ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೂಪಾಂತರಿ ಕೊರೊನಾ ವೈರಸ್: ಹೊಸ ವರ್ಷದಲ್ಲಿ ಕಾದಿದೆ ಶಾಕ್!

|
Google Oneindia Kannada News

ಬೆಂಗಳೂರು, ಡಿ. 26: ರೂಪಾಂತರಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಸುಧಾಕರ್, ಹೊಸ ಪ್ರಭೇದದ ಕೋವಿಡ್ ನಿಯಂತ್ರಣಕ್ಕೆ ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ರೂಪಿಸಬೇಕಿದೆ. ಇದಕ್ಕಾಗಿ ಗೃಹ ಇಲಾಖೆಯ ಜೊತೆ ಸಭೆ ನಡೆಸಿ ನೂತನ ಮಾರ್ಗಸೂಚಿ ರೂಪಿಸಲಾಗುವುದು ಎಂದರು.

ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಈ ಲಸಿಕೆಯನ್ನು ಪ್ರಾಯೋಗಿಕವಾಗಿ ಪಡೆಯಬಹುದು. ಕೊರೊನಾ ವಾರಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಈ ಲಸಿಕೆಯನ್ನು ಪಡೆದು ಪ್ರಯೋಗದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಕ್ಲಿನಿಕಲ್ ಟ್ರಯಲ್ನಲ್ಲಿ ಪಾಲ್ಗೊಂಡು ಸಹಾಯ ಮಾಡಬಹುದು ಎಂದರು.

new guidelines formulated to control the mutant corona virus in state: Dr Sudhakar

ಯು.ಕೆ.ಯಿಂದ ಬಂದ 2,500 ಜನ ಪೈಕಿ, 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 14 ಜನರಿಗೆ ಪಾಸಿಟಿವ್ ಆಗಿದೆ. ಇವರ ಮಾದರಿಯನ್ನು ನಿಮ್ಹಾನ್ಸ್ ನ ಲ್ಯಾಬ್ ಗೆ ಕಳುಹಿಸಲಾಗಿದೆ. ಈ ಮಾದರಿಗಳನ್ನು ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಇದಕ್ಕೆ 48 ಗಂಟೆಗಳ ಕಾಲ ಬೇಕಾಗುತ್ತದೆ. ವರದಿ ಬಂದ ಬಳಿಕ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಇಡೀ ದೇಶದಲ್ಲಿ ಯು.ಕೆ.ಯಿಂದ ಒಟ್ಟು 38,500 ಜನರು ಬಂದಿದ್ದಾರೆ. ಎಲ್ಲ ರಾಜ್ಯಗಳಿಂದ ಬಂದ ಮಾದರಿ, ವರದಿಯನ್ನು ಕಲೆಹಾಕಿ ಅಂತಿಮ ವರದಿಯನ್ನು ಐಸಿಎಂಆರ್ ಪ್ರಕಟಿಸಲಿದೆ ಎಂದರು.

new guidelines formulated to control the mutant corona virus in state: Dr Sudhakar

ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ವ್ಯವಸ್ಥೆ ಇದೆ. ನೆಗೆಟಿವ್ ವರದಿ ಇಲ್ಲದವರನ್ನೂ ನಿಲ್ದಾಣದಲ್ಲೇ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

Recommended Video

#REWIND 2020: ಈ ವರ್ಷ ಬಳ್ಳಾರಿ ಜನತೆಯನ್ನು ಇನ್ನಿಲ್ಲದಂತೆ ಕಾಡಿದ 'ಕೊರೊನಾ ಸೋಂಕು ಮತ್ತು ಜಿಲ್ಲೆ ವಿಭಜನೆ' ವಿಚಾರ | Oneindia Kannada

English summary
Health Minister Dr K Sudhakar said that a new guidelines will be formulated in consultation with the Home Department regarding the control of the mutant corona. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X