ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋರ್ ಕಮಿಟಿ ಸಭೆ ಬಳಿಕೆ ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಮೇ 29ರ ನಂತರ ತೆರೆ ಬೀಳಲಿದೆ.

By Mahesh
|
Google Oneindia Kannada News

ಬೆಂಗಳೂರು, ಮೇ 29: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಸೋಮವಾರ(ಮೇ 29)ದ ನಂತರ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೋರ್ ಕಮಿಟಿ ನಿರ್ಣಾಯಕ ಸಭೆ ನಡೆಸಲಿದೆ.

ಹಾಲಿ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರು ಸಮರ್ಪಕವಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮತ್ತೊಮ್ಮೆ ಪಕ್ಷ ಮುನ್ನಡೆಸಲು ಪರಮೇಶ್ವರ ಅವರಿಗೆ ಅವಕಾಶ ಕೋರಿದ್ದಾರೆ. ಈ ನಡುವೆ ಪ್ರಬಲ ಸಮುದಾಯಗಳ ಪ್ರಭಾವಿ ಮುಖಂಡರಾದ ಡಿ.ಕೆ.ಶಿವಕುಮಾರ್, ಎಸ್.ಆರ್. ಪಾಟೀಲ್, ಎಂ.ಬಿ.ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷಗಾದಿ ರೇಸಿನಲ್ಲಿದ್ದಾರೆ.

KC Venugopal

ದಲಿತ, ಲಿಂಗಾಯತ ಹಾಗೂ ಒಕ್ಕಲಿಗರ ನಡುವೆ ಈ ಹುದ್ದೆಗೆ ಪೈಪೋಟಿ ಹೆಚ್ಚಾಗಿದ್ದು, 2018ರ ವಿಧಾನಸಭೆ ಚುನಾವಣೆ ಮುಂದಿಟ್ಟುಕೊಂಡು ಸಮರ್ಥ ನಾಯಕರೊಬ್ಬರನ್ನು ಆಯ್ಕೆ ಮಾಡುವ ಜವಾಬ್ದಾರಿ ಸದ್ಯಕ್ಕೆ ಹೈಕಮಾಂಡ್ ಮುಂದಿದೆ.

ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್‍ನ ತಳಮಟ್ಟದ ಕಾರ್ಯಕರ್ತರು ಸೇರಿದಂತೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಗೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‍ಗಾಂಧಿ, ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಹಿರಿಯ ಮುಖಂಡರಾದ ಆಸ್ಕರ್ ಫರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ, ಮಾರ್ಗರೇಟ್ ಆಳ್ವಾ, ವೀರಪ್ಪ ಮೊಯ್ಲಿ ಹಾಗೂ ತೀವ್ರ ಆಕಾಂಕ್ಷಿಗಳಾಗಿರುವ ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ್,ಎಂ.ಬಿ.ಪಾಟೀಲ್ ಅವರುಗಳೊಂದಿಗೆ ಸಭೆ ನಡೆಸಿ ಎಲ್ಲರ ಅಭಿಪ್ರಾಯ

English summary
New KPCC president likely to be announced after core committee meeting scheduled for today(May 29). Congress party in-harge in Karnataka K.C Venugopal has submitted a report to party High Command.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X