ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ; ನಿಯಮ ತಿಳಿಯಿರಿ
ಬೆಂಗಳೂರು, ನವೆಂಬರ್ 28; ಕರ್ನಾಟಕ ಸರ್ಕಾರ 2024-25ನೇ ಸಾಲಿನಲ್ಲಿ ಹೊಸ 'ಕರ್ನಾಟಕ ಪಬ್ಲಿಕ್ ಶಾಲೆ'ಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಪ್ರಸ್ತುತ 285 ಕರ್ನಾಟಕ ಪಬ್ಲಿಕ್ ಶಾಲೆಗಳು ಯಶ್ವಸಿಯಾಗಿ ಸ್ಥಾಪನೆಗೊಂಡು, ಕಾರ್ಯನಿರ್ವಹಿಸುತ್ತಿವೆ.
ನಿರ್ದೇಶಕರು (ಗುಣಮಟ್ಟ) ಸಮಗ್ರ ಶಿಕ್ಷಣ, ಕರ್ನಾಟಕ ಬೆಂಗಳೂರು. ಈ ಕುರಿತು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. 2024-25 ನೇ ಸಾಲಿಗೆ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಪ್ರಸ್ತಾವನೆ ಎಂಬ ವಿಯಷವನ್ನು ಪತ್ರ ಒಳಗೊಂಡಿದೆ. ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಇವರಿಗೆ ಸೂಕ್ತ ಕ್ರಮಕ್ಕಾಗಿ ಕಳಿಸಲಾಗಿದೆ.

'ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು' ಎಂಬ ನೀತಿಯನ್ವಯ ಅಸ್ತಿತ್ವದಲ್ಲಿರುವ ಶಾಲೆಗಳ ಆಡಳಿತಾತ್ಮಕ, ಶೈಕ್ಷಣಿಕ ಮತ್ತು ಕ್ರಿಯಾತ್ಮಕ ಸಂಯೋಜನೆಯೊಂದಿಗೆ ಪೂರ್ವ ಪ್ರಾಥಮಿಕ ಶಾಲೆಯಿಂದ 12ನೇ ತರಗತಿವರೆಗೆ ಗುಣಾತ್ಮಕ ಶಿಕ್ಷಣ ನೀಡುವ ಸಲುವಾಗಿ 2018-19ನೇ ಸಾಲಿನಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ.
ಈ ಶಾಲೆಗಳಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಬೋಧನಾ ಪದ್ಧತಿಯನ್ನು ಅಳವಡಿಸಲಾಗಿದೆ ಎಂದು ಹೇಳಿದೆ. ಈ ಶಾಲೆಗಳನ್ನು ಗುಣಮಟ್ಟದ ಶಿಕ್ಷಣ ನೀಡುವ, ವಿದ್ಯಾರ್ಥಿ ಕೇಂದ್ರಿತ, ಸಮುದಾಯ ಮುಖಿ ಮತ್ತು ಸಮುದಾಯ ಬೆಂಬಲಿತ ಶಾಲೆಗಳನ್ನಾಗಿಸಿ ಉತ್ಕೃಷ್ಟತೆಯ ಕೇಂದ್ರಗಳನ್ನಾಗಿ (Centre of Excellence) ಪರಿವರ್ತಿಸುವ ಉದ್ದೇಶವಿರುತ್ತದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಪ್ರಸ್ತುತ 285 ಕರ್ನಾಟಕ ಪಬ್ಲಿಕ್ ಶಾಲೆಗಳು ಯಶ್ವಸಿಯಾಗಿ ಸ್ಥಾವನಗೊಂಡು ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರವು ಒಂದೇ ಸೂರಿನಡಿಯಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರಗೂ ಶಿಕ್ಷಣ ನೀಡುವ ಸಲುವಾಗಿ ಹಂತ-ಹಂತವಾಗಿ ಒಟ್ಟು 1000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದಲ್ಲಿ ಈಗಾಗಲೇ ಕೆಲವು ಜಿಲ್ಲೆಗಳ ಜನಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳು ಎಸ್‌ಡಿಎಂಸಿ ವತಿಯಿಂದ ಕೆಪಿಎಸ್ ಸ್ಥಾಪಿಸುವಂತೆ ಕೋರಿ ಪ್ರಸ್ತಾವನೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ 2024-25 ನೇ ಸಾಲಿಗೆ ರಾಜ್ಯದಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಈ ಮಾನದಂಡಗಳ ಅನ್ವಯ ಆರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ಈ ಮಾನದಂಡ ಹೊಂದಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಪರಿಗಣಿಸಬಹುದಾಗಿದೆ ಎಂದು ಹೇಳಿದ್ದಾರೆ.
ಮಾನದಂಡಗಳು
* ಒಂದೇ ಆವರಣದಲ್ಲಿ ಹೊಂದಿಕೊಂಡಂತೆ ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲೆ/ ಪದವಿ ಪೂರ್ವ ಕಾಲೇಜು ಇರಬೇಕು. (ಕನಿಷ್ಠ 500 ಮಕ್ಕಳ ದಾಖಲಾತಿ ಇರಬೇಕು) ಅಥವಾ ಒಂದೇ ಆವರಣದಲ್ಲಿ ಹೊಂದಿಕೊಂಡಂತೆ ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲೆ ಇರಬೇಕು. (ಕನಿಷ್ಟ 500 ಮಕ್ಕಳ ದಾಖಲಾತಿ ಇರಬೇಕು)
* ಒಂದೇ ಆವರಣದಲ್ಲಿ ಹೊಂದಿಕೊಂಡಂತೆ ಶಾಲೆಗಳು ಇಲ್ಲದ್ದಿದ್ದಲ್ಲಿ, ಸುಮಾರು 500 ಮೀ ಅಂತರದಲ್ಲಿ ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲೆ/ ಪದವಿಪೂರ್ವ ಕಾಲೇಜು ಇರಬೇಕು. (ಕನಿಷ್ಟ 500 ಮಕ್ಕಳ ದಾಖಲಾತಿ ಇರಬೇಕು)
* ಒಂದೇ ಆವರಣದಲ್ಲಿ ಹೊಂದಿಕೊಂಡಂತೆ ಶಾಲೆಗಳು ಇಲ್ಲದಿದ್ದಲ್ಲಿ, ಸುಮಾರು 500 ಮೀ. ಅಂತರದಲ್ಲಿ ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲೆ ಇರಬೇಕು. (ಕನಿಷ್ಟ 500 ಮಕ್ಕಳ ದಾಖಲಾತಿ ಇರಬೇಕು)
ಮೇಲಿನ ಮಾನದಂಡಗಳು ಇರುವ ಶಾಲೆಗಳನ್ನು ಪರಿಗಣಿಸಿ, ಅಂತಹ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ, ಮಾಹಿತಿಗಳನ್ನು ಭರ್ತಿ ಮಾಡಿ ದಿನಾಂಕ 30/11/2023ರೊಳಗೆ ಉಪನಿರ್ದೇಶಕರು (ಆಡಳಿತ) ಇವರ ದೃಢೀಕರಣದೊಂದಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್












Click it and Unblock the Notifications