ನ್ಯಾ.ವಿಕ್ರಂಜಿತ್ ಸೇನ್ ನೂತನ ಲೋಕಾಯುಕ್ತ?

ಬೆಂಗಳೂರು, ಡಿಸೆಂಬರ್ 22 : ವೈ.ಭಾಸ್ಕರರಾವ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ಲೋಕಾಯುಕ್ತದ ಹುದ್ದೆಗೆ ನ್ಯಾ.ವಿಕ್ರಂಜಿತ್ ಸೇನ್ ಹೆಸರು ಕೇಳಿಬರುತ್ತಿದೆ. ಕರ್ನಾಟಕ ಸರ್ಕಾರ ವಿಕ್ರಂಜಿತ್ ಸೇನ್ ಅವರ ಜೊತೆ ಈ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.

ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಲೋಕಾಯುಕ್ತ ನ್ಯಾ.ವೈ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಅವರನ್ನು ಜುಲೈನಲ್ಲಿ ಬಂಧಿಸಿತ್ತು. ಪುತ್ರನ ಬಂಧನವಾದ ಬಳಿಕ ಸರಣಿ ರಜೆ ಪಡೆದಿದ್ದ ಭಾಸ್ಕರರಾವ್ ಅವರು ಡಿಸೆಂಬರ್ 7ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.[ಲೋಕಾಯುಕ್ತ ಹುದ್ದೆಗೆ ಎಸ್.ಆರ್.ನಾಯಕ್ ಹೆಸರು?]

vikramjit sen

ಸದ್ಯ, ಹೊಸ ಲೋಕಾಯುಕ್ತರ ನೇಮಕದ ಬಗ್ಗೆ ಚಿಂತನೆ ನಡೆಸುತ್ತಿರುವ ಸರ್ಕಾರ, ವಿಕ್ರಂಜಿತ್ ಸೇನ್ ಮತ್ತು ನ್ಯಾ.ಎಸ್.ಆರ್.ನಾಯಕ್ ಅವರ ಹೆಸರುಗಳನ್ನು ಪರಿಶೀಲಿಸುತ್ತಿದೆ. ನ್ಯಾ.ವಿಕ್ರಂಜಿತ್ ಸೇನ್ ಅವರ ಹೆಸರನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರ ಜೊತೆ ಮಾತುಕತೆ ನಡೆಸಲು ನಿರ್ಧರಿಸಿದೆ.[ಕರ್ನಾಟಕ ಲೋಕಾಯುಕ್ತ ಹಗರಣದ Timeline]

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿರುವ ವಿಕ್ರಂಜಿತ್ ಸೇನ್ ಅವರು ಸದ್ಯ, ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿಸೆಂಬರ್ 30ರಂದು ಅವರು ನಿವೃತ್ತರಾಗಲಿದ್ದು, ಆ ನಂತರ ಅವರ ಜೊತೆ ಮಾತುಕತೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಾನೂನು ಇಲಾಖೆಯ ಅಧಿಕಾರಿಯೊಬ್ಬರು ಒನ್ ಇಂಡಿಯಾ ಜೊತೆ ಮಾತನಾಡಿದ್ದು, ಲೋಕಾಯುಕ್ತ ಹುದ್ದೆಗೆ ಯಾರ ಹೆಸರನ್ನು ಅಂತಿಮಗೊಳಿಸಿಲ್ಲ. ವಿಕ್ರಂಜಿತ್ ಸೇನ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನೂ ಪರಿಗಣಿಸುವ ಸಾಧ್ಯತೆ ಇದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿರುವ ಎಸ್.ಆರ್.ನಾಯಕ್ ಅವರು, ಕರ್ನಾಟಕ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+