 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಶೆಡ್ಯೂಲ್ 3ರ ತೆರಿಗೆ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅದರಂತೆ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಇ-ಖಾತಾ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಬಿ -ಖಾತಾ ಹೊಂದಿರುವ ಆಸ್ತಿದಾರರಲ್ಲಿ ನಿರಾಳತೆ ಮೂಡಿದೆ.
ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆ ಮಾಡಲು ಅನುಸರಿಸಬೇಕಾದ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ದಾಖಲೆಗಳ ಕುರಿತು ವ್ಯವಸ್ಥಿತ ಕಾರ್ಯಾಚರಣೆ ವಿಧಾನವನ್ನು ಪೌರಾಡಳಿತ ನಿರ್ದೇಶನಾಲಯದಿಂದ 2025ನೇ ಫೆಬ್ರವರಿ 17ರಂದು ಹೊರಡಿಸಲಾಗಿದೆ ಹಾಗೂ 2025ನೇ ಫೆಬ್ರವರಿ 11ರಿಂದ ಅನಧಿಕೃತ ಸ್ವತ್ತುಗಳಿಗೆ ಖಾತ ನೀಡಲು ಇ-ಆಸ್ತಿ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಎಲ್ಲಾ ಅನಧಿಕೃತ ಆಸ್ತಿಗಳಿಗೂ ಒಂದು ಬಾರಿ ಪರಿಹಾರ ಸಿಕ್ಕಂತಾಗಿದೆ. ಆದರೆ, ಮುಂದಿನ ದಿನಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಈ ಮಾದರಿಯನ್ನು ಅನುಸರಿಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಸ್ಪಷ್ಟವಾಗಿ ಹೇಳಿದೆ.












Click it and Unblock the Notifications